LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಭಾರತ ತಂಡವನ್ನು ಬಗ್ಗು ಬಡಿದ ಆಸ್ಟ್ರೇಲಿಯಾ

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 184 ರನ್‍ಗಳ ಅಮೋಘ ಗೆಲುವು ದಾಖಲಿಸಿದೆ. ಇದಕ್ಕೂ ಮುನ್ನ ಈ ಸರಣಿಯ ಮೊದಲ ಮ್ಯಾಚ್‍ನಲ್ಲಿ ಟೀಮ್ ಇಂಡಿಯಾ 295 ರನ್‍ಗಳ ಜಯ ಸಾಧಿಸಿತ್ತು. ಇದಾದ ಬಳಿಕ ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್‍ಗಳ ವಿಜಯ ದಾಖಲಿಸಿತು. ಇನ್ನು ಮೂರನೇ ಪಂದ್ಯ ಡ್ರಾನಲ್ಲಿ ಕೊನೆಗೊಂಡರೆ, ಇದೀಗ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದೆ.

ಮೆಲ್ಬೋರ್ನ್‍ನ ಎಂಸಿಜಿ ಮೈದಾನದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಜಯದೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಇದಕ್ಕೂ ಮುನ್ನ ಈ ಮ್ಯಾಚ್‍ನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಪ್ರಥಮ ಇನಿಂಗ್ಸ್‍ನಲ್ಲಿ 105 ರನ್‍ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡದ ಪರ ಮಾರ್ನಸ್ ಲಾಬುಶೇನ್ (70) ಅರ್ಧಶತಕ ಬಾರಿಸಿದರು. ಮತ್ತೊಂದೆಡೆ ಕರಾರುವಾಕ್ ದಾಳಿ ಸಂಘಟಿಸಿದ ಜಸ್‍ಪ್ರೀತ್ ಬುಮ್ರಾ 5 ವಿಕೆಟ್ ಕಬಳಿಸಿದರು. ಬುಮ್ರಾಗೆ ಉತ್ತಮ ಸಾಥ್ ನೀಡಿದ ಮೊಹಮ್ಮದ್ ಸಿರಾಜ್ 3 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಪರಿಣಾಮ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್‍ನಲ್ಲಿ 234 ರನ್‍ಗಳಿಗೆ ಆಲೌಟ್ ಆಯಿತು.

ಮೊದಲ ಇನಿಂಗ್ಸ್‍ನಲ್ಲಿನ 105 ರನ್‍ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ 84 ರನ್‍ಗಳಿಸಿದ್ದು ಬಿಟ್ಟರೆ, ಉಳಿದ ಬ್ಯಾಟರ್‍ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಭಾರತ ತಂಡವು ದ್ವಿತೀಯ ಇನೀಂಗ್ಸ್‍ನಲ್ಲಿ ಕೇವಲ 155 ರನ್‍ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡ 184 ರನ್‍ಗಳ ಅಮೋಘ ಗೆಲುವು ಸಾಧಿಸಿ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು