LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಭಾಷೆಯಿಂದ ನಾಡಾಭಿಮಾನವೂ ಬೆಳೆಯುತ್ತದೆ: ವೈ.ಕೆ. ಮುದ್ದು ಕೃಷ್ಣ

ಬೆಂಗಳೂರು: ಕರ್ನಾಟಕ ಕೇವಲ ರಾಜ್ಯವಲ್ಲ. ಅದು ನಮ್ಮ ಸಂಸ್ಕೃತಿ. ಕನ್ನಡ ನಮ್ಮ ಭಾಷೆ ಮಾತ್ರವಲ್ಲದೇ ನಮ್ಮ ಸಂಪ್ರದಾಯವೂ ಆಗಿದೆ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಅಧ್ಯಕ್ಷ ಡಾ. ವೈ.ಕೆ. ಮುದ್ದುಕೃಷ್ಣ ಹೇಳಿದ್ದಾರೆ.

ನಗರದ ಎಂಕೆಪಿಎಂಆರ್‍ವಿ ಇನ್ಸ್ಟಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ನ ಮಂಗಳ ಮಂಟಪದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು. ಭಾಷೆ ಬಗ್ಗೆ ಎಲ್ಲರೂ ಅಭಿಮಾನ ಬೆಳೆಸಿಕೊಳ್ಳಬೇಕು. ಭಾಷೆಯಿಂದ ನಾಡಾಭಿಮಾನವೂ ಬೆಳೆಯುತ್ತದೆ ಎಂದರು.

ರಾಜ್ಯ ಹೈಕೋರ್ಟ್ ನ ವಕೀಲರಾದ ಶ್ರವಣ ಪ್ರಭಾ ಮಾತನಾಡಿ, ನ್ಯಾಯಾಂಗ ವ್ಯವಸ್ಥೆಯಲ್ಲಿ ಕನ್ನಡ ಭಾಷೆ ಬಳಕೆ ಹೆಚ್ಚಾಗಬೇಕು. ಭಾಷೆ ಮಾತನಾಡುವುದರಿಂದ ಕನ್ನಡ ರಾಜ್ಯೋತ್ಸವಕ್ಕೆ ಮಹತ್ವ ದೊರೆಯುತ್ತದೆ ಎಂದರು. ಆರ್.ವಿ ಇನ್ಸ್ಟಿಟ್ಯೂಟ್ ಲೀಗಲ್ ಸ್ಟಡೀಸ್ ಸಂಸ್ಥೆಯ ಪ್ರಾಂಶುಪಾಲ ಪ್ರೊ . ಅಂಜಿನ ರೆಡ್ಡಿ ಮತ್ತಿತರೆ ಗಣ್ಯತರು ಪಾಲ್ಗೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST