LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಸಂಘಟನೆ ಮಾಡಲಾಗುವುದು: ಸಿ.ವಿ.ಚಂದ್ರಸಾಗರ್

ರಾಮನಗರ : ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಸುಲಭವಾಗಿ ಗೆಲುವು ಸಾಧಿಸಲು ಪೂರಕವಾಗಿ ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಸದೃಡವಾಗಿ ಸಂಘಟನೆ ಮಾಡಲಾಗುವುದು ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ವಿ.ಚಂದ್ರಸಾಗರ್ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಯುವ ಕಾಂಗ್ರೆಸ್ ಪಕ್ಷದ ಆಂತರೀಕ ಚುನಾವಣೆ ಆನ್‍ಲೈನ್ ಮೂಲಕ ನಡೆಯಿತು. ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ ಎಲ್ಲರೂ ಸಹ ಪಕ್ಷದ ನಿಷ್ಟವಂತ ಕಾರ್ಯಕರ್ತರೇ ಆಗಿದ್ದು, ಅತೀ ಹೆಚ್ಚು ಮತ ಪಡೆದವರು ಪ್ರಮುಖ ಸ್ಥಾನಗಳಿಗೆ ಆಯ್ಕೆಯಾಗಿದ್ದಾರೆ. ನನಗೆ ಜಿಲ್ಲೆಯ ಯುವಕ, ಯುವತಿಯರು 13.970 ಮತಗಳನ್ನು ನೀಡಿ ಆರ್ಶೀವಾದ ಮಾಡಿದ್ದರಿಂದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ಆಯ್ಕೆಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ತಿಳಿಸುವುದಾಗಿ ಹೇಳಿದರು.

ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್, ಶಾಸಕರಾದ ಇಕ್ಬಾಲ್‍ಹುಸೇನ್, ಹೆಚ್.ಸಿ.ಬಾಲಕೃಷ್ಣ, ಸಿ.ಪಿ.ಯೋಗೇಶ್ವರ್, ಎಂಎಲ್ಸಿ
ಎಸ್.ರವಿ, ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ, ಯುವ ನಾಯಕ ಕೆಂಪರಾಜು ಸೇರಿದಂತೆ ಜಿಲ್ಲೆಯ ಹಿರಿಯ ಕಿರಿಯರುಗಳ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಲಾಗುವುದು. ಈಗಾಗಲೇ 31 ಸಾವಿರ ಯುವ ಕಾಂಗ್ರೆಸ್ ಸದಸ್ಯತ್ವವನ್ನು ಮಾಡಿದ್ದು, ಇದಕ್ಕೆ ಯುವ ಕಾಂಗ್ರೆಸ್ ಪ್ರಮುಖ ಕಾರಣವಾಗಿದ್ದು, ಎಲ್ಲಾ ಬ್ಲಾಕ್ ಅಧ್ಯಕ್ಷರು, ಪದಾಧಿಕಾರಿಗಳ ಸಹಕಾರದಲ್ಲಿ ಸಂಘಟನೆ ಮಾಡಲಾಗುವುದು ಎಂದರು.

ಚುನಾವಣೆಗಳಲ್ಲಿ ಸ್ಪರ್ದಿಸಲು ಯುವ ಕಾಂಗ್ರೆಸ್ ನಾಯಕತ್ವ ಮತ್ತು ಸಂಘಟನೆ ಸಹಕಾರಿ ಯಾಗುವಂತಹ ವಾತಾವರಣ ನಿರ್ಮಿಸಿ, ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ, ಅರಣ್ಯ ಬೆಳಿಸಿ ಪರಿಸರ ಸಂರಕ್ಷಣೆ ಮಾಡುವುದು, ರಕ್ತದಾನ, ಆರೋಗ್ಯ ತಪಾಸಣೆ, ಯುಪಿಎಸ್‍ಸಿ. ಕೆಪಿಎಸ್‍ಸಿ ಕೋಚಿಂಗ್ ತರಬೇತಿ, ಗ್ರಾಮೀಣ, ನಗರ ಭಾಗದಲ್ಲಿ ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳ ಆಯೋಜನೆ, ಗ್ಯಾರಂಟಿ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವುದು, ಧ್ವನಿ ಇಲ್ಲದ ಜನರಿಗೆ ನೆರವಾಗು ವಂತಹ ಹತ್ತು ಹಲವು ಕಾರ್ಯಕ್ರಮಗಳೊಂದಿಗೆ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಸಂಘಟಿಸಿ, ಪಕ್ಷ ನೀಡುವ ಜವಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.
ಸ್ಥಳೀಯ ಚುನಾವಣೆಗಳಲ್ಲಿ ಯುವಕರು ಸ್ಪರ್ಧೆ ಮಾಡಲು ಹೆಚ್ಚಿನ ಅವಕಾಶ ನೀಡುವಂತೆ ನಮ್ಮ ನಾಯಕರಲ್ಲಿ ಮನವಿ ಮಾಡಲಾಗುವುದು. ಆಯ್ಕೆಯಾಗಿರುವ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸಿದ್ದತೆ ನಡೆಯುತ್ತಿದ್ದು, ಯುವಕರ ಕಣ್ಮಣಿ ಸುರೇಶ್ ಅವರು ದಿನಾಂಕ ನೀಡಲಿದ್ದು ಅಂದು ಬೃಹತ್ ಸಂಖ್ಯೆಯಲ್ಲಿ ಯುವಕರ ಪದಾಧಿಕಾರಿಗಳ ಪದಗ್ರಹಗಣ ಮತ್ತು ಯುವ ಸಮಾವೇಶವನ್ನು ಆಯೋಜಿಸ ಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮಾತನಾಡಿ ಜಿಲ್ಲೆಯಲ್ಲಿ ಒಗ್ಗಟ್ಟಿನಲ್ಲಿ ಬಲವಿದೆ ಎಂಬುದನ್ನು ನೂತನವಾಗಿ ಆಯ್ಕೆಯಾಗಿರುವ ಎಲ್ಲ ಪದಾಧಿಕಾರಿಗಳು ಹೊಸ ಚಿಂತನೆಯೊಂದಿಗೆ ಸಂಘಟನೆ ಮಾಡುತ್ತೇವೆ. ಯಾವುದೇ ಚುನಾವಣೆಗಳಲ್ಲೂ ಸಹ ಯುವ ಕಾಂಗ್ರೆಸ್‍ನ ಮೇಲೆ ಅವಲಂಬಿತ ವಾಗರಬೇಕು. ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ ಅವರು ಗ್ರಾಮ ಪಂಚಾಯಿತಿಯಲ್ಲಿ ಯುವ ಪಡೆ ಕಟ್ಟುವಂತೆ ಸೂಚನೆ ನೀಡಿದ್ದಾರೆ. ಅವರ ಮಾತಿನಂತೆ ಎಲ್ಲರೂ ಸೇರಿ ಯುವ ಕಾಂಗ್ರೆಸ್ ಪಡೆ ಕಟ್ಟುವ ಪಣ ತೊಟ್ಟಿರುವುದಾಗಿ ಹೇಳಿದರು.
ರಾಮನಗರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಭೂಷನ್.ಜಿ ಮಾತನಾಡಿ ಎಲ್ಲರೂ ಒಗ್ಗೂಡಿ ಪಕ್ಷ ಸಂಘಟಿಸುವ ಮೂಲಕ ಕಾಂಗ್ರೆಸ್ ಪಕ್ಷದ ನೆಲೆಯನ್ನು ಗಟ್ಟಿಗೊಳಿಸುವ ಸಂಕಲ್ಪ ನಮ್ಮದಾಗಿದ್ದು, ಪಕ್ಷ ಸಂಘಟಿಸುವುದು ನಮ್ಮೆಲ್ಲರ ಗುರಿಯಾಗಿದೆ ಎಂದರು.

ಸುದ್ದಿಗೋಷ್ಟಿಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಜನಾರ್ಧನ್, ಚನ್ನಪಟ್ಟಣ ವಿಧಾನಸಭಾ ಅಧ್ಯಕ್ಷ ಸುಜಯ್‍ಕುಮಾರ್, ಮಾಗಡಿ ವಿಧಾನಸಭಾ ಅಧ್ಯಕ್ಷ ವಿನಯ್‍ಗೌಡ, ಕನಕಪುರ ವಿಧಾನಸಭಾ ಅಧ್ಯಕ್ಷ ಸಿದ್ದುಗೌಡ, ರಾಮನಗರ ವಿಧಾನಸಭಾ ಅಧ್ಯಕ್ಷ ಭೂಷನ್, ರಾಮನಗರ ಟೌನ್ ಬ್ಲಾಕ್ ಅಧ್ಯಕ್ಷ ಮುಶೀರ್.ಎಂ, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ರಾಮು, ಬಿಡದಿ ಬ್ಲಾಕ್ ಅಧ್ಯಕ್ಷ ಪೃಥ್ವಿರಾಜು, ಸಾತನೂರು ಬ್ಲಾಕ್ ಅಧ್ಯಕ್ಷ ರುದ್ರೇಶ್, ಕನಕಪುರ ಬ್ಲಾಕ್ ಅಧ್ಯಕ್ಷ ಶಿವಕುಮಾರ್, ಮಾಗಡಿ ಬ್ಲಾಕ್ ಅಧ್ಯಕ್ಷ ಪ್ರವೀಣ್, ಹಾರೋಹಳ್ಳಿ ಬ್ಲಾಕ್ ಅಧ್ಯಕ್ಷ ಪುನೀತ್‍ಕುಮಾರ್, ಚನ್ನಪಟ್ಟಣ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಶಿವಕುಮಾರ್, ಟೌನ್ ಬ್ಲಾಕ್ ಅಧ್ಯಕ್ಷ ಪ್ರದೀಪ್‍ಕುಮಾರ್ ಮತ್ತಿತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು