LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಮಂಗಳೂರಿಗರ ಗಮನ ಸೆಳೆದ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್

ಮಂಗಳೂರು: ತಣ್ಣೀರು ಬಾವಿ ಕಡಲತೀರದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 2025ರ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್ ಯಶಸ್ವಿಯಾಗಿ ನೆರವೇರಿತು.ಜಿಲ್ಲೆಯ ತಣ್ಣೀರು ಬಾವಿ ಕಡಲತೀರದಲ್ಲಿ ಮಂಗಳೂರು ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಕುಸ್ತಿ ಸಂಘದ ವತಿಯಿಂದ ತಪಸ್ಯ ಫೌಂಡೇಶನ್ ಸಹಕಾರದೊಂದಿಗೆ ಎರಡು ದಿನಗಳ ಕಾಲ ಆಯೋಜಿಸಿದ್ದ ರಾಜ್ಯಮಟ್ಟದ ಕುಸ್ತಿ ಚಾಂಪಿಯನ್ ಶಿಪ್ -2025 ನಲ್ಲಿ ಮಂಗಳೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 110 ಕುಸ್ತಿಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, 15ಕ್ಕೂ ಹೆಚ್ಚು ನುರಿತ ಕುಸ್ತಿ ತಾಂತ್ರಿಕ ಸಿಬ್ಬಂದಿಗಳು ಪಂದ್ಯಾವಳಿಗಳನ್ನು ನಡೆಸಿಕೊಟ್ಟರು.

ವಿವಿಧ ದೇಹತೂಕದ ವಿಭಾಗದಲ್ಲಿ ಸ್ಪರ್ದಿಸಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದ 46 ಕುಸ್ತಿಪಟುಗಳಿಗೆ ಪದಕ ಮತ್ತು ಪ್ರಮಾಣಪತ್ರವನ್ನು ವಿತರಿಸಿ ಗೌರವಿಸಲಾಯಿತು.
ಬೀಚ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಕುಸ್ತಿಪಟುಗಳು ತಮ್ಮ ಅದ್ಬುತ ಕುಸ್ತಿ ಪ್ರದರ್ಶನವನ್ನು ನೀಡುವ ಮೂಲಕ ಮಂಗಳೂರಿಗರ ಗಮನ ಸೆಳೆದರು.ಸಮಗ್ರ ಪ್ರಶಸ್ತಿ ಪಡೆದ ಪುರುಷರ ವಿಭಾಗದಲ್ಲಿ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಅದ್ಬುತ ಕುಸ್ತಿ ಪ್ರದರ್ಶನ ತೋರಿದ ದಾವಣಗೆರೆ ಜಿಲ್ಲಾ ಕುಸ್ತಿಪಟುಗಳು ಅಂಡರ್ 17 ಮತ್ತು ಹಿರಿಯರ ಎರಡೂ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಸಮಗ್ರ ಪ್ರಶಸ್ತಿಯನ್ನು ಪಡೆದರು, ಅಂಡರ್- 17 ವಿಭಾಗದಲ್ಲಿ ದ್ವೀತಿಯ ಸ್ಥಾನವನ್ನು ಬಾಗಲಕೋಟೆ ಜಿಲ್ಲಾ ಕುಸ್ತಿಪಟುಗಳು, ಹಿರಿಯ ವಿಭಾಗದಲ್ಲಿ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಕುಸ್ತಿಪಟುಗಳು ಪಡೆದುಕೊಂಡರು.

ಅಂಡರ್- 17 ಮಹಿಳಾ ವಿಭಾಗದಲ್ಲಿ ಹಳಿಯಾಳ ಮಹಿಳಾ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡರೆ, ದ್ವೀತಿಯ ಸ್ಥಾನವನ್ನು ಬೆಳಗಾವಿ ಜಿಲ್ಲಾ ಕುಸ್ತಿಪಟುಗಳು ಪಡೆದುಕೊಂಡರು. ಸಮಗ್ರ ಪ್ರಶಸ್ತಿಯನ್ನು ಪಡೆದ ಪುರುಷ ಮತ್ತು ಮಹಿಳಾ ಅಂಡರ್-17 ಮತ್ತು ಹಿರಿಯರ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಗಳಿಗೆ ಆಕರ್ಷಣೆಯ ಟ್ರೋಫಿಯನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ಕುಸ್ತಿ ಸಂಘದ ಉಪಾಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಸುಜಿತ್ ರೈ, ಖಜಾಂಚಿ ಶ್ರೀನಿವಾಸ್ ಅಂಗರಕೋಡಿ, ಜಂಟಿ ಕಾರ್ಯದರ್ಶಿ ಕುಮಾರ್.ಜೆ, ಮಿಥುನ್ ದೇವಾಡಿಗ, ಸಂಜಯ್ ನಾಯಕ್, ಕರ್ನಾಟಕ ಬೀಚ್ ರೆಸ್ಲಿಂಗ್ ಕಮಿಟಿಯ ಸಂಚಾಲಕ ಪ್ರಸಾದ್ ಶೆಟ್ಟಿ, ಕರ್ನಾಟಕ ರೆಸ್ಲಿಂಗ್ ಅಸೋಸಿಯೇಷನ್ ನ ಮೀಡಿಯಾ ಅಕ್ರಿಡಿಟೇಶನ್ ಸದಸ್ಯರಾದ ರಾಮದಾಸ್ ಶೆಟ್ಟಿ, ಕರ್ನಾಟಕ ಕುಸ್ತಿ ಸಂಘದ ಸದಸ್ಯರಾದ ಸರ್ಮಥ್ ಭಂಡಾರಿ, ಕೇಂದ್ರ ಕಛೆರಿ ಸಿಇಓ ನಾಗೇಶ್.ಎಸ್, ರಾಜೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು