LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಭರ್ಜರಿಯಾಗಿದೆ ಶ್ರೀಮುರಳಿ ಅಭಿನಯದ "ಬಘೀರ" ಚಿತ್ರದ ಟ್ರೇಲರ್ ಹೊಂಬಾಳೆಯ ಬಘೀರ ಅ.31ಕ್ಕೆ ತೆರೆಗೆ

ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ "ಕೆ.ಜಿ.ಎಫ್", " ಕಾಂತಾರ " ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಹೆಸರಾಂತ ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ, ಡಾ||ಸೂರಿ ನಿರ್ದೇಶನದಲ್ಲಿ ಶ್ರೀಮುರಳಿ ಅವರು ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಬಘೀರ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ಚಿತ್ರ ಅಕ್ಟೋಬರ್ 31 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾಧ್ಯಮದವರ ಜೊತೆ ಮಾತನಾಡಿದರು.ಮೊದಲಿಗೆ "ಬಘೀರ" ಚಿತ್ರವನ್ನು ನನಗೆ ನಿರ್ದೇಶಿಸಲು ಅವಕಾಶ ನೀಡಿದ ಹೊಂಬಾಳೆ ಫಿಲಂಸ್ ಗೆ ಧನ್ಯವಾದ ತಿಳಿಸುತ್ತೇನೆ ಎಂದು ಮಾತನಾಡಿದ ನಿರ್ದೇಶಕ ಡಾ||ಸೂರಿ, ಈ ಚಿತ್ರದ ಕಥೆಯನ್ನು ಪ್ರಶಾಂತ್ ನೀಲ್ ಅವರು ಬಹಳ ಚೆನ್ನಾಗಿ ಬರೆದಿದ್ದಾರೆ. "ಬಘೀರ" ಎಂದರೆ ನೈಟ್ ಹಂಟರ್. ಇದು ರಾತ್ರಿವೇಳೆಯಲ್ಲೇ ಭೇಟೆಯಾಡುತ್ತದೆ. ನಮ್ಮ ಚಿತ್ರದ ಕಥೆಯ ಹೆಚ್ಚಿನ ಭಾಗ ರಾತ್ರಿಯಲ್ಲೇ ನಡೆಯುತ್ತದೆ.

"ಸೂಪರ್ ಹೀರೋ" ಕಾನ್ಸೆಪ್ಟ್ ನ ಈ ತರಹದ ಕಥೆ ನನ್ನ ಪ್ರಕಾರ ಕನ್ನಡದಲ್ಲಿ ಬಂದಿಲ್ಲ. ಇನ್ನು , ಈ ಚಿತ್ರ ಉತ್ತಮವಾಗಿ ಮೂಡಿಬರಲು ಮುಖ್ಯ ಕಾರಣ ನಮ್ಮ ಚಿತ್ರತಂಡದ ಎಲ್ಲರ ಶ್ರಮ. ಅದರಲ್ಲೂ ಹೆಚ್ಚಿನ ಶ್ರಮ ಶ್ರೀಮುರಳಿ ಅವರದು. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಅಕ್ಟೋಬರ್ 31 ರಂದ ಚಿತ್ರ ತೆರೆಗೆ ಬರಲಿದೆ. ಎಲ್ಲರೂ ನೋಡಿ.  ಪ್ರೋತ್ಸಾಹ ನೀಡಿ ಎಂದರು.

ಮೂರು ವರ್ಷಗಳ ಶ್ರಮಕ್ಕೆ ಪ್ರತಿಫಲ ಸಿಗುವ ದಿನ ಸಮೀಪಿಸಿದೆ. ನಮ್ಮ "ಬಘೀರ" ಇದೇ ತಿಂಗಳ 31 ರಂದು ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರದ ಟ್ರೇಲರ್ ಎಲ್ಲರಿಗೂ ಇಷ್ಟವಾಗಿದೆ ಎಂಬ ಭರವಸೆ ನನಗಿದೆ. ಇನ್ನು, ನಿರ್ದೇಶಕ ಡಾ||ಸೂರಿ ಹಾಗೂ ಹೆಮ್ಮೆಯ ಹೊಂಬಾಳೆ ಫಿಲಂಸ್ ಜೊತೆಗೆ ಕೆಲಸ ಮಾಡಿದ್ದು ಬಹಳ ಸಂತೋಷವಾಗಿದೆ. ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರ ಜೊತೆಗೆ ಇದು ನನ್ನ ಮೊದಲ ಚಿತ್ರ. ಟ್ರೇಲರ್ ನಲ್ಲೇ ಅವರ ಕೆಲಸ ಕಾಣುತ್ತಿದೆ. ಈ ಚಿತ್ರದ ತಂತ್ರಜ್ಞರು, ಕೆಲಸದಲ್ಲಿ ರಾಕ್ಷಸರು.

ಅವರ ಕೆಲಸ ನಿಮಗೆ ತೆರೆಯ ಮೇಲೆ ಕಾಣುತ್ತಿದೆ. ಪ್ರಶಾಂತ್ ನೀಲ್ ಅವರ ಕಥೆಯ ಬಗ್ಗೆ ಹೇಳುವ ಹಾಗೆ ಇಲ್ಲ. ಅಂತಹ ಅದ್ಭುತ ಕಥೆ ಕೊಟ್ಟಿದ್ದಾರೆ ಅವರು. ರುಕ್ಮಿಣಿ ವಸಂತ್ ಅವರು ನಾಯಕಿಯಾಗಿ ನಟಿಸಿದ್ದಾರೆ. ಸುಧಾರಾಣಿ ಅವರು ನನ್ನ ಅಮ್ಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸೂಪರ್ ಹೀರೋ ತರಹ ನಾನು ಕಾಣಿಸಿಕೊಂಡಾಗ ಹೆಚ್ಚು ಖುಷಿಯಾಯಿತು. ಎಂದರು ನಾಯಕ ಶ್ರೀಮುರಳಿ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು