LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಭಾರತಕ್ಕೆ ಪುಣೆಯಲ್ಲಿ ಪುಟಿದೇಳುವ ವಿಶ್ವಾಸ

ರಾಜ್ ಕೋಟ್ ಪಂದ್ಯದಲ್ಲಿ ಗೆಲುವಿನ ಅವಕಾಶವನ್ನು ಕೈಚೆಲ್ಲಿರುವ ಭಾರತ ತಂಡ ಶುಕ್ರವಾರ ನಡೆಯಲಿರುವ 4ನೇ ಟಿ20 ಪಂದ್ಯದಲ್ಲಿ ಉತ್ಸಾಹಿ ಇಂಗ್ಲೆಂಡ್ ವಿರುದ್ಧ ಪುಟಿದೇಳುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿದೆ.

ಆದರೆ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರ ತಾಂತ್ರಿಕ ದೌರ್ಬಲ್ಯಗಳು ಮತ್ತು ರಿಂಕು ಸಿಂಗ್ ಅವರ ಕಳಪೆ ಫಾರ್ಮ್ ಮತ್ತು ಫಿಟ್ನೆಸ್ ಸಮಸ್ಯೆ ಭಾರತ ತಂಡಕ್ಕೆ ಕಳವಳಕಾರಿಯಾಗಿವೆ. ಬಾಂಗ್ಲಾದೇಶ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಮಿಂಚಿದ್ದ ಅವರು ಇದೀಗ ಇಂಗ್ಲೆಂಡ್ ವಿರುದ್ಧ ದೊಡ್ಡ ಮೊತ್ತ ಗಳಿಸುವಲ್ಲಿ ನಿರಂತರವಾಗಿ ವಿಫಲರಾಗುತ್ತಿದ್ದಾರೆ. ಇನ್ನು ಯಾವ ಹಂತದಲ್ಲೂ ದೊಡ್ಡ ಜೊತೆಯಾಟ ಬಾರದೇ ಇರುವ ಹಿನ್ನೆಲೆಯಲ್ಲಿ ರಾಜ್‍ಕೋಟ್‍ನಲ್ಲಿ ನಡೆದ ಮೂರನೇ ಪಂದ್ಯವನ್ನು ಕೈಚೆಲ್ಲಿದ ಭಾರತ, ಎರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿ ವಶಪಡಿಸಿಕೊಳ್ಳುವ ಅವಕಾಶವನ್ನು ಕಳೆದುಕೊಂಡಿದೆ.

ಹಿಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಸುಮಾರು ಒಂದು ವರ್ಷದ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಮರಳಿದ್ದ ವೇಗಿ ಮೊಹಮ್ಮದ್ ಶಮಿ ಭರ್ಜರಿ ಆರಂಭ ಮಾಡಲು ವಿಫಲರಾಗಿದ್ದಾರೆ. ಆದರೆ ನಾಲ್ಕನೇ ಪಂದ್ಯದಲ್ಲಿ ತಮ್ಮ ಮೊನಚು ದಾಳಿಯಿಂದ ಆಂಗ್ಲರನ್ನು ಕಂಗೆಡಿಸುವ ನಿರೀಕ್ಷೆಯಿದೆ. ಪುಣೆ ಪಂದ್ಯ ಟೀಮ್ ಇಂಡಿಯಾದ ಸ್ಪಿನ್ ಹಾಗೂ ಇಂಗ್ಲೆಂಡ್ ವೇಗಕ್ಕೆ ಸಾಕ್ಷಿಯಾಗುವ ಸಾಧ್ಯತೆಯೂ ಇದೆ.

ಅತ್ತ ಆರಂಭದ ಎರಡು ಪಂದ್ಯಗಳಲ್ಲಿ ಸೋತರೂ ಮೂರನೇ ಪಂದ್ಯದಲ್ಲಿ ಭರ್ಜರಿಯಾಗಿಯೇ ಪುಟಿದೆದ್ದ ಜೋಸ್ ಬಟ್ಲರ್ ಬಳಗ, ಸರಣಿಯನ್ನು ಸಮಗೊಳಿಸಲು ಕಾತರಿಸುತ್ತಿದೆ. ಒಂದು ವೇಳೆ ಹಿಂದಿನ ಪಂದ್ಯದಲ್ಲಿ ನೀಡಿದ ಪ್ರದರ್ಶನವನ್ನೇ ಪುನರಾವರ್ತಿಸಿದರೆ, ಸರಣಿಯ ಐದನೇ ಹಾಗೂ ಅಂತಿಮ ಪಂದ್ಯದ ರೋಚಕತೆ ತೀವ್ರಗೊಳ್ಳಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು