LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಭಾರತೀಯರ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ: ರಚಿನ್ ರವೀಂದ್ರ

ರಚಿನ್ ರವೀಂದ್ರ ನ್ಯೂಜಿಲೆಂಡ್ ತಂಡದ ಭರವಸೆಯ ಯುವ ಆಲ್‍ರೌಂಡರ್. ಐಪಿಎಲ್‍ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿರುವ ರಚಿನ್ ಇದೇ ಮೊದಲ ಬಾರಿಗೆ ಭಾರತದ ವಿರುದ್ಧ ಟೆಸ್ಟ್ ಪಂದ್ಯವಾಡಲು ಆಗಮಿಸಿದ್ದಾರೆ. ಅದರಲ್ಲೂ ತಂದೆ ತವರು ಬೆಂಗಳೂರಿನಲ್ಲಿ ಚೊಚ್ಚಲ ಟೆಸ್ಟ್ ಪಂದ್ಯವಾಡಲು ಉತ್ಸುಕರಾಗಿದ್ದಾರೆ.

ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಬುಧವಾರದಿಂದ (ಅ.16) ಶುರುವಾಗಲಿದೆ. ಈ ಸರಣಿಗೆ ಆಯ್ಕೆಯಾಗಿರುವ ನ್ಯೂಝಿಲೆಂಡ್ ಬಳಗದಲ್ಲಿ ಭಾರತೀಯ ಮೂಲದ ರಚಿನ್ ರವೀಂದ್ರ ಕೂಡ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಮೊದಲ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಕಣಕ್ಕಿಳಿಯಲು ರಚಿನ್ ಉತ್ಸುಕರಾಗಿದ್ದಾರೆ. ಏಕೆಂದರೆ ರಚಿನ್ ರವೀಂದ್ರ ಮೂಲತಃ ಕರ್ನಾಟಕದವರು.

ಹೀಗಾಗಿಯೇ ತಂದೆಯ ತವರು ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಯುವ ಆಲ್‍ರೌಂಡರ್ ಕಾತುರರಾಗಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಚಿನ್ ರವೀಂದ್ರ, ನನ್ನ ಭಾರತೀಯ ಮೂಲದ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಬೆಂಗಳೂರು ನನ್ನ ಕುಟುಂಬಸ್ಥರು ನೆಲೆಸಿರುವ ಸ್ಥಳ. ಇಲ್ಲಿ ಆಡಲು ಸಾಧ್ಯವಾಗುವುದು ನನ್ನ ಪಾಲಿಗೆ ವಿಶೇಷ ಕ್ಷಣ. ನಾನು ಬೆಂಗಳೂರಿನಲ್ಲಿ ಕಣಕ್ಕಿಳಿಯುವುದನ್ನು ನನ್ನ ತಂದೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೂತು ನೋಡಲಿದ್ದಾರೆ. ಹೀಗಾಗಿ ಮೊದಲ ಟೆಸ್ಟ್ ಪಂದ್ಯವು ನನ್ನ ಪಾಲಿಗೆ ಅಸ್ಮರಣೀಯ ಎಂದು ರಚಿನ್ ರವೀಂದ್ರ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು