LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಬಿಬಿಎಂಪಿ ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ ೧೨೬೯೨ ಪೌರಕಾರ್ಮಿಕರನ್ನು* ಅಂತಿಮವಾಗಿ ಆಯ್ಕೆ ಮಾಡಿ ಪಟ್ಟಿಯನ್ನು ಇಂದು ಬಿಡುಗಡೆಗೊಳಿಸಲಾಗಿದೆ ಎಂದು ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾಗಿರುವ ೧೨೬೯೨ ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿಯನ್ನು ದಿನಾಂಕ: ೦೯-೧೦-೨೦೨೪ ರಂದು ಪಾಲಿಕೆ ವೆಬ್‌ಸೈಟ್ hಣಣಠಿ://bbmಠಿ.gov.iಟಿ/home ನಲ್ಲಿ ಪ್ರಕಟಿಸುವ ಜೊತೆಗೆ, ಆಯಾ ವಲಯಜಂಟಿ ಆಯುಕ್ತರು ರವರ ಕಛೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಯಲ್ಲೂ ಸಹ ಪಟ್ಟಿಯನ್ನು ಪ್ರಕಟಿಸಿ, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.
ಅದರಂತೆ, ವಲಯವಾರು ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಕ್ರಮವಹಿಸಿ ಅಂತಿಮವಾಗಿ ೧೨೬೯೨ ಸಂಖ್ಯೆಯ ಪೌರಕಾರ್ಮಿಕರನ್ನು ಆಯ್ಕೆ ಮಾಡಿ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸದರಿ ಅಂತಿಮ ಆಯ್ಕೆ ಪಟ್ಟಿಯನ್ನು ಆಯಾ ವಲಯ ಜಂಟಿ ಆಯುಕ್ತರು ರವರ ಕಛೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಯಲ್ಲಿ ಪ್ರಕಟಿಸಲಾಗುವುದು. ಅಲ್ಲದೆ ಪಾಲಿಕೆಯ ವೆಬ್‌ಸೈಟ್ ನಲ್ಲೂ ಸಹ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಪೌರಕಾರ್ಮಿಕರ ಹುದ್ದೆಗೆ ಆಯ್ಕೆಯಾಗಿರುವವರು ಯಾವುದೇ ಆಸೆ/ ಆಮಿಷಗಳಿಗೆ ಒಳಗಾಗಬಾರದು ಹಾಗೂ ಮಧ್ಯವರ್ತಿಗಳ ಮಾತುಗಳನ್ನು ಕೇಳಿ ವಂಚನೆಗಳಿಗೆ ಒಳಗಾಗಬಾರದು. ಸದರಿ ಅಂತಿಮ ಆಯ್ಕೆ ಪಟ್ಟಿಯ ವಿವರಣೆ ಅಥವಾ ಮಾಹಿತಿಗಾಗಿ ತಮ್ಮ ವ್ಯಾಪ್ತಿಗೆ ಒಳಪಡುವ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಗೆ ನೇರವಾಗಿ ಭೇಟಿ ನೀಡಿ ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು