LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಡಿ.1ರಂದು ಸಾಹಿತಿ ಹಾಡ್ಲಹಳ್ಳಿ ನಾಗರಾಜ್‍ಗೆ ಅಭಿನಂದನೆ ಕಾರೆಕಾಯ್ ಹಡ್ಲು ಅಭಿನಂದನಾ ಕೃತಿ ಬಿಡುಗಡೆ

ಬೆಂಗಳೂರು: ಹಿರಿಯ ಸಾಹಿತಿ ಹಾಡ್ಲಹಳ್ಳಿ ನಾಗರಾಜ್ ಅವರಿಗೆ ಅಭಿನಂದನಾ ಸಮಾ ರಂಭವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಡಿ.1 ಭಾನುವಾರ ಆಯೋಜಿಸಲಾಗಿದ್ದು, ಅಂದು ಅವರ ಕುರಿತ ಅಭಿನಂದನಾ ಗ್ರಂಥವೂ ಬಿಡುಗಡೆ ಆಗಲಿದೆ.

ಪ್ರೆಸ್‍ಕ್ಲಬ್‍ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, ಇದೇ ಸಂದರ್ಭದಲ್ಲಿ ಬೇಲೂರು ರಘುನಂದನ್ ನಿರ್ದೇಶನದ ಬೆಂಕಿ ರೂಟು' ಎಂಬ ನಾಟಕದ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.ಅಂದು ಮಧ್ಯಾಹ್ನ 2 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ `ಕಾರೆಕಾಯ್ ಹಡ್ಲು' ಅಭಿನಂದನಾ ಗ್ರಂಥವನ್ನು ಸಾಹಿತಿ ಡಾ.ವಿಜಿಯಮ್ಮ ಬಿಡುಗಡೆ ಮಾಡುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಶೋತ್ತ ಬಿಳಿಮಲೆ ಅವರು ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತರ ಜಾಣಗೆರೆ ವೆಂಕಟರಮಣಯ್ಯ ಅಭಿನಂದನಾ ಮಾತುಗಳನ್ನಾಡಲಿದ್ದಾರೆ ಎಂದರು.

ಹಾಸನದಿಂದಲೇ ನಾಗರಾಜ್ ಅವರನ್ನು ಗಮನಿಸಿದ್ದೇನೆ. ಅವರು ತಮ್ಮದೇ ಆದ ಓದುಗ ವಲಯವನ್ನು ಹೊಂದಿರುವ ಸಾಹಿತಿ ಹಾಡ್ಲಹಳ್ಳಿ ನಾಗರಾಜ್ ಅವರು ಮಲೆನಾಡಿಗೆ ಮಾತ್ರ ಸೀಮಿತವಲ್ಲ, ಇಡೀ ಕನ್ನಡ ಸಾರಸ್ವತ ಲೋಕಕ್ಕೆ ಅವರ ಕೊಡುಗೆ ಗಣನೀಯವಾದದ್ದು ಎಂದರು. ಎಪ್ಪತ್ತರ ದಶಕದಿಂದಲೂ ಸಾಹಿತಿ ಕೃಷಿಯಲ್ಲಿದ್ದಾರೆ. ನಿಲುವಂಗಿಯ ಕನಸು ಕೃತಿ ನಾಟಕವಾಗಿ ಯಶಸ್ವಿ ಪ್ರದರ್ಶನ ಕಂಡಿದೆ. ಕಳೆದ 50 ವರ್ಷಗಳಿಂದಲೂ ಸಾಹಿತ್ಯ ರಚನೆ ಮಾಡಿಕೊಂಡು ಬಂದಿರುವ ಇವರಿಗೆ ಸಾಹಿತ್ಯಾಸಕ್ತರು, ಆಪ್ತರು ಎಲ್ಲರೂ ಸೇರಿ ಅಭಿನಂದನೆ ಸಲ್ಲಿಸುತ್ತಿರುವುದು ಮಹತ್ವದ ಸಂಗತಿ ಎಂದರು.

ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಉದ್ಯಮಿ ಶಿವಕುಮಾರ್ ಜಾಗಟೆ ಮಾತನಾಡಿ, ನಾವೆಲ್ಲ ಹಾಡ್ಲಹಳ್ಳಿ ನಾಗರಾಜ್ ಅವರ ಕಥೆ ಕಾದಂಬರಿಗಳನ್ನು ಓದಿ ಬೆಳೆದವರು. ಅವುಗಳಿಂದ ಸಾಕಷ್ಟು ಜೀವನ ಅನುಭವ ಹೊಂದಲು ಸಾಧ್ಯವಾಯಿತು. ನಮ್ಮಂತಹ ಹಲವಾರು ಮಂದಿಗೆ ಸ್ಪೂರ್ತಿಯಾಗಿರುವ ಮಲೆನಾಡಿನ ಹಿರಿಯರಿಗೆ ಅಭಿನಂದಿಸುವ ಕಾರ್ಯ ಖುಷಿ ಕೊಡುತ್ತದೆ ಎಂದರು.

ಕತೆಗಾರ್ತಿ ದಯಾ ಗಂಗನಘಟ್ಟ ಮಾತನಾಡಿ, ಸರ್ಕಾರ ಹಾಗೂ ಅದರ ಅಂಗ ಸಂಸ್ಥೆಗಳಿಂದ ಗುರುತಿಸಲು ಸಾಧ್ಯವಾಗದ ಸಾಹಿತಿಯೊಬ್ಬರನ್ನು ಜನಸಾಮಾನ್ಯರೇ ಗುರುತಿಸಿ ಅಭಿನಂದಿಸುತ್ತಿರುವುದು ಮಾದರಿ ಕೆಲಸವಾಗಿದೆ ಎಂದರು.ನಾಡಿನ ಎಲ್ಲಾ ಸದಭಿರುಚಿಯ ಮನಸ್ಸುಗಳು ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕಾರ್ಯಕ್ರಮ ಸಂಘಟಕ ಹಾ.ನ.ಪ್ರಸನ್ನಕುಮಾರ್ ಮನವಿ ಮಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು