LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಬೆಂಗಳೂರಿನಲ್ಲಿ ಮಳೆ ಹಾನಿ ತಡೆಗಟ್ಟಲು 5,000 ಕೋಟಿ ರೂ ಶಾಶ್ವತ ಯೋಜನೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ ಅತಿಹೆಚ್ಚು ಮಳೆಯಿಂದ ಪ್ರವಾಹ ರೀತಿಯಲ್ಲಿ ಉಂಟಾಗುವ ಅತಿವೃಷ್ಟಿಯ ಹಾನಿಯನ್ನು ತಡೆಗಟ್ಟಲು ಒಟ್ಟು 5000 ಕೋಟಿ ರೂ. ಗಳ ಶಾಶ್ವತ ಯೋಜನೆಯನ್ನು ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.

ಬೆಂಗಳೂರಿನ ಮಳೆ-ಸಂಬಂಧಿತ ಸವಾಲುಗಳಿಗೆ ಶಾಶ್ವತ ಪರಿಹಾರವನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಸಮಗ್ರ ವಿಪತ್ತು ಪರಿಹಾರ ಯೋಜನೆಯನ್ನು ಜಾರಿಗೆ ತರಲು ಸಜ್ಜಾಗಿದೆ. ಇದು ಮೂಲಸೌಕರ್ಯಗಳನ್ನು ಹೆಚ್ಚಿಸಲು ಮತ್ತು ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ಉತ್ತಮಗೊಳಿಸಲು 5,000 ಕೋಟಿ ರೂಪಾಯಿಗಳ ಹೂಡಿಕೆ ಒಳಗೊಂಡಿದೆ. ರಾಜ್ಯದಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಇದೇ ರೀತಿಯ ಸಮಸ್ಯೆಗಳನ್ನು ಪರಿಹರಿಸಲು 425 ಕೋಟಿ ರೂಪಾಯಿಗಳನ್ನು ಮೀಸಲಿರಿಸಿದೆ. ಶುಕ್ರವಾರ ವಿಧಾನಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮುಂಗಾರು ಮತ್ತು ಖಾರಿಫ್ ಹಂಗಾಮಿನಲ್ಲಿ ಅಕಾಲಿಕ ಮತ್ತು ಅನಿಯಮಿತ ಮಳೆಯಿಂದ ಬೆಳೆಗಳು, ಜಾನುವಾರುಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಪರಿಣಾಮ ಬೀರುವ ಹಾನಿಯ ಕುರಿತು ಯೋಜನೆ ಕುರಿತು ವಿವರಗಳನ್ನು ನೀಡಿದರು. 5,000 ಕೋಟಿ ರೂ.ಗಳಲ್ಲಿ, ವಿಶ್ವಬ್ಯಾಂಕ್‌ನಿಂದ 3,000 ಕೋಟಿ ರು. ಸಾಲವನ್ನು ಪಡೆಯಲು ಸರ್ಕಾರ ಉದ್ದೇಶಿಸಿದೆ.

ಬೆಂಗಳೂರಿನಲ್ಲಿ ಮಳೆ ಬಂದಾಗ ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ 5 ಸಾವಿರ ಕೋಟಿ ರೂ.ವೆಚ್ಚದಲ್ಲಿ ಶಾಶ್ವತ ಪರಿಹಾರ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ ಎಂದು ಹೇಳಿದರು. ಬೃಹತ್ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು ಒಂದು ಬಾರಿಯ ಶಾಶ್ವತ ಕಾಮಗಾರಿ ಕೈಗೊಳ್ಳಲು ವಿಶ್ವಬ್ಯಾಂಕ್ ನೆರವು ಪಡೆಯುವ ನಿಟ್ಟಿನಲ್ಲಿ ಈಗಾಗಲೆ 10 ಸುತ್ತಿನ ಸಭೆಗಳನ್ನು ನಡೆಸಲಾಗಿದೆ. ವಿಶ್ವಬ್ಯಾಂಕ್‌ನಿಂದ 3,000 ಕೋಟಿ ರೂ. ಸಾಲ ಪಡೆದು, ಬಿಬಿಎಂಪಿ ಮೂಲಕ 2,000 ಕೋಟಿ ರೂ. ವೆಚ್ಚದಲ್ಲಿ ಎಲ್ಲ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ ಎಂದರು.

ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳಲ್ಲಿ ಒಳಚರಂಡಿ ವ್ಯವಸ್ಥೆ ಇರದ ಕಡೆ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ರೂಪಿಸಿ, ಸದರಿ ಒಳಚರಂಡಿ ನೀರು ನೇರವಾಗಿ ಸೀವೆಜ್ ಟ್ರೀಟ್‌ಮೆಂಟ್ ವಾಟರ್ ಲೈನ್‌ಗೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಈ ಕಾರ್ಯಕ್ಕೆ ಬೆಂಗಳೂರು ಜಲಮಂಡಳಿಗೆ 1 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ. ಇನ್ನಿತರೆ ಕಾಮಗಾರಿಗಳಿಗಾಗಿ 2 ಸಾವಿರ ಕೋಟಿ ರೂ. ಗಳನ್ನು ವೆಚ್ಚ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಇನ್ನುಳಿದ, 2,000 ಕೋಟಿ ರೂ. ಗಳನ್ನು ರಾಜ್ಯ ಸರ್ಕಾರ ಭರಿಸಲು ನಿರ್ಧರಿಸಲಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದ ಪದೇ ಪದೇ ಹಾನಿಗೀಡಾಗುವ ಪ್ರಮುಖ ರಸ್ತೆಗಳನ್ನು ಗುರುತಿಸಲಾಗಿದ್ದು, ಇಂತಹ ರಸ್ತೆಗಳನ್ನು ದುರಸ್ತಿಪಡಿಸಿ, ಡಾಂಬರೀಕರಣಗೊಳಿಸಲು 695 ಕೋಟಿ ರೂ. ಗಳ ಯೋಜನೆ ರೂಪಿಸಿ, ಸಚಿವ ಸಂಪುಟದ ಅನುಮೋದನೆ ಪಡೆದು ಈಗಾಗಲೇ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಒಟ್ಟಾರೆ ಬೆಂಗಳೂರಿನಲ್ಲಿ ಅತಿಯಾದ ಮಳೆಯಾದಾಗ ಹಾನಿಯಾಗುವುದನ್ನು ತಡೆಗಟ್ಟಲು ಸರ್ಕಾರ ಶಾಶ್ವತವಾದ ಯೋಜನೆಗಳನ್ನು ರೂಪಿಸಿದ್ದು, ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು