LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಬೆಂಗಳೂರು ಉತ್ತರ ವಿವಿಯಿಂದ ಕ್ಯಾಲೆಂಡರ್ ಬಿಡುಗಡೆ

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕಾರ್ಯಚಟುವಟಿಕೆಗಳಿಗೆ ಲೋಪವಾಗದಂತೆ ಕಾಲಕಾಲಕ್ಕೆ ಆಯಾ ದಿನದ ಮಹತ್ವ ಮತ್ತು ಸಮಯಪ್ರಜ್ಞೆ ಮೂಡಿಸುವಲ್ಲಿ ವಿವಿ ಬಿಡುಗಡೆ ಮಾಡಿರುವ 2025ನೇ ಸಾಲಿನ ಕ್ಯಾಲೆಂಡರ್ ಹಾಗೂ ದಿನಚರಿ ಸಹಕಾರಿಯಾಗಲಿ,ಹೊಸ ವರ್ಷ ಎಲ್ಲರಿಗೂ ಹರ್ಷ ತರಲಿ ಎಂದು ವಿವಿಯ ಕುಲಪತಿ ಪ್ರೊ.ನಿರಂಜನ ವಾನಳ್ಳಿ ಹಾರೈಸಿದರು.

ಬೆಂಗಳೂರು ಉತ್ತರ ವಿವಿಯ ನಗರ ಹೊರವಲಯದ ಟಮಕದ ಆಡಳಿತ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಸ ವರ್ಷದ ವಿವಿಯ ಕ್ಯಾಲೆಂಡರ್ ಹಾಗೂ ಡೈರಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡುತ್ತಿದ್ದರು.ಬೆಂಗಳೂರು ಉತ್ತರ ವಿವಿ ತನ್ನ ಕಾರ್ಯಚಟುವಟಿಕೆಗಳಲ್ಲಿ ಪಾರದರ್ಶಕತೆ ಕಾಪಾಡಿಕೊಂಡು ಕಾರ್ಯನಿರ್ವಹಿಸುವ ಮೂಲಕ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಲೋಪವಿಲ್ಲದಂತೆ ತನ್ನ ಕೆಲಸ ಮಾಡಿಕೊಂಡು ಬಂದಿದೆ, ಇದಕ್ಕೆ ಎಲ್ಲಾ ಸಿಂಡಿಕೇಟ್ ಸದಸ್ಯರು, ಸಿಬ್ಬಂದಿ ಸಹಕಾರ ನೀಡುತ್ತಿದ್ದಾರೆ ಎಂದರು.

ಹೊಸ ವರ್ಷದಲ್ಲಿ ವಿವಿಯಿಂದ ಮತ್ತಷ್ಟು ಹೊಸ ಹೊಸ ಆಲೋಚನೆಗಳು, ಕಾರ್ಯಕ್ರಮಗಳನ್ನು ಮೂಡಿ ಬರುವಂತೆ ಮಾಡಲು ಎಲ್ಲರ ಸಹಕಾರ ಕೋರಿದ ಅವರು, ನೂತನ ವರ್ಷ ಎಲ್ಲರಿಗೂ ಶುಭ ತರಲಿ, ವಿವಿಯ ಕ್ಯಾಂಪಾಸ್ ಶೀಘ್ರ ಲೋಕಾರ್ಪಣೆಯಾಗಲಿ ಎಂದು ಆಶಿಸಿದರು.ಈ ನಡುವೆ `ಇಂಡಿಯಾ ಫಾರ್ ಐಎಎಸ್' ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಇಚ್ಚಿಸುವ ಬೆಂಗಳೂರು ಉತ್ತರ ವಿವಿಯ ಎಲ್ಲಾ ಸಂಯೋಜಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್ ಸೌಲಭ್ಯ ಒದಗಿಸುವ ಒಪ್ಪಂದಕ್ಕೂ ಸಹಿ ಹಾಕಿದ್ದು, ಹೊಸ ವರ್ಷದಲ್ಲಿ ಎಲ್ಲ ವಿದ್ಯಾರ್ಥಿಗಳಿಗೂ ಇ ಸೌಲಭ್ಯ ಸಿಗಲಿ ಅವರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು.

`ಇಂಡಿಯಾ ಫಾರ್ ಐಎಎಸ್' ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಿದ್ದು, ಕಲಿಕೆಗೆ ಅಗತ್ಯವಾದ ಪಠ್ಯವಸ್ತು, ಕಲಿಕಾ ಮೆಟಿರಿಯಲ್‍ಅನ್ನು ಆನ್‍ಲೈನ್ ಮೂಲಕ ವಿದ್ಯಾರ್ಥಿಗಳಿಗೆ ತಲುಪಿಸಲಿದೆ ಎಂದು ತಿಳಿಸಿದರು.ಇದೇ ಮತ್ತಷ್ಟು ಹೊಸ ಹೊಸ ಕಾರ್ಯಕ್ರಮಗಳನ್ನು ವಿವಿ ಅಳವಡಿಸಿಕೊಳ್ಳುವ ಪ್ರಯತ್ನ ನಡೆಸಿದೆ ಎಂದ ಅವರು, ವಿದ್ಯಾರ್ಥಿಗಳು ಉತ್ತಮ ಸಾಧನೆಯ ಮೂಲಕ ವಿವಿಗೆ ಉತ್ತಮ ಹೆಸರು ತರಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಉತ್ತರ ವಿವಿ ಸಿಂಡಿಕೇಟ್ ಸದಸ್ಯರಾದ ಸೀಸಂದ್ರ ಗೋಪಾಲಗೌಡ,ಅರ್ಬಾಸ್, ಜೈದೀಪ್, ಸಹನಾ, ಬಸವರಾಜ್, ವೆಂಕಟೇಶಪ್ಪ, ನಿರೂಪ್,
ಕುಲಸಚಿವರಾದ ಡಾ.ತಿಪ್ಪೇಸ್ವಾಮಿ, ಡಾ.ಕುಮುದಾ, ವಿವಿಯ ವಿತ್ತಾಧಿಕಾರಿ ವಸಂತಕುಮಾರ್, ಶ್ರೀನಿವಾಸರಾವ್ ಮತ್ತಿತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು