LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

 ಬಿವೈ ವಿಜಯೇಂದ್ರ ಅವರು 150 ಕೋಟಿ ರೂ. ಆಮಿಷವೊಡ್ಡಿದ ಗ್ಗೆ ಅನ್ವರ್ ಮಾಣಿಪ್ಪಾಡಿ ಅವರು ರಾಜಕೀಯ ಒತ್ತಡದಿಂದ ಯೂ ಟರ್ನ್ ಹೊಡೆದಿದ್ದಾರೆ: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು 150 ಕೋಟಿ ರೂ. ಆಮಿಷವೊಡ್ಡಿದ ಬಗ್ಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರು ರಾಜಕೀಯ ಒತ್ತಡದಿಂದ ಯೂ ಟರ್ನ್ ಹೊಡೆದಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು  ಹೇಳಿದ್ದಾರೆ.

ಇಂದು ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ವರ್ ಮಾಣಿಪ್ಪಾಡಿ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ನೋಡಿದ್ದೇನೆ. ಪ್ರಧಾನಿ ಮತ್ತು ಗೃಹ ಸಚಿವರಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದ್ದರು. ಅವರು ಹೇಳಿರುವ ವಿಚಾರಗಳನ್ನು ಮುಖ್ಯಮಂತ್ರಿಗಳು ಟ್ವೀಟ್‌ನಲ್ಲಿಯೂ ಉಲ್ಲೇಖಿಸಿದ್ದಾರೆ. ಈ ದಾಖಲೆಗಳು ಎಲ್ಲೂ ಹೋಗಲು ಸಾಧ್ಯವಿಲ್ಲ. ನಾವು ದಾಖಲೆ ಬಿಡುಗಡೆ ಮಾಡುವ ಮುನ್ನ ಅವರೇ ಈ ದಾಖಲೆಗಳನ್ನು ಬಿಡುಗಡೆ ಮಾಡಲಿ" ಎಂದರು.

ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂಬ ಸಿಎಂ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ಎಲ್ಲ ಸಂಗತಿಗಳು ನಮ್ಮ ಮುಂದಿವೆ. ಸಿಬಿಐ ತನಿಖೆಗೆ ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಿ. ಆಮೇಲೆ ಯೋಚಿಸುತ್ತೇವೆ. ಈ ವಿಷಯ ಸಿಬಿಐಗೆ ಗೊತ್ತಿದ್ದು, ಸಿಬಿಐ ತನಿಖೆಗೆ ಮುಂದಾಗಲಿ ಎಂದರು.

ಈ ವಿಚಾರವಾಗಿ ಯಾಕೆ ಗೊಂದಲ ಮಾಡಲಾಗುತ್ತಿದೆ ಎಂದು ಕೇಳಿದಾಗ, "ಗೊಂದಲ ಮಾಡುತ್ತಿರುವವರು ನೀವು. ಅವರ ಹೇಳಿರುವ ಮಾತನ್ನು ನೀವು ಪ್ರಕಟಿಸಿದ್ದೀರಿ. ಈ ವಿಚಾರವನ್ಮು ಸಿಎಂ ಟ್ವೀಟ್ ಮಾಡಿದ್ದಾರೆ. ಈ ವಿಚಾರ ಮುಚ್ಚಿಕೊಳ್ಳಲು ಅವರಿಂದ ವಿಭಿನ್ನ ಹೇಳಿಕೆ ಕೊಡಿಸಲಾಗಿದೆ. ಅವರು ಹೇಳಿಕೆ ನೀಡಿರುವುದು ಸತ್ಯ. ಬೇಕಾದರೆ ಅವರ ಧ್ವನಿ ನೀವೇ ಪರಿಶೀಲಿಸಿ" ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಕಾಂಗ್ರೆಸ್ ನಾಯಕರು ತಮಗೆ ಆಫರ್ ಕೊಟ್ಟಿದ್ದಾರೆ ಎಂಬ ಅನ್ವರ್ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ‘ಈ ವಿಚಾರವನ್ನು ಹಿಂದೆಯೇ ಹೇಳಬೇಕಿತ್ತು, ಈಗ ಹೇಳಿದರೆ ಏನು ಪ್ರಯೋಜನ? ಅಧಿಕಾರ ಇದ್ದಾಗ ಏನು ಹೇಳುತ್ತೇವೆ ಎಂಬುದು ಮುಖ್ಯ" ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು