LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Haveri

ಬೊಮ್ಮಾಯಿ ಮನೆ ಕಟ್ಟಿಲ್ಲ ಎಂದ ಸಿಎಂ ಸಿದ್ದರಾಮಯ್ಯಗೆ ಸಾಕ್ಷಿ ಸಮೇತ ತಿರುಗೇಟು ನೀಡಿದ ಬೊಮ್ಮಾಯಿ

ಹಾವೇರಿ( ಶಿಗ್ಗಾವಿ): ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರು ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ಒಂದೇ ಒಂದು ಮನೆ ಕಟ್ಟಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದ ಆರೋಪಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯ ವರು ತಿರುಗೇಟು ನೀಡಿದ್ದಾರೆ.

ಅವರು ಮಂಗಳವಾರ ಶಿಗ್ಗಾವಿ ತಾಲೂಕಿನ ಹಿರೇಮಣಕಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಪ್ರವಾಹದ ಸಂದರ್ಭದಲ್ಲಿ ಶಿಗ್ಗಾವಿ ತಾಲೂಕಿನ ಹಿರೇಮಣಕಟ್ಟಿ ಗ್ರಾಮದಲ್ಲಿ ತಮ್ಮ ಅವಧಿಯಲ್ಲಿ ೫ ಲಕ್ಷ ರೂ. ನೀಡಿ ನಿರ್ಮಿಸಿದ ಮನೆಯ ಮುಂದೆ ಫಲಾನುಭವಿ ಯೊಂದಿಗೆ ನಿಂತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ಸನ್ಮಾನ್ಯ ಮುಖ್ಯಮಂತ್ರಿ ಗೌರವಾನ್ವಿತ ಸಿದ್ದರಾಮಯ್ಯ ಅವರೇ ನಿನ್ನೆ ನೀವು ಹುಲಗೂರಿನಲ್ಲಿ ಬಸವರಾಜ ಬೊಮ್ಮಾಯಿಯವರು ಶಿಗ್ಗಾವಿಯಲ್ಲಿ ಒಂದೂ ಮನೆ ಕಟ್ಟಿಲ್ಲ ಅಂತ ಹೇಳಿದ್ದಿರಿ, ಅದು ಹಸಿ ಸುಳ್ಳು, ಇಲ್ಲಿ ನಿಮ್ಮ ಕಣ್ಣ ಮುಂದೆ ಇದೆ. ೨೦೨೧-೨೨ ರಲ್ಲಿ ಪ್ರವಾಹ ಬಂದAತಹ ಸಂದರ್ಭದಲ್ಲಿ ಶಿಗ್ಗಾವಿ ತಾಲೂಕಿನ ಹಿರೇ ಮಣಕಟ್ಟಿ ಗ್ರಾಮದಲ್ಲಿ ಸುಮಾರು ಮುನ್ನೂರು ಮನೆಗಳನ್ನು ಕಟ್ಟಿದ್ದೇವೆ. ಬಸವಣ್ಣೆಮ್ಮಾ ಮಾಳಪ್ಪನವರು ಅವರು ಐದು ಲಕ್ಷ ರೂ. ಮನೆ ನಿರ್ಮಾಣ ಮಾಡಿಕೊಂಡಿದ್ದಾರೆ. ಮನೆಯ ಮೇಲೆ ತಂದೆ ತಾಯಿ ಆಶೀರ್ವಾದ, ಜೈ ರಾಯಣ್ಣ ಅಂತ ಬರೆಸಿದ್ದಾರೆ.

ಸಿದ್ದರಾಮಣ್ಣ ನಾವೂ ಜೈ ರಾಯಣ್ಣ ಅನ್ನುತ್ತೇವೆ. ನಮ್ಮ ಅಕ್ಕನೂ ಜೈ ರಾಯಣ್ಣ ಎನ್ನುತ್ತಾರೆ. ರಾಯಣ್ಣನಿಗೆ ಜಯವಾಗಿದೆ. ರಾಯಣ್ಣನಿಗೆ ಜೈ ಅಂದಿರುವುದಕ್ಕೆ ಅಕ್ಕಳಿಗೆ ಜಯವಾಗಿದೆ ಎಂದರು.

ನಮ್ಮ ಬಿಜೆಪಿ ಸರ್ಕಾರ ಇದ್ದಾಗ ೨೦೨೧-೨೨ ಎಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡವರ ಸುಮಾರು ೧೨೫೦೦ ಮನೆಗಳನ್ನು ಶಿಗ್ಗಾವಿ ಕ್ಷೇತ್ರದಲ್ಲಿ ಕಟ್ಟಿದ್ದೇವೆ. ಇದೇ ರೀತಿ ನಾವು ಕಟ್ಟಿಸಿರುವ ಎಲ್ಲರ ಮನೆಗಳ ಮುಂದೆ ನಿಂತು ಫೋಟೊಗಳನ್ನು ಕಳುಹಿಸುತ್ತೇನೆ. ನೀವು ಹಸಿ ಸುಳ್ಳು ಹೇಳುವುದನ್ನು ಬಿಡಿ, ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ಇರಲಿ, ಹಸಿ ಸುಳ್ಳು ಹೇಳಬೇಡಿ, ನಂಬುವAತಹ ಸುಳ್ಳು ಹೇಳಿ, ನಮ್ಮ ಕೆಲಸಕ್ಕೆ ಪುರಾವೆ ಇಲ್ಲಿದೆ ಎಂದು ಹೇಳಿದರು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು