LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಬೈಕ್ ಶೋ ರೂಮ್ ಬೆಂಕಿ ಅವಘಡ : ಮೃತಳ ಕುಟುಂಬಕ್ಕೆ ಸಚಿವ ದಿನೇಶ್ ಸಾಂತ್ವನ

ಬೆಂಗಳೂರು: ರಾಜಾಜಿನಗರ ಬೈಕ್ ಶೋ ರೂಮ್‍ನಲ್ಲಿ ಆಕಸ್ಮಿಕ ಬೆಂಕಿ ದುರಂತದಲ್ಲಿ ಮೃತಪಟ್ಟ ಪ್ರಿಯಾ ಅವರ ಮನೆಗೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದ್ದಾರೆ.ಪ್ರಿಯಾ ಅವರ ಕುಟುಂಬ ವರ್ಗ ಗಾಂಧಿನಗರದ ಓಕಳಿಪುರಂನಲ್ಲಿ ನೆಲೆಸಿದ್ದು, ಸಚಿವರ ಭೇಟಿ ವೇಳೆ, ಶೋ ರೂಮ್ ಮಾಲೀಕರ ವಿರುದ್ಧ ಕುಟುಂಬ ವರ್ಗದವರು ಅಸಮಾಧಾನ ವ್ಯಕ್ತಪಡಿಸಿದರು. ಶೋ ರೂಮ್ ಮಾಲೀಕರು ಯಾರು ಕೂಡ ಇಲ್ಲಿಯ ವರೆಗೆ ಏನು ಎಂದು ಕೇಳಲು ಬಂದಿಲ್ಲ.

ಶಾಸಕರಾಗಿ ನೀವೇ ನಮಗೆ ನ್ಯಾಯ ಒದಗಿಸಬೇಕು ಎಂದು ಪ್ರಿಯಾ ಅವರ ತಂದೆ ಸಚಿವ ದಿನೇಶ್ ಗುಂಡೂರಾವ್ ಅವರ ಬಳಿ ಮನವಿ ಮಾಡಿದರು.
ಯುವತಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಸಚಿವ ದಿನೇಶ್ ಗುಂಡೂರಾವ್, ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಶೋ ರೂಮ್ ಮಾಲೀಕರನ್ನ ಕರೆದು ಚರ್ಚಿಸುವುದಾಗಿ ಪ್ರಿಯಾ ಅವರ ತಂದೆ ತಾಯಿ ಅವರಿಗೆ ಭರವಸೆ ನೀಡಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ದಿನೇಶ್ ಗುಂಡೂರಾವ್, ಪ್ರಿಯಾ ಅವರ ಬರ್ತ್ ಡೇ ಇರುವಾಗ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದ್ದು ಬೇಸರ ತರಿಸಿದೆ. ಅವರ ತಂದೆ ತಾಯಿ ಮಕ್ಕಳನ್ನ ಕಷ್ಟಪಟ್ಟು ಓದಿಸಿದ್ದಾರೆ. ಅಚಾನಕ್ಕಾಗಿ ಈ ರೀತಿ ಸಾವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಬೇಸರ ವ್ಯಕ್ತ ಪಡಿಸಿದರು. ಕುಟುಂಬ ವರ್ಗಕ್ಕೆ ಪರಿಹಾರ ಒದಗಿಸಿಕೊಡವೇಕು. ಇನ್ಸೂರೆನ್ಸ್ ಇದೆಯಾ ಎಂಬುದನ್ನ ವಿಚಾರಿಸಬೇಕಿದೆ. ಶೋ ರೂಮ್ ಮಾಲೀಕರೊಂದಿಗೂ ಚರ್ಚಿಸಿದ ಬಳಿಕ ಪರಿಹಾರ ದೊರಕಿಸಿಕೊಡುವುದಾಗಿ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು