LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಭೈರಾದೇವಿ’ ಚಿತ್ರದ ಟ್ರೇಲರ್‍ಗೆ ಮೆಚ್ಚುಗೆಯ ಮಹಾಪೂರ

ರಾಧಿಕಾ ಕುಮಾರಸ್ವಾಮಿ ನಿರ್ಮಾಣ ಹಾಗೂ ನಟನೆಯ ಈ ಚಿತ್ರ ಅಕ್ಟೋಬರ್ 3 ರಂದು ತೆರೆಗೆಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ನಾಯಕಿಯಾಗೂ ನಟಿಸಿರುವ ಬಹು ನಿರೀಕ್ಷಿತ "ಭೈರಾದೇವಿ" ಸಿನಿಮಾ ಅಕ್ಟೋಬರ್ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಅದರ ಪೂರ್ವಭಾವಿಯಾಗಿ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ರಮೇಶ್ ಅರವಿಂದ್, ರಾಧಿಕಾ ಕುಮಾರಸ್ವಾಮಿ, ಅನು ಪ್ರಭಾಕರ್, ನಿರ್ದೇಶಕ ಶ್ರೀಜೈ, ನೃತ್ಯ ನಿರ್ದೇಶಕ ಮೋಹನ್, ಸಹ ನಿರ್ಮಾಪಕರಾದ ರವಿರಾಜ್, ಯಾದವ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟ್ರೇಲರ್ ಬಿಡುಗಡೆ ನಂತರ ಮಾತನಾಡಿದ ರಾಧಿಕಾ ಕುಮಾರಸ್ವಾಮಿ, ನಿರ್ದೇಶಕ ಶ್ರೀಜೈ ನಮ್ಮ ಮನೆಗೆ ಬಂದು ಕಥೆ ಹೇಳಿದರು. ಕಥೆ ಇಷ್ಟಾವಾಗಿ, ಈ ಚಿತ್ರ ನಿರ್ಮಾಣಕ್ಕೆ ಹಾಗೂ ನಟಿಸಲು ಒಪ್ಪಿಕೊಂಡೆ. ಈ ಚಿತ್ರ ಆರಂಭವಾದಗಿನಿಂದ ಬಿಡುಗಡೆಯವರೆಗೂ ಸಾಕಷ್ಟು ಅಡೆತಡೆಗಳಾಗಿದೆ. ಹಾಗಾಗಿ ನಾನು ಚಿತ್ರದ ಬಿಡುಗಡೆ ಯೋಚನೆ ಮಾಡಿರಲಿಲ್ಲ. ಕಳೆದ ಒಂದು ತಿಂಗಳ ಹಿಂದೆ ವಿಮಾನ ನಿಲ್ದಾಣದಲ್ಲಿ ಸಿಕ್ಕ ಗಂಡ ಹೆಂಡತಿ ಹೇಳಿದ ಮಾತೊಂದರ ಸ್ಪೂರ್ತಿಯಿಂದ ಚಿತ್ರವನ್ನು ಒಂದು ತಿಂಗಳೊಳಗೆ ಬಿಡುಗಡೆ ಮಾಡೋಣ ಎಂದು ನನ್ನ ಅಣ್ಣನಿಗೆ ಹೇಳಿದೆ. ಈ ಸಂದರ್ಭದಲ್ಲಿ ಒಂದು ಮಾತು ಹೇಳುತ್ತೇನೆ.

"ಭೈರಾದೇವಿ" ಚಿತ್ರ ಪ್ರೇಕ್ಷಕರಿಗೆ ಇಷ್ಟ ಆದರೆ ಇನ್ನೊಂದು ಸಿನಿಮಾ ಮಾಡುತ್ತೀನಿ. ಇಷ್ಟ ಆಗಲಿಲ್ಲ ಎಂದರೆ ಚಿತ್ರರಂಗದಿಂದ ದೂರ ಆಗಿಬಿಡುತ್ತೀನಿ. ಇದು ದೊಡ್ಡ ಯಶಸ್ಸಾಗುತ್ತದೆ ಎಂಬ ನಂಬಿಕೆ ನನಗಿದೆ. ಕುಟುಂಬ ಸಮೇತ ನೋಡುವಂತಹ ಸಿನಿಮಾ ಇದು. ಈ ಚಿತ್ರದ ಸಂಪೂರ್ಣ ಕ್ರೆಡಿಟ್ ನಿರ್ದೇಶಕರಿಗೆ ಸಲ್ಲಬೇಕು? ಎಂದರು.

ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ. ಅರವಿಂದ್ ನನ್ನ ಪಾತ್ರದ ಹೆಸರು. ಯಾವುದೇ ತರಹದ ರೌಡಿಗಳನ್ನು ಸದ್ದೆ ಬಡೆಯುವ ಖಡಕ್ ಪೊಲೀಸ್ ಆಫೀಸರ್ ನಾನು. ಆದರೆ, ಈ ಚಿತ್ರದಲ್ಲಿ ನನ್ನಗಿರುವ ವೈರಿ ಈ ರಾಜ್ಯದವರಲ್ಲ, ಈ ದೇಶದವರಲ್ಲ, ಬದಲಿಗೆ ಈ ಲೋಕದಲ್ಲಿರುವವರೇ ಅಲ್ಲ. ಬೇರೆ ಲೋಕದಿಂದ ಬಂದ ಒಂದು ಶಕ್ತಿಯ ವಿರುದ್ಧ ಹೋರಾಡಬೇಕು.

ಇನ್ನು ಈ ಚಿತ್ರದ ಟ್ರೇಲರ್ ನೋಡಿದಾಗ, ನನಗೆ "ಆಪ್ತಮಿತ್ರ" ಚಿತ್ರ ನೆನಪಾಯಿತು. ರಾಧಿಕಾ ಕುಮಾರಸ್ವಾಮಿ ನಿರ್ಮಾಪಕಿ ಹಾಗೂ ನಾಯಕಿಯಾಗಿ ಎರಡು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಾಳಿ ಪಾತ್ರದಲ್ಲಂತೂ ಅವರ ಅಭಿನಯ ಮನೋಜ್ಞ. ಅವರು ಆ ಪಾತ್ರದಲ್ಲಿ ಅಭಿನಯಿಸುತ್ತಿದ್ದಾಗ ಅವರೊಂದಿಗೆ ಮಾತನಾಡಲಿಕ್ಕೆ ಭಯವಾಗುತ್ತಿತ್ತು ಎಂದು ನಟ ರಮೇಶ್ ಅರವಿಂದ್ ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು