LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಭೈರತಿ ರಣಗಲ್' ಸಕ್ಸಸ್ ಮೀಟ್

`ಭೈರತಿ ರಣಗಲ್' ಚಿತ್ರ ಕಳೆದ ನವೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. "ಮಫ್ತಿ" ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರವನ್ನು ಕನ್ನಡ ಕಲಾಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕುಟುಂಬ ಸಮೇತ ಬಂದು ಜನರು ಈ ಸಿನಿಮಾವನ್ನು ನೋಡುತ್ತಿದ್ದಾರೆ. ಕನ್ನಡ ಚಿತ್ರಗಳಿಗೆ ಜನರು ಬರುತ್ತಿಲ್ಲ ಎಂಬ ಮಾತನ್ನು "ಭೈರತಿ ರಣಗಲ್" ಚಿತ್ರ ದೂರ ಮಾಡಿದೆ. ಶಿವರಾಜಕುಮಾರ್ ಅವರ ಅದ್ಭುತ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಯಶಸ್ಸಿನ ಖುಷಿಯನ್ನು ಹಂಚಿಕೊಳ್ಳಲು ಆಯೋಜಿಸಲಾಗಿದ್ದ ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

"ಮಫ್ತಿ" ಚಿತ್ರದಲ್ಲಿ ನನ್ನ "ಭೈರತಿ ರಣಗಲ್" ಪಾತ್ರವನ್ನು ನೀವು ಇಷ್ಟಪಟ್ಟಿದ್ದಿರಿ. ಆದರೆ "ಭೈರತಿ ರಣಗಲ್" ಚಿತ್ರದ ರಣಗಲ್ ಪಾತ್ರವನ್ನು ನೀವು ಹೃದಯಕ್ಕೆ ತೆಗೆದುಕೊಂಡಿದ್ದೀರ. ನಿಮಗೆ ತುಂಬು ಹೃದಯದ ಧನ್ಯವಾದ ಎಂದು ಅಭಿಮಾನಿಗಳಿಗೆ ವಿಶೇಷ ಧನ್ಯವಾದ ತಿಳಿಸಿ ಮಾತನಾಡಿದ ಶಿವರಾಜಕುಮಾರ್, ನಮ್ಮ ಸಂಸ್ಥೆಯಿಂದ ನಿರ್ಮಾಣವಾದ ಎರಡನೇ ಚಿತ್ರವಿದು. ಒಳ್ಳೆಯ ಚಿತ್ರಗಳನ್ನು ನೀಡಿದಾಗ ಜನರು ಚಿತ್ರಮಂದಿರಕ್ಕೆ ಬರುತ್ತಾರೆ ಎಂಬುದಕ್ಕೆ ಈ ಚಿತ್ರ ಉದಾಹರಣೆ. ಈ ಯಶಸ್ಸು ನನ್ನೊಬ್ಬನದಲ್ಲ. ಇಡೀ ತಂಡದು.

ಮುಂದೆ "ಮಫ್ತಿ 2" ಮಾಡಬೇಕೆಂಬುದು ಅಭಿಮಾನಿಗಳ ಆಸೆ. ಖಂಡಿತ ಮಾಡುತ್ತೇನೆ. ಆದರೆ ಶೀರ್ಷಿಕೆ "ಮಫ್ತಿ 2" ಅಂತ ಇರುವುದಿಲ್ಲ. ಸದ್ಯದಲ್ಲೇ ಆ ಚಿತ್ರದ ಶೀರ್ಷಿಕೆಯನ್ನು ತಿಳಿಸುತ್ತೇನೆ ಎಂದರು.ಈ ಚಿತ್ರ ಆಗಲು ಮುಖ್ಯ ಕಾರಣ ಶಿವಣ್ಣ ಅಭಿಮಾನಿಗಳು. ಅವರುಗಳು "ಮಫ್ತಿ" ಚಿತ್ರದ ಯಶಸ್ಸಿನ ನಂತರ, "ರಣಗಲ್" ಚಿತ್ರ ಮಾಡಿ ಎಂದರು.

ಈ ಚಿತ್ರ ಆಗಲು ಅವರೆ ಮುಖ್ಯ ಕಾರಣ ಎನ್ನಬಹುದು. ಆನಂತರ ನನ್ನನ್ನು ಕರೆದು ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡು "ಭೈರತಿ ರಣಗಲ್" ಚಿತ್ರ ಮಾಡಲು ಅಡ್ವಾನ್ಸ್ ನೀಡಿದರು.ಅವರಿಗೆ ಹಾಗೂ ರಣಗಲ್ ಪಾತ್ರಕ್ಕೆ ಜೀವ ತುಂಬಿದ ಶಿವರಾಜಕುಮಾರ್ ಅವರಿಗೆ ಮತ್ತು ಸಹಕಾರ ನೀಡಿದ ನನ್ನ ಇಡೀ ತಂಡಕ್ಕೆ ನನ್ನ ತುಂಬು ಹೃದಯದ ಧನ್ಯವಾದ ಎಂದರು ನಿರ್ದೇಶಕ ನರ್ತನ್.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು