LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿಜೆಪಿ ಹಣದಿಂದ ಮತದಾರರನ್ನು ಖರೀದಿಸುತ್ತಿದೆ: ಕ್ರೇಜಿವಾಲ್

ದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ಪಕ್ಷದ ಕ್ರಮಗಳ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ. ಬಿಜೆಪಿ ಪಕ್ಷ ಮಾಡುವ ಎಲ್ಲ ಕೆಲಸಗಳನ್ನು ಮತ್ತು ಕ್ರಮಗಳನ್ನು ನೀವು ಒಪ್ಪುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ. ಬಿಜೆಪಿಯ ಕೆಲವು ಆಚರಣೆಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ ಈ ಸ್ಪಷ್ಟನೆ ನೀಡಿ ಎಂದು ಕೇಳಿದ್ದಾರೆ. ಈ ಹಿಂದೆ ಬಿಜೆಪಿ ಏನೇ ತಪ್ಪು ಮಾಡಿದ್ದರೂ ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ, ಬಿಜೆಪಿ ನಾಯಕರು ಬಹಿರಂಗವಾಗಿ ಹಣ ಹಂಚುತ್ತಿದ್ದಾರೆ ಎಂದು ಕೇಜ್ರಿವಾಲ್ ತಮ್ಮ ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಮತಗಳನ್ನು ಖರೀದಿಸುವುದನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ದಲಿತ ಮತ್ತು ಪೂರ್ವಾಂಚಲಿ ಮತಗಳಿಗೆ ದೊಡ್ಡ ಮಟ್ಟದಲ್ಲಿ ಕತ್ತರಿ ಹಾಕಲಾಗುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಸರಿ ಎಂದು ಆರೆಸ್ಸೆಸ್ ಭಾವಿಸುತ್ತದೆಯೇ? ಬಿಜೆಪಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೆಸ್ಸೆಸ್ ಭಾವಿಸುವುದಿಲ್ಲವೇ? ಎಂದು ಪತ್ರದಲ್ಲಿ ಪ್ರಶ್ನಿಸಿದ್ದಾರೆ. ಇನ್ನು ಬಿಜೆಪಿ ನಾಯಕರು ಮತದಾರರ ಪಟ್ಟಿಯನ್ನು ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಕೇಜ್ರಿವಾಲ್ ಕಳವಳ ವ್ಯಕ್ತಪಡಿಸಿದರು. ದಲಿತ ಮತ್ತು ಪೂರ್ವಾಂಚಲಿ ಮತಗಳನ್ನು (ಮತದಾರರ ಪಟ್ಟಿಯಿಂದ) ದೊಡ್ಡ ಪ್ರಮಾಣದಲ್ಲಿ ತೆಗೆದು ಹಾಕಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದು ಎಂದು ಆರೆಸ್ಸೆಸ್ ಭಾವಿಸುತ್ತದೆಯೇ? ಬಿಜೆಪಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ ಎಂದು ಆರ್‌ಎಸ್‌ಎಸ್‌ಗೆ ಅನಿಸುವುದಿಲ್ಲವೇ? ಮೋಹನ್ ಭಾಗವತ್ ಅವರಿಗೆ ಪತ್ರದ ಮೂಲಕ ಪ್ರಶ್ನಿಸಿದ್ದಾರೆ.

ಇದಕ್ಕೂ ಮುನ್ನ ಸೋಮವಾರ ಎಎಪಿ ವಕ್ತಾರ ಪ್ರಿಯಾಂಕಾ ಕಕ್ಕರ್, ಬಿಜೆಪಿ ನಾಯಕ ವಿಶಾಲ್ ಭಾರದ್ವಾಜ್ ಅವರು ಶಾದರ ಕ್ಷೇತ್ರದಲ್ಲಿ ಮತದಾರರ ಹೆಸರನ್ನು ಅಳಿಸಲು ಅರ್ಜಿಗಳನ್ನು ಸಲ್ಲಿಸಿದ್ದಾರೆ, ವಿಶೇಷವಾಗಿ ಪೂರ್ವಾಂಚಲಿ ಮತದಾರರನ್ನು ಗುರಿಯಾಗಿಸಿಕೊಂಡು ಈ ಕೆಲಸವನ್ನು ಬಿಜೆಪಿಯವರು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದರ ವಿರುದ್ಧ ನಾವು ಧ್ವನಿ ಎತ್ತಿದ್ದ ನಂತರ ಈ ಅಕ್ರಮ ಕೆಲಸವನ್ನು ನಿಲ್ಲಿಸಿದ್ದಾರೆ ಎಂದು ಹೇಳಿದರು. ಬಿಜೆಪಿ ನಾಯಕ ಪರ್ವೇಶ್ ಶರ್ಮಾ ಅವರು ನವದೆಹಲಿ ಕ್ಷೇತ್ರದಲ್ಲಿ ಮತಕ್ಕಾಗಿ ಹಣವನ್ನು ಹಂಚಿದ್ದಾರೆ ಮತ್ತು ಮತದಾರರ ಸೇರ್ಪಡೆ ಮತ್ತು ಅಳಿಸುವಿಕೆಗಾಗಿ ಚುನಾವಣಾ ಆಯೋಗಕ್ಕೆ (EC) ಸಂಘರ್ಷದ ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಬಿಜೆಪಿ ನಾಯಕರೊಬ್ಬರು ಮತದಾರರ ಹೆಸರನ್ನು ಅಳಿಸಲು ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮತದಾರರ ಹೆಸರು ಸೇರಿಸಲು ಮತ್ತೊಂದು ಅರ್ಜಿ ಇತ್ತು ಎಂದು ಆರೋಪಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು