LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶೀಘ್ರವೇ ಸಂಪೂರ್ಣ ಸರ್ವೀಸ್ ರಸ್ತೆ ನಿರ್ಮಾಣ!

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ನಿರ್ಮಾಣ ಆದಾಗಿನಿಂದಲೂ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಇನ್ನು ಈ ಹೆದ್ದಾರಿಯಲ್ಲಿ ಪ್ರಯಾಣಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಶೀಘ್ರದಲ್ಲೇ, ಬೆಂಗಳೂರು-ಮೈಸೂರು ಪ್ರವೇಶ ನಿಯಂತ್ರಿತ ಹೆದ್ದಾರಿಯ ಸರ್ವಿಸ್ ರಸ್ತೆಯ ಬಳಕೆದಾರರು ಪಟ್ಟಣಗಳಿಗೆ ದೀರ್ಘ ತಿರುವುಗಳನ್ನು ತೆಗೆದುಕೊಳ್ಳುವ ಅಗತ್ಯವಿಲ್ಲ.

ಬೆಂಗಳೂರು-ಮೈಸೂರು ಹೆದ್ದಾರಿಗೆ ಸಂಪೂರ್ಣ ಸರ್ವೀಸ್ ರಸ್ತೆಯೇ ಇಲ್ಲ. ಇದು ರೈಲು ಮಾರ್ಗದಂತಹ ಅಡೆತಡೆಗಳಿಂದ ಕೂಡಿದ್ದು, ಪ್ರಯಾಣಿಕರು ತುಂಬಾ ತೊಂದರೆ ಅನುಭವಿಸುವಂತಾಗಿದೆ. ಇದೀಗ ವಾಹನಗಳು ಬಿಡದಿ, ಚನ್ನಪಟ್ಟಣ, ಮತ್ತು ಮದ್ದೂರಿನಂತಹ ಪಟ್ಟಣಗಳಿಗೆ ತೆರಳಿ, ಅಲ್ಲಿಂದ ಹೆದ್ದಾರಿಯನ್ನು ಪ್ರವೇಶಿಸಲು ಅಥವಾ ನಿರ್ಗಮಿಸಲು ಮತ್ತು ಈ ಪ್ರದೇಶಗಳಿಗೆ ಆಗಮಿಸಬೇಕೆಂದರೆ ಸುತ್ತಾಡಿಕೊಂಡು ಬರಬೇಕಾಗುತ್ತದೆ. ಇದರಿಂದ ವಾಹನ ಸವಾರರು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಇದನ್ನು ಸರಿಪಡಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ರೈಲ್ವೆ ಹಳಿಗಳಿಂದಾಗಿ ಸರ್ವಿಸ್ ರಸ್ತೆ ಸ್ಥಗಿತಗೊಂಡಿರುವ ರೈಲ್ವೆ ಮೇಲ್ಸೇತುವೆಗಳನ್ನು ನಿರ್ಮಿಸಲಿದೆ. ಇದು ಪೂರ್ಣಗೊಂಡ ನಂತರ, ಬಳಕೆದಾರರು ಯಾವುದೇ ತೊಂದರೆಯಿಲ್ಲದೆ ಮುಖ್ಯರಸ್ತೆಗೆ ಸಮಾನಾಂತರವಾದ ಸರ್ವಿಸ್ ರಸ್ತೆಯಲ್ಲಿ ಮೈಸೂರನ್ನು ತಲುಪಬಹುದು.

ಬೆಂಗಳೂರು-ಮೈಸೂರು ನಿಯಂತ್ರಿತ ಹೆದ್ದಾರಿಯ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಕೇಳಿ ಬರುತ್ತಿರುವ ದೂರುಗಳನ್ನು ಸರಿಪಡಿಸಲು NHAI ಕ್ರಮ ಕೈಗೊಂಡಿದೆ ಎಂದು ಪ್ರಾದೇಶಿಕ ಅಧಿಕಾರಿ (ಕರ್ನಾಟಕ) ವಿಲಾಸ್ ಪಿ ಬ್ರಹ್ಮಂಕರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. ಇದರೊಂದಿಗೆ ಮುಖ್ಯರಸ್ತೆಯ ಉದ್ದಕ್ಕೂ ಅಪೂರ್ಣವಾಗಿರುವ ಸರ್ವಿಸ್ ರಸ್ತೆ ನಿರ್ಮಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು. ಮಾರ್ಚ್ 2023 ರಲ್ಲಿ ರಸ್ತೆ ಸಂಚಾರಕ್ಕೆ ಮುಕ್ತವಾದಾಗಿನಿಂದ ನಿರಂತರ ಸರ್ವೀಸ್ ರಸ್ತೆಗಳ ಕೊರತೆಯು ಪ್ರಮುಖ ದೂರುಗಳಲ್ಲಿ ಒಂದಾಗಿದೆ. ವಾಹನ ಮಾಲೀಕರು ಸರ್ವಿಸ್ ರಸ್ತೆಗಳಿಗೆ ಬೇಡಿಕೆ ಇಟ್ಟಿದ್ದಲ್ಲದೆ, ಹೆದ್ದಾರಿಯ ಎರಡೂ ಬದಿಯ ಗ್ರಾಮಸ್ಥರು ಅಪೂರ್ಣವಾಗಿರುವ ಸರ್ವಿಸ್ ರಸ್ತೆಗಳ ಬಗ್ಗೆ ದೂರುಗಳನ್ನು ಸಲ್ಲಿಸಿದ್ದಾರೆ. ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಟೆಂಡರ್‌ ಕರೆಯಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು. ಕಾಮಗಾರಿ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮೈಸೂರುವರೆಗಿನ ಸರ್ವೀಸ್ ರಸ್ತೆಗಳು ಪೂರ್ಣಗೊಳ್ಳಲಿವೆ ಎಂದು ಬ್ರಹ್ಮಾಂಕರ್ ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು