LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

 ಭುಗಿಲೆದ್ದ ಹಿಂಸಾಚಾರ: ಕೂಡಲೇ ದೇಶ ತೊರೆಯಿರಿ; ಭಾರತೀಯರಿಗೆ ವಿದೇಶಾಂಗ ಸಚಿವಾಲಯ ಸೂಚನೆ!

ನವದೆಹಲಿ: ಇಸ್ಲಾಮಿಕ್ ಬಂಡುಕೋರರು ಹಾಗೂ ಸಿರಿಯಾ ಸರ್ಕಾರದ ವಿರುದ್ಧದ ಅಂತರ್ಯುದ್ಧ ತಾರಕಕ್ಕೇರಿದ್ದು, ಇದರ ಪರಿಣಾಮ ಸಿರಿಯಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಇದೀಗ ಸಿರಿಯಾದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ವಿದೇಶಾಂಗ ಸಚಿವಾಲಯ ಡಿಸೆಂಬರ್ 6ರ ಮಧ್ಯರಾತ್ರಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸಿರಿಯಾಗೆ ಅಥವಾ ಸಿರಿಯಾ ಮೂಲಕ ಯಾರೂ ಪ್ರಯಾಣಿಸಬೇಡಿ ಎಂದು ಎಚ್ಚರಿಸಿದೆ.

ಜೊತೆಗೆ ಸಿರಿಯಾಲ್ಲಿರುವ ಭಾರತೀಯ ನಾಗರೀಕರು ಈ ತಕ್ಷಣವೇ ಹೊರಟುಬರಲು ಸೂಚಿಸಿದೆ. ಲಭ್ಯವಿರುವ ವಾಣಿಜ್ಯ ವಿಮಾನಗಳ ಮೂಲಕ ತಕ್ಷಣವೆ ಹೊರಟು ಬರಲು ಸೂಚನೆ ನೀಡಿದೆ.

ಸಿರಿಯಾದಲ್ಲಿನ ಪರಿಸ್ಥಿತಿ ಹದಗೆಡುತ್ತಿದ್ದು, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಆದೇಶದವರೆಗೂ ಭಾರತೀಯ ಪ್ರಜೆಗಳು ಸಿರಿಯಾ ಭೇಟಿಯನ್ನು ನಿಯಂತ್ರಿಸಬೇಕು. ಪ್ರಸ್ತುತ ಸಿರಿಯಾದಲ್ಲಿರುವ ಭಾರತೀಯ ಪ್ರಜೆಗಳು ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಿ. ಭಾರತೀಯ ಪ್ರಜೆಗಳಿಗೆ ತುರ್ತು ಸಹಾಯವಾಣಿ ಸಂಖ್ಯೆ +963 993385973 ಹಾಗೂ [email protected] ಇಮೇಲ್ ಐಡಿ ಮೂಲಕ ಸಂಪರ್ಕಿಸುವಂತೆ ತಿಳಿಸಿವೆ.

ಜೊತೆಗೆ ಈ ತಕ್ಷಣಕ್ಕೆ ಹೊರಡಲು ಸಾಧ್ಯವಾಗುವ ಭಾರತೀಯರಿಗೆ ವಾಣಿಜ್ಯ ವಿಮಾನಗಳು ಲಭ್ಯವಿದೆ. ಈ ವಿಮಾನದ ಮೂಲಕ ಭಾರತಕ್ಕೆ ವಾಪಾಸ್ ಆಗುವಂತೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಅವರು ಮಾತನಾಡಿ, ಸಿರಿಯಾದ ಉತ್ತರದಲ್ಲಿ ಇತ್ತೀಚಿನ ಪರಿಸ್ಥಿತಿಯನ್ನು ಗಮನಿಸಲಾಗಿದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಸಿರಿಯಾದಲ್ಲಿ ಸುಮಾರು 90 ಭಾರತೀಯರಿದ್ದಾರೆ, ಇದರಲ್ಲಿ 14 ಮಂದಿ ಯುಎನ್ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ವಿದೇಶಾಂಗ ಸಚಿವಾಲಯ ಸುರಕ್ಷತೆ ಮತ್ತು ಭದ್ರತೆಗಾಗಿ ಭಾರತೀಯರೊಂದಿಗೆ ನಿಕಟ ಸಂಪರ್ಕದಲ್ಲಿದೆ ಎಂದು ಹೇಳಿದ್ದಾರೆ.

ಸಿರಿಯಾದಲ್ಲಿ ರಷ್ಯಾ ಹಾಗೂ ಇರಾನ್ ಬೆಂಬಲಿತ ಬಶರ್ ಅಲ್ ಅಸ್ಸಾದ್ ನೇತೃತ್ವದ ಸರ್ಕಾರವಿದೆ. ಆದರೆ, ಈ ಸರ್ಕಾರ ವಿರುದ್ಧ ಸ್ಥಳೀಯ ಇಸ್ಲಾಮಿಕ್ ಭಯೋತ್ಪಾದಕ ಗುಂಪು ತಿರುಗಿ ಬಿದ್ದಿದೆ. ಟರ್ಬಿ ಬೆಂಬಿಲಿತ ಈ ಇಸ್ಲಾಮಿಕ್ ಬಂಡಾಯ ಗುಂಪು ಕಳೆದ ವಾರ ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ಕಿತ್ತೆಸೆಯುವ ಎಚ್ಚರಿಕೆ ನೀಡಿತ್ತು. ಸಿರಿಯಾದ ಹಲವು ನಗರಗಳ ಮೇಲೆ ಈ ಗುಂಪು ದಾಳಿ ನಡೆಸಿದೆ. ಭಾರೀ ಹಿಂಸಾಚಾರದ ಮೂಲಕ ನಗರಗಳನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಸರ್ಕಾರದ ಪ್ರಮುಖ ಕೇಂದ್ರಗಳನ್ನು ಗುರಿ ಮಾಡಿಕೊಂಡಿದ್ದಾರೆ.

ಈಗಾಗಲೇ ಹಲವು ನಗರಗಳು ಈ ಭಯೋತ್ಪಾದಕರ ಕೈಸೇರಿದೆ. ಅಲೆಪ್ಪೋ, ಹಮಾ ಸೇರಿದಂತೆ ಕೆಲ ನಗರಗಳು ಇದೀಗ ಬಂಡಾಯ ಗುಂಪಿನ ಕೈಯಲ್ಲಿದೆ. ಇಲ್ಲಿ ಹಿಂಸಾಚಾರ ಹೆಚ್ಚಾಗಿದೆ. ಈ ಗುಂಪು ಡಮಾಸ್ಕಸ್ ಸೇರಿದಂತೆ ಕೆಲ ನಗರಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಹಲವು ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಅಧ್ಯಕ್ಷ ಬಶರ್ ಅಲ್ ಆಡಳಿತ ಕೇಂದ್ರಗಳಿಂದ ಕೇವಲ 5 ರಿಂದ 10 ಕಿಲೋಮೀಟರ್ ದೂರದ ವರೆಗೂ ಈ ಬಂಡಾಯ ಗುಂಪು ಹಿಡಿತ ಸಾಧಿಸಿದೆ.

ಬಶರ್ ಅಲ್ ಅಸ್ಸಾದ್ ಕಿತ್ತೆಸೆಯಲು ಹಲವು ಹೋರಾಟಗಳು ನಡೆಯುತ್ತಿದೆ. ಇದಕ್ಕೆ ಬಂಡಾಯ ಗುಂಪು, ಇಸ್ಲಾಮಿಕ್ ಭಯೋತ್ಪಾದಕ ಗುಂಪುಗಳು ಸೇರಿಕೊಂಡಿದೆ. ಸಂಪೂರ್ಣ ಸಿರಿಯಾ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಈ ಬಂಡಾಯ ಹಾಗೂ ಇಸ್ಲಾಮಿಕ್ ಬಯೋತ್ಪಾದಕ ಗುಂಪುಗಳು ಸಜ್ಜಾಗಿದೆ. ಹೀಗಾಗಿ ಸಿರಿಯಾದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು