LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಬೆಟ್ಟದ ಟ್ರಕ್ಕಿಂಗ್, ಸಸಿ ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ಜಿ.ಪಂ ಸಿಇಒ ಡಾ. ಕೆ.ಎನ್ ಅನುರಾಧ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಕುಂದಾಣ ಬೆಟ್ಟ, ಮಾಕಳಿಬೆಟ್ಟ, ಶಿವಗಂಗೆ ಬೆಟ್ಟ, ಸಿದ್ಧರ ಬೆಟ್ಟ, ಆವತಿ ಬೆಟ್ಟದಂತ ಪ್ರವಾಸಿ ತಾಣಗಳು ಹಾಗೂ ಪಾರಂಪರಿಕ ಕಟ್ಟಡಗಳಿರುವುದು ನಮ್ಮೆಲ್ಲರ ಹೆಮ್ಮೆ. ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಚಾರಣಕ್ಕೆ ಅನುಕೂಲಕರ ವಾತಾವರಣವನ್ನು ಜಿಲ್ಲಾಡಳಿತ ಕಲ್ಪಿಸುತ್ತಿದ್ದು, ಸಾರ್ವಜನಿಕರು ಪ್ರವಾಸಿ ತಾಣಗಳಿಗೆ ಭೇಟಿ ನೀಡಿದಾಗ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ಸ್ವಚ್ಛತೆ ಕಾಪಾಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಆವತಿ ಬೆಟ್ಟದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ ಮತ್ತು ಶಾಂತಿ ದ್ಯೇಯ ವಾಕ್ಯದೊಂದಿಗೆ ‘ಟ್ರಕ್ಕಿಂಗ್, ಸಸಿ ನೆಡುವ ಹಾಗೂ ಸ್ವಚ್ಛತಾ ಹೀ ಸೇವಾ ಆಂದೋಲನ’ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್-ಕಸ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ.

ಜತೆಗೆ ಪರಿಸರ ಸಂರಕ್ಷಣೆಗಾಗಿ ಗಿಡ-ಮರ ಹೆಚ್ಚಾಗಿ ನೆಟ್ಟು, ಬೆಳೆಸುವ ಮೂಲಕ ಆರೋಗ್ಯಕರ ಪ್ರಕೃತಿ ನಿರ್ಮಿಸಿ ಪರಿಸರ ಸಮತೋಲನ ಕಾಪಾಡಬೇಕು ಎಂದರು.ಸ್ವಚ್ಛತಾ ಹೀ ಸೇವಾ ಆಂದೋಲನ: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಪ್ರತಿ ವರ್ಷವು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ’ವನ್ನು ಆಯೋಜಿಸಲಾಗುತ್ತಿದ್ದು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಸಿ.ಇ.ಒ ಡಾ.ಕೆ.ಎನ್ ಅನುರಾಧ ಅವರು ಹೇಳಿದರು.

ಸ್ವಚ್ಛತಾ ಹೀ ಸೇವಾ ಆಂದೋಲನದ ಭಾಗವಾಗಿ ಎಲ್ಲಾ ಅಧಿಕಾರಿಗಳು, ಸಂಘಸಂಸ್ಥೆಗಳು, ಸಾರ್ವಜನಿಕರು ದೇವನಹಳ್ಳಿ ತಾಲ್ಲೂಕಿನ ಆವತಿ ಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳು, ಕಸ-ತ್ಯಾಜ್ಯವನ್ನು ಸಂಗ್ರಹಿಸಿ ಸ್ವಚ್ಚತೆ ಮಾಡಿದರು.ಈ ಸಂದರ್ಭದಲ್ಲಿ ಸ್ವಚ್ಛತೆ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಬಳಿಕ ಬೆಟ್ಟದ ಸುತ್ತಮುತ್ತಲಿನ ಪ್ರದೇಶದಲ್ಲಿ 100 ಕ್ಕೂ ಅಧಿಕ ಸಸಿಗಳನ್ನು ನೆಡಲಾಯಿತು.

ಈ ದಿನದಂದು ನಾವೆಲ್ಲರೂ ಪರಿಸರ ಸಂರಕ್ಷಣೆಗಾಗಿ ಸಮಾಜದಲ್ಲಿ ಗಿಡ-ಮರ ನೆಟ್ಟು ಹಸಿರು ವಾತವರಣ ನಿರ್ಮಿಸುವದಾಗಿ ಪ್ರತಿಜ್ಞೆಯನ್ನು ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಅರಣ್ಯ ಬೆಳೆಸಿ ಫೋಷಿಸಿದ ಅಧಿಕಾರಿಗಳು, ಸಿಬ್ಬಂದಿ, ಪರಿಸರ ಸಂಸ್ಥೆಗಳು ಹಾಗೂ ಪ್ರವಾಸೋದ್ಯಮ ಮಿತ್ರರ ಕಾರ್ಯಕ್ಕೆ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಆರ್. ಸುಮಾ, ಪ್ರಾದೇಶಿಕ ಅರಣ್ಯ ವಿಭಾಗದಉಪ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗಾರ, ಜಿ.ಪಂ ಯೋಜನಾ ನಿರ್ದೇಶಕರಾದ ವಿಠ್ಠಲ್ ಕಾವ್ಳೆ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಪ್ರೀತಿ, ದೇವನಹಳ್ಳಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರಗೌಡ, ದೊಡ್ಡ ಬಳ್ಳಾಪುರ ವಿಭಾಗದ ಡಿವೈಎಸ್ಪಿ ರವಿ, ಆವತಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಸಾರ್ವಜನಿಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು