LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಭಾರತ ಸುಂಕ ಕಡಿತಗೊಳಿಸಲು ಟ್ರಂಪ್ ನಿರ್ಧಾರ

ವಾಷಿಂಗ್ಟನ್: ಭಾರತ ಸುಂಕ ಕಡಿತಗೊಳಿಸಲು ನಿರ್ಧರಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.ಅಮೆರಿಕದ ಆಮದುಗಳ ಮೇಲೆ `ಭಾರಿ ಸುಂಕ' ವಿಧಿಸುತ್ತಿದ್ದ ಭಾರತವು, ಸುಂಕಗಳನ್ನು ಗಣನೀಯವಾಗಿ ಕಡಿತಗೊಳಿಸಲು ಒಪ್ಪಿಕೊಂಡಿದೆ ಎಂದಿದ್ದಾರೆ.ಭಾರತ ನಮ್ಮ ಮೇಲೆ ಭಾರಿ ಸುಂಕ ವಿಧಿಸುತ್ತಿದೆ. ಭಾರತದಲ್ಲಿ ಏನನ್ನೂ ಮಾರಾಟ ಮಾಡಲು ಸಾಧ್ಯವಿಲ್ಲ. ಅಂದಹಾಗೆ, ಅವರು ಸುಂಕ ಕಡಿತಕ್ಕೆ ಒಪ್ಪಿಕೊಂಡಿದ್ದಾರೆ. ಅವರು ಈಗ ತಮ್ಮ ಸುಂಕವನ್ನು ಕಡಿಮೆ ಮಾಡಲು ಬಯಸುತ್ತಾರೆ ಎಂದಿದ್ದಾರೆ.

ಅಮೆರಿಕದಿಂದ ಕಿತ್ತುಕೊಳ್ಳಲಾಗಿದೆ, ನಿಜಕ್ಕೂ ಅನ್ಯಾಯವಾಗಿದೆ. ಅದನ್ನು ನಾವು ತಡೆಯುತ್ತೇವೆ. ಪ್ರಸುತ್ತ ಸುಂಕುಗಳು ತಾತ್ಕಾಲಿಕ ಮತ್ತು ಸಣ್ಣವು. ಏಪ್ರಿಲ್ 2 ರಿಂದ ದೊಡ್ಡ ಬದಲಾವಣೆ ಎಂದು ಟ್ರಂಪ್ ತಿಳಿಸಿದ್ದಾರೆ.
ಅಮೆರಿಕ ಜೊತೆಗಿನ ಯೋಜಿತ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ (ಬಿಟಿಎ) ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಶನಿವಾರ ಹೇಳಿದ್ದಾರೆ.

ಎರಡೂ ಸರ್ಕಾರಗಳು ಬಹು-ವಲಯ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತು ಚರ್ಚೆಗಳನ್ನು ಮುಂದುವರಿಸುವ ಪ್ರಕ್ರಿಯೆಯಲ್ಲಿವೆ. ಬಿಟಿಎ ಮೂಲಕ, ಸರಕು ಮತ್ತು ಸೇವಾ ವಲಯದಲ್ಲಿ ಭಾರತ-ಯುಎಸ್ ದ್ವಿಮುಖ ವ್ಯಾಪಾರವನ್ನು ಬಲಪಡಿಸುವುದು, ಮಾರುಕಟ್ಟೆ ಪ್ರವೇಶವನ್ನು ಹೆಚ್ಚಿಸುವುದು, ಸುಂಕ ಮತ್ತು ಸುಂಕ ರಹಿತ ಅಡೆತಡೆಗಳನ್ನು ಕಡಿಮೆ ಮಾಡುವುದು, ಎರಡೂ ದೇಶಗಳ ನಡುವೆ ಪೂರೈಕೆ ಸರಪಳಿ ಏಕೀಕರಣವನ್ನು ಬಿಗಿಗೊಳಿಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು