LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೆಂಗಳೂರಿನಲ್ಲಿ HMPV 8 ತಿಂಗಳ ಮಗುವಿನಲ್ಲಿ ಕಾಣಿಸಿಕೊಂಡಿರುವ ಚೀನಾ ವೈರಸ್!

ಬೆಂಗಳೂರು: ಚೀನಾದಲ್ಲಿ ಕಾಣಿಸಿಕೊಂಡು ಸಾಕಷ್ಟು ಮಂದಿಗೆ ಸಾವಿಗೆ ಕಾರಣವಾಗಿ ಭೀತಿ ಹುಟ್ಟಿಸಿರುವ ಎಚ್‍ಎಂಪಿ ವೈರಸ್ ಇದೀಗ ಬೆಂಗಳೂರಿನಲ್ಲೂ ಪತ್ತೆಯಾಗಿದೆ.
8 ತಿಂಗಳ ಮಗುವಿನಲ್ಲಿ ಎಚ್‍ಎಂಪಿ ವೈರಸ್ ಕಾಣಿಸಿಕೊಂಡಿರುವುದು ದೃಢಪಟ್ಟಿದೆ.ಮಗುವಿಗೆ ಈ ವೈರಸ್ ಹೇಗೆ ಬಂತು ಎಂಬುದರ ಬಗ್ಗೆ ಆರೋಗ್ಯ ಇಲಾಖೆ ಈ ಬಗ್ಗೆ ಪತ್ತೆ ಹಚ್ಚಲು ಮುಂದಾಗಿದೆ.

ಮಗುವಿನ ಪೋಷಕರು ಚೀನಾ ಪ್ರವಾಸ ಕೈಗೊಂಡಿದ್ದರು ಎಂಬುದರ ಬಗ್ಗೆಯೂ ಪತ್ತೆ ಹಚ್ಚಲು ಮುಂದಾಗಿದ್ದಾರೆ. ಆದರೆ ಮಗುವಿನ ಪೋಷಕರು ಚೀನಾ ಪ್ರವಾಸ ಕೈಗೊಂಡ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಮಗುವಿನ ತಂದೆ ಸಣ್ಣಪೆಟ್ಟಾಗಿರುವುದಕ್ಕೆ ಚಿಕಿತ್ಸೆಗಾಗಿ ಕರೆತಂದೆವು. ಆದರೆ ಇಷ್ಟೆಲ್ಲಾ ರದ್ಧಾಂತ ನಡೆಯುತ್ತಿದೆ ಎಂದು ತಮ್ಮ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಆರೋಗ್ಯ ಇಲಾಖೆ ಮಾತ್ರ ಈ ಸಂಬಂಧ ಈಗಾಗಲೇ ಕಟ್ಟೆಚ್ಚರ ವಹಿಸಿ ಇಂದು ಮಧ್ಯಾಹ್ನ ಆರೋಗ್ಯ ಸಚಿವ ದಿನೇಶ್‍ಗುಂಡೂರಾವ್ ನೇತೃತ್ವದಲ್ಲಿ ಇಲಾಖಾಧಿಕಾರಿಗಳ ಸಭೆ ಕರೆದು ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಮುಂದಾಗಿದ್ದಾರೆ.

ಮತ್ತೊಂದೆಡೆ ಬಿಜೆಪಿಯ ಶಾಸಕ ಡಾ. ಅಶ್ವತ್ಥನಾರಾಯಣ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಒಳ್ಳೆಯ ಆಡಳಿತ ಕೊಡ್ರಪ್ಪ ಎಂದರೆ ಕೊಡುತ್ತಿಲ್ಲ. ಎಲ್ಲದರಲ್ಲೂ ದುಡ್ಡು ಹೊಡೆಯುತ್ತಿದ್ದಾರೆ. ಕಡೆ ಪಕ್ಷ ಒಳ್ಳೆಯ ಚಿಕಿತ್ಸೆಯನ್ನಾದರೂ ಕೊಡಿ ಎಂದು ಆಗ್ರಹಪಡಿಸಿದ್ದಾರೆ.ಆರೋಗ್ಯ ಇಲಾಖೆ ವೈರಸ್ ಹರಡದಂತೆ ಮುಂಜಾಗ್ರತೆ ವಹಿಸಲು ಈಗಾಗಲೇ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದೆ.

ಟಿಸ್ಯೂ, ಕರ್ಚ್‍ಚೀಫ್ ಮರುಬಳಕೆ ಮಾಡಬಾರದು., ಕಣ್ಣು ಬಾಯಿ ಮೂಗು ಮುಟ್ಟಬಾರದು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು, ಅನಾರೋಗ್ಯ ಪೀಡಿತರ ಸಂಪರ್ಕ ಮಾಡಬಾರದು, ಟವೆಲ್, ಬಟ್ಟೆ ಮರು ಬಳಕೆ ಮಾಡುವುದಲ್ಲದೇ ಪರಸ್ಪರ ಹಂಚಿಕೊಳ್ಳಬಾರದು ಎಂದು ಎಚ್ಚರಿಕೆಯ ಸಂದೇಶ ನೀಡಿದ್ದಾರೆ.ಒಟ್ಟಾರೆ ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಎಚ್‍ಎಂಪಿ ವೈರಸ್ ಇದೀಗ ಬೆಂಗಳೂರಿನಲ್ಲೂ ಕಾಣಿಸಿಕೊಂಡಿರುವುದರಿಂದ ಜನತೆಯಲ್ಲಿ ಆತಂಕ ಮೂಡಿಸಿದೆ.ರಾಷ್ಟ್ರೀಯ ಆರೋಗ್ಯ ಇಲಾಖೆ ಸಹ ಈ ಸಂಬಂಧ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮುಂದಾಗಿದೆ.

 

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು