LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಬುಲ್ಸ್‍ಗೆ ಭಾರೀ ಅಂತರದ ಸೋಲು: ಪಾಟ್ನಾಗೆ ಜಯ

ರಕ್ಷಣಾ ಆಟಗಾರರು ಸ್ಥಿರ ಪ್ರದರ್ಶನ ನೀಡಿದರೂ ಸಹ ರೈಡರ್‍ಗಳು ಅಂಕಗಳನ್ನು ಕಲೆ ಹಾಕುವಲ್ಲಿ ಹಿಂದೆ ಬಿದ್ದಿದ್ದರಿಂದ ಬೆಂಗಳುರು ಬುಲ್ಸ್ 11ನೇ ಆವೃತ್ತಿಯ ಪ್ರೊ ಕಬಡ್ಡಿಯಲ್ಲಿ ಮತ್ತೊಂದು ಸೋಲು ಕಂಡಿದೆ. ಮಂಗಳವಾರ ನಡೆದ 64ನೇ ಪಂದ್ಯದಲ್ಲಿ ಬೆಂಗಳೂರು 31-54 ಅಂಕಗಳಿಂದ ಪಾಟ್ನಾ ಪೈರೇಟ್ಸ್ ವಿರುದ್ಧ ಭಾರೀ ಅಂತರದ ಸೋಲು ಕಂಡಿದೆ.

ಈ ಮೂಲಕ ಬೆಂಗಳೂರು ಬುಲ್ಸ್ ಅಂಕ ಪಟ್ಟಿಯಲ್ಲಿ ಮೇಲೆಳುವ ಆಸೆಗೆ ಪೆಟ್ಟು ಬಿದ್ದಿದೆ.ಮೊದಲಾವಧಿಯ ಆರಂಭದಿಂದಲೂ ಪಾಟ್ನಾ ಪಂದ್ಯದ ಮೇಲೆ ಹಿಡಿತ ಸಾಧಿಸುತ್ತಾ ಸಾಗಿತು. ಈ ವೇಳೆ ಬುಲ್ಸ್ ಅಂಕಗಳನ್ನು ಕಲೆ ಹಾಕುವಲ್ಲಿ ಹಿಂದೆ ಬಿದ್ದಿತು. ಬೆಂಗಳೂರು ತಂಡದ ರೈಡರ್‍ಗಳು ಆಕ್ರಮಣಕಾರಿ ಆಟವನ್ನು ಆಡಲಿಲ್ಲ. ಮೊದಲಾವಧಿಯಲ್ಲಿ ಬೆಂಗಳೂರು ಕೇವಲ 2 ಅಂಕಗಳನ್ನು ಮಾತ್ರ ಕಲೆ ಹಾಕಿತು, ಈ ವೇಳೆ ರಕ್ಷಣಾ ವಿಭಾಗದ ಆಟ ಮನಮೋಹಕವಾಗಿತ್ತು. ಈ ವೇಳೆಯ 13ನೇ ನಿಮಿಷದಲ್ಲಿ ಬೆಂಗಳೂರು ಒಮ್ಮೆ ಆಲೌಟ್ ಆಯಿತು. ಮೊದಲ 20 ನಿಮಿಷದಲ್ಲಿ ಪಾಟ್ನಾ 20-13 ಅಂಕಗಳಿಂದ ಮುನ್ನಡೆ ಸಾಧಿಸಿತು.

ಎರಡನೇ ಅವಧಿಯ ಆಟದಲ್ಲಿ ಪಾಟ್ನಾ ಸಹ 34-18 ಅಂಕಗಳಿಂದ ಮುನ್ನಡೆ ಸಾಧಿಸಿ ಸುಲಭ ಜಯ ಸಾಧಿಸಿತು. ಪರಾಜಿತ ತಂಡದ ಪರ ದೇವಾಂಕ್ 16, ಅಯಾನ್ 12 ಅಂಕಗಳನ್ನು ಕಲೆ ಹಾಕಿ ಮಿಂಚಿದರು.ಯು.ಪಿ, ಪುಣೇರಿ ಪಂದ್ಯ ಟೈಮೊದಲ ಪಂದ್ಯದಲ್ಲಿ ಪುಣೇರಿ ಹಾಗೂ ಯುಪಿ ಯೋಧಾಸ್ ತಂಡಗಳು ಅಮೋಘ ಪ್ರದರ್ಶನವನ್ನು ನೀಡಿದ್ದು, ಅಂಕಗಳನ್ನು ಹಂಚಿಕೊಂಡಿವೆ.

ಪ್ರಸಕ್ತ ಆವೃತ್ತಿಯ 63ನೇ ಪಂದ್ಯದಲ್ಲಿ ಪುಣೇರಿ ಪಲ್ಟನ್ ಹಾಗೂ ಯುಪಿ ಯೋಧಾಸ್ ತಂಡಗಳು ತಲಾ 29 ಅಂಕಗಳನ್ನು ಕಲೆ ಹಾಕಿ ಟೈ ಸಾಧಿಸಿದವು. ಪುಣೇರಿ ಆಡಿದ 11 ಪಂದ್ಯಗಳಲ್ಲಿ 5 ಜಯ, 3 ಸೋಲು, 3 ಡ್ರಾ ಸಾಧಿಸಿದ್ದು 37 ಅಂಕಗಳನ್ನು ಹೊಂದಿದ್ದು, ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದೆ. ಈ ಟೈನಿಂದಾಗಿ ಯುಪಿ ಯೋಧಾಸ್ ಆಡಿದ 10 ಪಂದ್ಯಗಳಲ್ಲಿ 4 ಜಯ, 5 ಸೋಲು, 1 ಡ್ರಾ ದೊಂದಿಗೆ 28 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು