LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಭೈರಾದೇವಿ ಬಿಡುಗಡೆ

ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ "ಭೈರಾದೇವಿ" ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಬಿಡುಗಡೆಗೂ ಮುನ್ನ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.
ನಾನು ಹೆಣ್ಣು ಅಘೋರಿಯ ಬಗ್ಗೆ ಪುಸ್ತಕದಲ್ಲಿ ಓದಿದ್ದೆ. ಅದರ ಬಗ್ಗೆ ಒಂದು ಕಥೆಯನ್ನು ಸಿದ್ದಮಾಡಿಕೊಂಡೆ.

ಆನಂತರ ರವಿರಾಜ್ ಅವರ ಪರಿಚಯವಾಯಿತು. ರವಿರಾಜ್ ಅವರು ನಾನು ಹೇಳಿದ ಕಥೆಯನ್ನು ರೆಕಾರ್ಡ್ ಮಾಡಿಕೊಂಡು ರಾಧಿಕಾ ಕುಮಾರಸ್ವಾಮಿ ಅವರಿಗೆ ಕಥೆ ಕೇಳಿಸಿದರು. ಕಥೆ ಇಷ್ಟಪಟ್ಟ ರಾಧಿಕಾ ಕುಮಾರಸ್ವಾಮಿ ಅವರು "ಭೈರಾದೇವಿ" ಚಿತ್ರಕ್ಕೆ ಚಾಲನೆ ನೀಡಿದರು. ಈವರೆಗೂ ನೀವು ನೋಡಿರದ ಪಾತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ಕಾಣಿಸಿಕೊಳ್ಳಲಿದ್ದಾರೆ.

ಚಿತ್ರದ ಮತ್ತೊಂದು ಪ್ರಮುಖಪಾತ್ರದ ಕುರಿತು ನಾನು ಬರೆಯಬೇಕಾದರೆ, ಈ ಪಾತ್ರವನ್ನು ರಮೇಶ್ ಅರವಿಂದ್ ಅವರು ಮಾಡಿದರೆ ಚೆನ್ನಾಗಿರುತ್ತದೆ ಅಂದುಕೊಂಡೆ. ಅವರು ಕಥೆ ಮೆಚ್ಚಿ ಒಪ್ಪಿಕೊಂಡರು. ಅನು ಪ್ರಭಾಕರ್ ಹಾಗೂ ರಂಗಾಯಣ ರಘು ಅವರ ಪಾತ್ರಗಳು ತುಂಬಾ ಚೆನ್ನಾಗಿದೆ. ಅಘೋರಿಯಾಗಿ ರವಿಶಂಕರ್ ಅವರು ನಟಿಸಿದ್ದಾರೆ. ಹಾರಾರ್ ಜಾನರ್ ನ ಚಿತ್ರವಾಗಿರುವುದರಿಂದ ಶಬ್ದಗಳೇ ಚಿತ್ರದ ಹೈಲೆಟ್. ಇಲ್ಲಿನ ಚಿತ್ರಮಂದಿರಗಳಲ್ಲಿ ಅಂತಹ ಸೌಂಡ್ ಎಫೆಕ್ಟ್ ಇಲ್ಲ ಎಂದು ತಿಳಿಸಿದ ನಿರ್ದೇಶಕ ಶ್ರೀಜೈ, ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ನಿರ್ಮಾಪಕರಿಗೆ, ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಧನ್ಯವಾದ ತಿಳಿಸಿದರು.

ನಾನು ಈ ಚಿತ್ರ ಒಪ್ಪಿಕೊಳ್ಳಲು ಮೂರು ಕಾರಣ ಎಂದು ತಿಳಿಸಿದ ನಟ ರಮೇಶ್ ಅರವಿಂದ್ ಅವರು, ಮೊದಲು ಶ್ರೀಜೈ ಮಾಡಿಕೊಂಡಿರುವ ಕಥೆ , ಎರಡನೆಯದು "ಆಪ್ತಮಿತ್ರ" ನಂತರ ನಾನು ಹಾರಾರ್ ಚಿತ್ರ ಮಾಡಿಲ್ಲ ಹಾಗೂ ಮೂರನೆಯದು ಈ ತರಹದ ಪಾತ್ರವನ್ನು ಮಾಡಿ ಬಹಳ ವರ್ಷಗಳೇ ಆಗಿದೆ. ಹಾರಾರ್ ನೊಂದಿಗೆ ಕೌಟುಂಬಿಕ ಕಥಾಹಂದರವನ್ನು ನಿರ್ದೇಶಕರು ನಿರೂಪಣೆ ಮಾಡಿರುವ ರೀತಿ ಚೆನ್ನಾಗಿದೆ. ರಾಧಿಕಾ ಕುಮಾರಸ್ವಾಮಿ ಅವರು ಬರೀ ನಟಿಯಷ್ಟೇ ಅಲ್ಲ. ಈ ಚಿತ್ರದ ನಿರ್ಮಾಪಕರು ಕೂಡ. ಯಾವುದೇ ಕೊರತೆ ಬರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಎಲ್ಲರ ಹಾರೈಕೆ ಇರಲಿ ಎಂದರು ನಟ ರಮೇಶ್ ಅರವಿಂದ್.

ಅನು ಪ್ರಭಾಕರ್ ಹಾಗೂ ರಂಗಾಯಣ ರಘು ತಮ್ಮ ಅನುಭವವನ್ನು ಹಂಚಿಕೊಂಡರು. ಸಾಹಸ ನಿರ್ದೇಶನದ ಬಗ್ಗೆ ರವಿವರ್ಮ ಮಾತನಾಡಿದರು. ಸಹ ನಿರ್ಮಾಪಕ ಯಾದವ್ ಪತ್ರಿಕಾಗೋಷ್ಠಿಯಲ್ಲಿದ್ದರು.ಜೆ.ಎಸ್.ವಾಲಿ ಛಾಯಾಗ್ರಹಣ, ಕೆ.ಕೆ.ಸೆಂಥಿಲ್ ಪ್ರಸಾದ್ ಸಂಗೀತ ನಿರ್ದೇಶನ ಹಾಗೂ ರವಿಚಂದ್ರನ್ ಅವರ ಸಂಕಲನ "ಭೈರಾದೇವಿ" ಚಿತ್ರಕ್ಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು