LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಸೆ. 23 ರಂದು ಬ್ಯಾಂಕ್ ಪಿಂಚಣಿದಾರರು ಮತ್ತು ನಿವೃತ್ತಿ ವೇತನದಾರರ ಸಂಘಟನೆಗಳ ಸಮನ್ವಯ ಸಮಿತಿಯಿಂದ ಪ್ರತಿಭಟನೆ

ಬೆಂಗಳೂರು; ಭಾರತೀಯ ಬ್ಯಾಂಕುಗಳ ಸಂಘ ಬ್ಯಾಂಕ್ ನಿವೃತ್ತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ನಿರಾಕರಿಸುತ್ತಿದ್ದು, ಇದರ ವಿರುದ್ಧ ಈ ತಿಂಗಳ 23 ರಂದು ಫ್ರೀಡಂ ಪಾರ್ಕ್ ನಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಬ್ಯಾಂಕ್ ಪಿಂಚಣಿದಾರರು ಮತ್ತು ನಿವೃತ್ತಿ ವೇತನದಾರರ ಸಂಘಟನೆಗಳ ಸಮನ್ವಯ ಸಮಿತಿ ಎಚ್ಚರಿಕೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಪ್ರಧಾನ ಕಾರ್ಯದರ್ಶಿ ಎ. ಎನ್. ಕೃಷ್ಣ ಮೂರ್ತಿ, ಕಿರಿಯ ಸಿಬ್ಬಂದಿಗೆ ಹೋಲಿಸಿದರೆ 1992 ರಲ್ಲಿ ನಿವೃತ್ತರಾದ ಹಿರಿಯ ಶ್ರೇಣಿಯ ಕಾರ್ಯನಿರ್ವಾಹಕರಿಗೆ ತುಂಬಾ ಕಡಿಮೆ ಪಿಂಚಣಿ ದೊರೆಯುತ್ತಿದೆ. ತಾರತಮ್ಯ ನಿವೃತ್ತರನ್ನು ಬಾಧಿಸುತ್ತಿದ್ದು, ಜೀವನ ನಿರ್ವಹಣೆ ತ್ರಾಸದಾಯಕವಾಗಿದೆ. ಕೈಗೆಟುಕುವ ದರದಲ್ಲಿ ಆರೋಗ್ಯ ವಿಮೆ ದೊರೆಯುತ್ತಿಲ್ಲ. ವಿಮಾ ವೆಚ್ಚವನ್ನು ನಿವೃತ್ತರೇ ಭರಿಸುತ್ತಾರೆ.

ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯ ನಿರ್ದೇಶನದಂತೆ ಆರೋಗ್ಯ ವಿಮೆಯ ವೆಚ್ಚವನ್ನು ಸಂಪೂರ್ಣವಾಗಿ ಭರಿಸುವಂತೆ ಅಥವಾ ಅದಕ್ಕೆ ಗಣನೀಯವಾಗಿ ಸಬ್ಸಿಡಿ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಜೊತೆಗೆ ವಿಮಾ ಕಂತಿನ ಮೇಲೆ ಶೇ 18 ರಷ್ಟು ಜಿ.ಎಸ್.ಟಿ ವಿಧಿಸಿರುವುದು ಮತ್ತೊಂದು ಬರೆ ಎಳೆದಂತಾಗಿದೆ ಎಂದರು.

ತಮ್ಮ ಹೋರಾಟವನ್ನು ತೀವ್ರಗೊಳಿಸಲು ಇದೇ 23 ರಂದು ದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ಮತ್ತು ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ಎಲ್ಲಾ ರಾಜ್ಯ ರಾಜಧಾನಿಗಳಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಹೇಳಿದರು.ಪತ್ರಿಕಾ ಗೋಷ್ಠಿಯಲ್ಲಿ ಕೆ ವಿ ಆಚಾರ್ಯ, ಜಿ ಡಿ ನದಾಫ್, ಅಧ್ಯಕ್ಷರು, ಎಂ ಆರ್ ಗೋಪಿನಾಥ್ ರಾವ್, ರಾಜ್ಯ ಘಟಕದ ಅಧ್ಯಕ್ಷರು, ಎ ಎನ್ ಕೃಷ್ಣ ಮೂರ್ತಿ, ರಾಜ್ಯ ಕಾರ್ಯದರ್ಶಿ, ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು