LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಭಾರತ vs ನ್ಯೂಜಿಲೆಂಡ್ ಪಂದ್ಯಕ್ಕೆ ಮಳೆ ಭೀತಿ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಅಕ್ಟೋಬರ್ 16 ರಿಂದ ಆರಂಭವಾಗಲಿದೆ. ಮೊದಲ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಿದರೆ, ಎರಡನೇ ಪಂದ್ಯವು ಪುಣೆಯಲ್ಲಿ ನಡೆಯಲಿದೆ.ಹಾಗೆಯೇ ಮೂರನೇ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಜರುಗಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿಯು ನಾಳೆಯಿಂದ (ಅ.16) ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಇದೀಗ ಮಳೆ ಭೀತಿ ಎದುರಾಗಿದೆ. ಏಕೆಂದರೆ ಬೆಂಗಳೂರಿನ ಸುತ್ತ ಮುತ್ತ ಧಾರಾಕಾರ ಮಳೆಯಾಗುತ್ತಿದ್ದು, ಹೀಗಾಗಿ ನಾಳೆ ನಿಗದಿತ ಸಮಯಕ್ಕೆ ಪಂದ್ಯ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.

ಏಕೆಂದರೆ ಹವಾಮಾನ ವರದಿ ಪ್ರಕಾರ, ಬುಧವಾರ ಬೆಂಗಳೂರಿನಲ್ಲಿ ಶೇ.100 ರಷ್ಟು ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ 41% ಮಳೆಯಾಗಲಿದೆ. ಬೆಳಿಗ್ಗೆಯಿಂದಲೇ ತುಂತುರು ಮಳೆ ಶುರುವಾಗುವುದರಿಂದ ಪಂದ್ಯವು ತಡವಾಗಿ ಆರಂಭಗೊಳ್ಳುವ ಸಾಧ್ಯತೆಯಿದೆ.ಇನ್ನು ಎರಡನೇ ದಿನದಾಟಕ್ಕೂ ವರುಣ ಅಡ್ಡಿಪಡಿಸಲಿದ್ದಾನೆ. ಗುರುವಾರ ಮಧ್ಯಾಹ್ನಯಿಂದ ಬೆಂಗಳೂರಿನಲ್ಲಿ ಶೇ.40ರಷ್ಟು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹಾಗೆಯೇ ಮೂರನೇ ದಿನದಾಟದ ವೇಳೆ 67% ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳಿದೆ.

ಕೊನೆಯ ಎರಡು ದಿನದಾಟಗಳಲ್ಲಿ ಕ್ರಮವಾಗಿ 25% ಮತ್ತು 24% ರಷ್ಟರ ಮಳೆಯ ಸಂಭವನೀಯತೆ ಇದೆ. ಅಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಪೂರ್ಣ ದಿನದಾಟಗಳು ನಡೆಯುವುದು ಅನುಮಾನ. ಅಲ್ಲದೆ ಪಂದ್ಯ ನಡೆದರೂ ಮಳೆಯಿಂದಾಗಿ ಅರ್ಧದಲ್ಲೇ ಸ್ಥಗಿತಗೊಳ್ಳುವ ಸಾಧ್ಯತೆ ಹೆಚ್ಚಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು