LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಬೆಂಗಳೂರಿನಲ್ಲಿ ಬೃಹತ್ ಕ್ಯಾಲಿಪರ್ಸ್ ಜೋಡಣಾ ಶಿಬಿರ ಜಿಲ್ಲೆಯ ವಿಶೇಷಚೇತನ ಫಲಾನುಭವಿಗಳು ತೆರಳುವ ವಾಹನಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಲನೆ

ಚಾಮರಾಜನಗರ: ಪೋಲಿಯೋ ಪೀಡಿತರಿಗೆ ಉಚಿತ ಕೃತಕ ಕಾಲು ಮತ್ತು ಮುಂಗೈ (ಕ್ಯಾಲಿಪರ್ಸ್) ಜೋಡಣಾ ಶಿಬಿರಕ್ಕೆ ತೆರಳುತ್ತಿರುವ ಜಿಲ್ಲೆಯ ಫಲಾನುಭವಿಗಳ ವಾಹನಕ್ಕೆ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.

ಪೋಲಿಯೋ ಪೀಡಿತರಿಗಾಗಿ ಕೃತಕ ಕಾಲು ಮತ್ತು ಮುಂಗೈಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಇದಕ್ಕಾಗಿ ಜೈಪುರದ ಶ್ರೀ ಭಗವಾನ್ ಮಹಾವೀರ ವಿಕಲಾಂಗ ಸಹಾಯ ಸಮಿತಿ ಹಾಗೂ ಬೆಂಗಳೂರು ರೋಟರಿ ಸಂಸ್ಥೆಯ ವತಿಯಿಂದ ಬೆಂಗಳೂರಿನ ಶಿವಾಜಿನಗರದ ಇನ್‍ಫೆಂಟ್ರಿ ರಸ್ತೆಯಲ್ಲಿ ಆಯೋಜಿಸಲಾಗಿರುವ ಬೃಹತ್ ಜೋಡಣಾ ಶಿಬಿರಕ್ಕೆ ಕ್ಯಾಲಿಪರ್ಸ್ ಅಗತ್ಯವಿರುವ ಜಿಲ್ಲೆಯ ವಿಶೇಷಚೇತನ ಫಲಾನುಭವಿಗಳನ್ನು ಕರೆದೊಯ್ಯಲಾಗುತ್ತಿರುವ ಬಸ್‍ಗೆ ನಗರದ ರೋಟರಿ ಸಂಸ್ಥೆಯ ಮುಂಭಾಗದಲ್ಲಿಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಹಸಿರು ನಿಶಾನೆ ತೋರಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ನಗರದ ವಿಕಲಚೇತನರ ಪುನರ್ವಸತಿ ಕೇಂದ್ರ, ಗ್ರೀನ್ ಸಂಸ್ಥೆ ಹಾಗೂ ಚಾಮರಾಜನಗರ ರೋಟರಿ ಸಂಸ್ಥೆಯ ಸಹಯೋಗದಲ್ಲಿ ಬೃಹತ್ ಜೋಡಣಾ ಶಿಬಿರಕ್ಕೆ ಚಾಮರಾಜನಗರ ಜಿಲ್ಲೆಯಿಂದ 55 ಮಂದಿ ವಿಶೇಷಚೇತನ ಫಲಾನುಭವಿಗಳು ಹೊರಡಲು ವ್ಯವಸ್ಥೆ ಮಾಡಲಾಗಿದ್ದ ವಾಹನಕ್ಕೆ ಶಾಸಕರು ಚಾಲನೆ ನೀಡಿ ಶುಭ ಹಾರೈಸಿದರು.

ಇದೇ ವೇಳೆ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಪೋಲಿಯೋ, ಅಂಧತ್ವ ನಿರ್ಮೂಲನೆಗಾಗಿ ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಸಮಾಜಮುಖಿ ಕಾರ್ಯ
ವನ್ನು ನಿರಂತರವಾಗಿ ಹಮ್ಮಿ ಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ ರೋಟರಿಸಂಸ್ಥೆಯ ಸಮಾಜ ಸೇವಾ ಕಾರ್ಯ ಇತರೆ ಸಂಸ್ಥೆಗಳಿಗೂ ಮಾದರಿಯಾಗಿದೆ. ಕಣ್ಣಿನ ತಪಾಸಣೆ ಶಿಬಿರ, ರಕ್ತದಾನ ಶಿಬಿರ, ಉಚಿತ ಡಯಾಲಿಸಿಸ್, ಆರೋಗ್ಯ, ಶಿಕ್ಷಣ, ಪರಿಸರಸಂರಕ್ಷಣೆ ಸೇರಿದಂತೆ ಹಲವು ಏರ್ಪಡಿಸುತ್ತಿರುವ ರೋಟರಿಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದರು.

ಜಿಲ್ಲಾ ಅಂಗವಿಕಲ ಕ್ಷೇಮಾಭಿವೃದ್ದಿ ಸಮಿತಿ ಅಧ್ಯಕ್ಷರಾದ ಎಂ. ರಮೇಶ್, ಡಿಡಿಆರ್‍ಸಿ ನೋಡಲ್ ಅಧಿಕಾರಿ ವೆಂಕಟೇಶ್, ರೋಟರಿ ಅಧ್ಯಕ್ಷರಾದ ರಾಮಸಮುದ್ರ ನಾಗರಾಜು, ಕಾರ್ಯದರ್ಶಿ ಹೆಚ್.ಎಂ. ಗುರುಸ್ವಾಮಿ, ಕಾಗಲವಾಡಿ ಚಂದ್ರು, ಕೆಂಪನಪುರ ಸಿದ್ದರಾಜು, ಕೆ.ಎಂ.ಮಹದೇವಸ್ವಾಮಿ, ಅಬ್ದುಲ್ ಅಜೀಜ್ ದೀನಾ, ಗ್ರೀನ್ ಸಂಸ್ಥೆ ಕಾರ್ಯದರ್ಶಿ ಮಹದೇವಸ್ವಾಮಿ, ಇತರರು ಇದೇ ಸಂದರ್ಭದಲ್ಲಿ ಇದ್ದರು

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು