LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಭೀಮ ಚೆಲುವೆ ಪ್ರಕೃತಿ ಸೌಂದರ್ಯಗೆ ಬಿಗ್ ಪ್ರಾಜೆಕ್ಟ್‍ನಲ್ಲಿ ಅವಕಾಶ

ಕನ್ನಡ ಚಿತ್ರರಂಗದಲ್ಲಿ ಇದೀಗ ಸಾಕಷ್ಟು ಹೊಸ, ಯುವ ಪ್ರತಿಭೆಗಳ ಆಗಮನವಾಗುತ್ತಿದೆ. ಹಾಗೆ ಬಂದವರಲ್ಲಿ ಸರಳ ಸೌಂರ್ಯವತಿಯಾದ ಪ್ರಕೃತಿ ಸೌಂದರ್ಯ ಕೂಡ ಒಬ್ಬರು. ದುನಿಯಾ ವಿಜಯ್ ನಿರ್ದೇಶನದ ಭೀಮ ಚಿತ್ರದಲ್ಲಿ ಡ್ರಾಗನ್ ಮಂಜು ಪತ್ನಿಯಾಗಿ ರಗಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದ ಇವರ ಪಾತ್ರ ಎಲ್ಲರ ಗಮನ ಸೆಳೆದಿತ್ತು.

ಮೂಲತ: ತುಮಕೂರಿನವರಾದ ಪ್ರಕೃತಿ ಸೌಂದರ್ಯ ಚಿಕ್ಕಂದಿನಿಂದಲೇ ಕಲೆಯ ನಂಟು ಬೆಳೆಸಿಕೊಂಡವರು. ಇವರ ತಾತ ಕೂಡ ರಂಗಭೂಮಿ ಕಲಾವಿದರಾಗಿ ಅನೇಕ ನಾಟಕಗಳಲ್ಲಿ ಅಭಿನಯಿಸಿದ್ದರು. ಕಾಲೇಜು ದಿನಗಳಲ್ಲಿ ಗಾಯಕಿಯಾಗಿ ಗುರುತಿಸಿಕೊಂಡಿದ್ದ ಪ್ರಕೃತಿ ಸೌಂದರ್ಯಗೆ ಸ್ನೇಹಿತೆಯರೆಲ್ಲ ನೀನು ಚೆನ್ನಾಗಿದ್ದೀಯ, ಹಾಡುವುದಕ್ಕಿಂತ ಆಯಕ್ಟಿಂಗ್ ಮಾಡಿದರೆ ಚೆನ್ನಾಗಿರುತ್ತೆ ಎಂದು ಸಲಹೆ ನೀಡಿದರಂತೆ. ಆ ಮಾತನ್ನೇ ಆಳವಾಗಿ ತೆಗೆದುಕೊಂಡ ಪ್ರಕೃತಿ ನಾನು ಕಲಾವಿದೆಯಾಗಿ ಬೆಳೆಯಬೇಕು ಎಂದು ಕನಸು ಕಟ್ಟಿಕೊಂಡಿದ್ದಾರೆ.

ನಂತರ ಸ್ನೇಹಿತರೊಬ್ಬರ ಸಹಾಯದಿಂದ ಕಿರುತೆರೆಯ ಗೀತಾ ಧಾರಾವಾಹಿಯಲ್ಲಿ ಸಣ್ಣದೊಂದು ಪಾತ್ರ ಗಿಟ್ಟಿಸಿಕೊಂಡಿದ್ದಾರೆ. ಆನಂತರ ಸಿಕ್ಕ ದೊಡ್ಡ ಅವಕಾಶವೇ ಕನ್ಯಾದಾನ. ಈ ಸೀರಿಯಲ್ ನ ಲೀಡ್ ರೋಲ್ ನಲ್ಲಿ ಕಾಣಿಸಿಕೊಂಡ ಪ್ರಕೃತಿ ಸೌಂದರ್ಯ ಅವರ ಪಾತ್ರ, ಅಭಿನಯ ಎಲ್ಲರ ಗಮನ ಸೆಳೆಯಿತು. ಅದಾದ ನಂತರ ದುನಿಯಾ ವಿಜಯ್ ಅವರು, ತಮ್ಮ ಭೀಮ ಚಿತ್ರದ ಪ್ರಮುಖ ಪಾತ್ರಕ್ಕೆ ಇವರೇ ಸೂಕ್ತ ಎಂದು ಆಯ್ಕೆ ಮಾಡಿಕೊಂಡಿದ್ದಾರೆ. ಭೀಮ ಚಿತ್ರದ ಪಾತ್ರ ನೋಡಿ, ತೆಲುಗು ಚಿತ್ರರಂಗದ ಕಡೆಯಿಂದಲೂ ಇವರಿಗೆ ಹಲವಾರು ಆಫರ್ ಗಳು ಬರುತ್ತಿವೆ. ಈಗಾಗಲೇ ತೆಲುಗು ಸೀರಿಯಲ್ ಒಂದರಲ್ಲಿ ಕೂಡ ಪ್ರಕೃತಿ ಸೌಂದರ್ಯ ಅಭಿನಯಿಸಿದ್ದಾರೆ ಕೂಡ.

ಸದ್ಯ ಕನ್ನಡದ ಬಿಗ್ ಪ್ರಾಜೆಕ್ಟ್ ವೊಂದರಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿದ್ದು, ಅದರ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುವುದಾಗಿ ಹೇಳಿದ ಪ್ರಕೃತಿ ಸೌಂದರ್ಯ ಅವರಿಗೆ ತಾನು ಜನರು ಗುರುತಿಸುವಂಥ ಹಾಗೂ ಅಭಿನಯಕ್ಕೆ ಹೆಚ್ಚು ಅವಕಾಶ ಇರುವಂಥ ಪಾತ್ರಗಳಲ್ಲಿ ಕಾಣಿಸಿಕೊಳ್ಳಬೇಕೆಂಬ ಕನಸಿದೆ. ಇದೇ ತಿಂಗಳ 24ರಂದು ಪ್ರಕೃತಿ ಸೌಂದರ್ಯ ಅವರ ಹುಟ್ಟುಹಬ್ಬವಿದ್ದು ಇದೇ ಸಂದರ್ಭದಲ್ಲಿ ಹೊಸ ಚಿತ್ರಗಳ ಆಫರ್ ಬರುತ್ತಿರುವುದು ಅವರಿಗೆ ಡಬಲ್ ಖುಷಿ ನೀಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು