LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬ್ಯಾಟರಿ ಆಧಾರಿತ ಆಟೋರಿಕ್ಷಾಗಳಿಗೆ ಉಚಿತ ಪರವಾನಗಿ ನೀಡಿ ಆಟೋ ಬೆಲೆ ಏರಿಸಿ ಗ್ರಾಹಕರಿಗೆ ಹೊರೆ ಮಾಡಬೇಡಿ: ಮುಖ್ಯಮಂತ್ರಿ ಚಂದ್ರು ಆಗ್ರಹ

ರಾಜ್ಯದಲ್ಲಿನ ಬ್ಯಾಟರಿ ಆಧಾರಿತ ಆಟೋರಿಕ್ಷಾಗಳಿಗೆ ತಮಿಳುನಾಡು ಹಾಗೂ ದೆಹಲಿ ಸರ್ಕಾರಗಳ ಮಾದರಿಯಲ್ಲಿ ಕೂಡಲೇ ಉಚಿತ ಪರವಾನಗಿಗಳನ್ನು ನೀಡಿ, ನಿಯಮಾವಳಿಗಳನ್ನು ಅಳವಡಿಸಿದ್ದಲ್ಲಿ ಅನವಶ್ಯಕವಾಗಿ ಆಟೋ ಮೀಟರ್ ಬೆಲೆಗಳನ್ನು ಏರಿಸಿ ಗ್ರಾಹಕರಿಗೆ ಅನವಶ್ಯಕವಾಗಿ ಹೊರೆ ಮಾಡುವ ಅವಶ್ಯಕತೆಯೇ ಇರುವುದಿಲ್ಲವೆಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿನ ಹಲವು ನಗರಗಳಲ್ಲಿ ನಗರಗಳಲ್ಲಿ ಮೀಟರ್ ಆಧಾರದಲ್ಲಿ ಓಡಾಡುತ್ತಿರುವ ಬ್ಯಾಟರಿ ಚಾಲಿತ ಆಟೋರಿಕ್ಷಾ ಗಳು ರಾಜ್ಯದ ಸಾರಿಗೆ ಇಲಾಖೆಯ ಯಾವುದೇ ಕಾನೂನು ಕಟ್ಟಳೆಗಳಿಗೆ ಒಳಪಡದೆ ಇರುವ ಕಾರಣದಿಂದಾಗಿ ಮೆಥನಲ್ ಮತ್ತು ಇಥೆನಾಲ್ ಇಂಧನ ಬಳಸಿ ಸಂಚರಿಸುತ್ತಿರುವ ಪಾರಂಪರಿಕ ಆಟೋರಿಕ್ಷಾಗಳ ಚಾಲಕರುಗಳ ಆದಾಯದಲ್ಲಿ ವ್ಯತ್ಯಯ ಉಂಟಾಗಿ ಆರ್ಥಿಕವಾಗಿ ಸಾಕಷ್ಟು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ.

ಯಾವುದೇ ಸಾರಿಗೆ ನಿಯಮಾವಳಿಗಳ ಅಂಕುಶವಿಲ್ಲದ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳು ಸಾವಿರಾರು ಸಂಖ್ಯೆಯಲ್ಲಿ ರಾಜ್ಯದ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ರಸ್ತೆಗಳಿದಿರುವ ಪರಿಣಾಮ ಇಂದು ಸರ್ಕಾರದ ಸಾರಿಗೆ ನಿಯಮಾವಳಿಗಳ ಪ್ರಕಾರ ಪರವಾನಗಿ ತೆಗೆದುಕೊಂಡು ಪ್ರಾಮಾಣಿಕವಾಗಿ ತೆರಿಗೆ ಕಟ್ಟಿಕೊಂಡು ಬರುತ್ತಿರುವ ಲಕ್ಷಾಂತರ ಬಡ ಆಟೋರಿಕ್ಷಾ ಚಾಲಕರುಗಳು ತಮ್ಮ ಸಂಸಾರವನ್ನು ನಿರ್ವಹಿಸಲೂ ಸಾಧ್ಯವಾಗದ ಸಂಕಷ್ಟ ಪರಿಸ್ಥಿತಿಗೆ ಧೂಡಲ್ಪಟ್ಟಿದ್ದಾರೆ ಎಂದು ತಮ್ಮ ಪತ್ರದಲ್ಲಿ ಮುಖ್ಯಮಂತ್ರಿ ಚಂದ್ರು ಕಳವಳವನ್ನು ವ್ಯಕ್ತಪಡಿಸಿದ್ದಾರೆ.

ಪಕ್ಕದ ತಮಿಳುನಾಡು ಹಾಗೂ ದೆಹಲಿ ರಾಜ್ಯಗಳಲ್ಲಿ ಬ್ಯಾಟರಿ ಆಧಾರಿತ ಆಟೋರಿಕ್ಷಾ ಗಳಿಗೆ ಸೂಕ್ತ ನಿಯಮಾವಳಿಗಳನ್ನು ರೂಪಿಸಿ ಎರಡೂ ವರ್ಗಗಳ ಆಟೋರಿಕ್ಷ ಚಾಲಕರಗಳು ಸುಭಿಕ್ಷವಾಗಿ ಜೀವನವನ್ನು ನಡೆಸಿಕೊಂಡು ಹೋಗುವ ವಾತಾವರಣವನ್ನು ಕಲ್ಪಿಸಿ ಕೊಟ್ಟಿದ್ದಾರೆ. ರಾಜ್ಯದಲ್ಲಿಯೂ ಕೂಡಲೇ ಇದೇ ರೀತಿಯ ನಿಯಮಾವಳಿಗಳನ್ನು ಅಳವಡಿಸುವ ಮೂಲಕ ಲಕ್ಷಾಂತರ ಆಟೋ ಚಾಲಕರುಗಳು ಆರ್ಥಿಕ ಸಂಕಷ್ಟದಿಂದ ಹೊರಬರುವಂತಹ ವಾತಾವರಣ ಕಲ್ಪಿಸಿ ಕೊಡಬೇಕೆಂದು ಮುಖ್ಯಮಂತ್ರಿ ಚಂದ್ರು ತಮ್ಮ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಪಕ್ಷದ ಆಟೋ ಘಟಕದ ರಾಜ್ಯಾಧ್ಯಕ್ಷ ಅಯುಬ್ ಖಾನ್ ಇನ್ನಿತರ ಆಟೋ ಸಂಘಟನೆಗಳ ನಿಯೋಗದೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು