LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪಶ್ಚಿಮ ವಲಯದ ಮತ್ತಿಕೆರೆ ಮತ್ತು ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು.

ನಗರದ ಪಶ್ಚಿಮ ವಲಯದ ಮತ್ತಿಕೆರೆ ಹಾಗೂ ಮಲ್ಲೇಶ್ವರಂ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅನ್ನು ಪ್ರಾಯೋಗಿಕವಾಗಿಅಳವಡಿಸಲಾಗುತ್ತಿದ್ದು, ಮೈಕ್ರೋ ಚಿಪ್ ತಂತ್ರಜ್ಞಾನದಿಂದ ನಾಯಿಯ ವಾಸಸ್ಥಳ, ಲಸಿಕೆ ನೀಡಿದ ದಿನಾಂಕ, ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ ದಿನಾಂಕ ಹಾಗೂ ಇನ್ನಿತರ ಅಂಶಗಳನ್ನು ಶಾಶ್ವತವಾಗಿ ಅದರಲ್ಲಿ ಶೇಖರೀಡಿಸಬಹುದಾಗಿರುತ್ತದೆ.

ಮೈಕ್ರೋ ಚಿಪ್ ತಂತ್ರಜ್ಞಾನವನ್ನು ಈಗಾಗಲೇ ಹಲವಾರು ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳಿಗೆ ಅಳವಡಿಸಿಕೊಂಡಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ BIZ ORBIT ಎಂಬ ಸಂಸ್ಥೆಯ ಸಹಯೋಗದೊಂದಿಗೆ ಪ್ರಾಯೋಗಿಕವಾಗಿ ಬೀದಿ ನಾಯಿಗಳಿಗೆ ಅಳವಡಿಕೆ ಮಾಡಲಾಗುತ್ತಿದೆ.

ಅಕ್ಕಿಕಾಳು ಗಾತ್ರದ ಮೈಕ್ರೋ ಚಿಪ್ ಅಳವಡಿಕೆ:
ಮೈಕ್ರೋಚಿಪ್ ಒಂದು ಅಕ್ಕಿಕಾಳು ಗಾತ್ರದ ಸಾಧನವಾಗಿದ್ದು, ಪ್ರಾಣಿಗಳಲ್ಲಿ ಶಾಶ್ವತ ಗುರುತಿನ ವಿಧಾನವಾಗಿರುತ್ತದೆ. ಇದನ್ನು ಪ್ರಾಣಿಗಳ ಚರ್ಮದ ಕೆಳಗೆ ಇಂಜೆಕ್ಷನ್ ಮೂಲಕ ಇರಿಸಲಾಗುವುದು. ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಬೀರುವುದಿಲ್ಲ ಮತ್ತು ಇದು ಪ್ರಾಣಿಗಳ ಜೀವನ
ಪರ್ಯಂತ ಶಾಶ್ವತ ಗುರುತಾಗಿ ಬಳಸಬಹುದಾ ಗಿರುತ್ತದೆ. ಇದು ಪ್ರಪಂಚದಾದ್ಯಂತ ಬಳಸಲಾಗುವ ಯೂನಿಕ್ ಸಂಖ್ಯೆಯಾಗಿರುತ್ತದೆ.

ಯಶಸ್ವಿಯಾದರೆ ಇರತೆ ವಲಯಗಳಲ್ಲೂ ಅಳವಡಿಕೆ:

ಪ್ರಾಯೋಗಿಕ ಮೈಕ್ರೋ ಚಿಪ್ ಅಳವಡಿಸುವ ಕಾರ್ಯ ಯಶಸ್ವಿಯಾದರೆ, ಅದನ್ನು ಪಾಲಿಕೆಯ ಎಲ್ಲಾ ವಲಯಗಳಲ್ಲಿಯೂ ಬೀದಿ ನಾಯಿಗಳಿಗೆ ಅಳವಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪಾಲಿಕೆ ವತಿಯಿಂದ ಬೀದಿ ನಾಯಿಗಳಿಗೆ ಸಂಯೋಜಿತ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಿದ್ದು, ಮೈಕ್ರೋ ಚಿಪ್ ಅಳವಡಿಸುವ ತಂತ್ರಜ್ಞಾನದಿಂದ ಬೀದಿ ನಾಯಿಗಳಿಗೆ ಮತ್ತೆ-ಮತ್ತೆ ಲಿಸಿಕೆ ಹಾಕುವುದನ್ನು ತಡೆಯಬಹುದಾಗಿರುತ್ತದೆ.

ಪ್ರಸ್ತುತ ಬಣ್ಣ ಬಳಸಿ ಗುರುತಿಸಲಾಗುತ್ತಿದೆ:

ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಲಸಿಕೆ ಹಾಕಿದ ಬೀದಿನಾಯಿಗಳಿಗೆ ಬಣ್ಣವನ್ನು ಬಳಸಿ ಗುರುತಿಸಲಾಗುತ್ತಿದ್ದು, ಒಂದು ವಾರ ಮಾತ್ರ ಬಣ್ಣದ ಗುರುತು ಪತ್ತೆಹಚ್ಚಬಹುದಾಗಿರುತ್ತದೆ. ಆದುದರಿಂದ ಬೀದಿನಾಯಿಗಳಿಗೆ ಪದೇ ಪದೇ ಲಸಿಕೆ ಹಾಕುವ ಸಾಧ್ಯತೆಯಿರುತ್ತದೆ. ಮೈಕ್ರೋ ಚಿಪ್ ತಂತ್ರಜ್ಞಾನದಿಂದ ಈ ನ್ಯೂನತೆಯನ್ನು ಸರಿಪಡಿಸಬಹುದಾಗಿರುತ್ತದೆ ಹಾಗು ನಾಯಿಗಳಲ್ಲಿ ಲಸಿಕೆ ಹಾಕಿರುವ ಮಾಹಿತಿಯನ್ನು ನಿಖರವಾಗಿ ತಿಳಿಯಬಹುದಾಗಿರುತ್ತದೆ.

ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅಳವಡಿಸುವ ಕಾರ್ಯದಿಂದ, ಬೀದಿ ನಾಯಿಗಳ ನಿಖರವಾದ ಮಾಹಿತಿಯನ್ನು ಪಡೆಯಬಹುದಾಗಿದೆ. ಅಲ್ಲದೆ ಬೀದಿ ನಾಯಿಗಳಿಗೆ ಮತ್ತೆ-ಮತ್ತೆ ಲಸಿಕೆ ಹಾಕುವುದನ್ನು ತಡೆಯಬಹುದಾಗಿರುತ್ತದೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು