LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಮಂಡ್ಯ: ಸಂವಿಧಾನದ ಆಶಯದಂತೆ ಮೋದಿ ಸರ್ಕಾರ ಕಾರ್ಯನಿರ್ವಹಣೆ- ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ

ಮಳವಳ್ಳಿ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ನಿರ್ಮಿಸಲಾಗಿರುವ 'ಬೌದ್ಧ ಅಂಬೇಡ್ಕರ್ ಮಹಾದ್ವಾರ'ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತ್ಯಂತ ಅರ್ಥಪೂರ್ಣವಾಗಿ ನಿರ್ಮಿಸಲಾಗಿರುವ ಈ ಮಹಾದ್ವಾರ ಸಮ ಸಮಾಜದ ಸಂಕೇತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಐತಿಹಾಸಿಕವಾಗಿ ಅಂಬೇಡ್ಕರ್ ಅವರಿಗೆ ಬಹಳ ಅಪಚಾರವಾಗಿತ್ತು. ಅದನ್ನು ಸರಿಪಡಿಸಿ ಮನುಕುಲ ಇರುವವರೆಗೂ ಬಾಬಾ ಸಾಹೇಬ್ ಅವರನ್ನು ಸ್ಮರಿಸಿಕೊಳ್ಳುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದರು.

ದಲಿತರಿಗೆ ದೇವೆಗೌಡರ ಕೊಡುಗೆ: ದೇವೇಗೌಡರು ದಲಿತರ ಉದ್ಧಾರಕ್ಕಾಗಿ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ಗಂಗಾ ಕಲ್ಯಾಣ ಯೋಜನೆಯನ್ನು ಅವರು ಜಾರಿಗೆ ತಂದು ಅನೇಕರಿಗೆ ಸಹಾಯ ಮಾಡಿದ್ದರು. ಸಚಿವರಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ದಲಿತರ ಉದ್ಧಾರಕ್ಕೆ ಬಹುದೊಡ್ಡ ಕಾಣಿಕೆ ನೀಡಿದ್ದಾರೆ ಎಂದು ಸಚಿವರು ಹೇಳಿದರು.

ಮೊದಲು ಮೀಸಲು ಸೌಲಭ್ಯ ಕೇವಲ ವಿಧಾನಸಭೆ ,ಲೋಕಸಭೆ ಕ್ಷೇತ್ರಗಳಿಗೆ ಮೀಸಲಾಗಿತ್ತು. ದೇವೇಗೌಡರು ಆ ಮೀಸಲು ಸೌಲಭ್ಯವನ್ನು ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಸೇರಿ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿಯೂ ಜಾರಿಗೆ ತಂದರು. ಹಾಸನ ಜಿಲ್ಲಾ ಪಂಚಾಯತಿ ಅಧ್ಯಕ್ಷರನ್ನಾಗಿ ಎಂಎ ಪದವೀಧರನಾಗಿದ್ದ ಒಬ್ಬ ದಲಿತ ಯುವಕನನ್ನು ಮಾಡಿದ್ದರು. ತಳಮಟ್ಟದ ಸಮುದಾಯಗಳ ವಿದ್ಯಾವಂತರನ್ನು ಗುರುತಿಸಿ ಅಧಿಕಾರ ನೀಡುವ ಕೆಲಸವನ್ನು ಅವರು ಮಾಡಿದ್ದರು ಎಂದು ಅವರು ಹೇಳಿದರು.

ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣ ಬೇಕೆಂದು ಗ್ರಾಮಸ್ಥರು ಕೇಂದ್ರ ಸಚಿವರಿಗೆ ಬೇಡಿಕೆ ಮಂಡಿಸಿದರು. ಇದಕ್ಕೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು; ತಕ್ಷಣವೇ ಸಮುದಾಯ ಭವನ ಮಂಜೂರು ಮಾಡಿ, ನಿರ್ಮಾಣ ಮಾಡಿಕೊಡಲಾಗುವುದು. ಅದಕ್ಕೆ ಅಗತ್ಯವಾದ ಸೂಕ್ತ ಜಾಗವನ್ನು ತಕ್ಷಣವೇ ಗ್ರಾಮಸ್ಥರ ಜತೆ ಸೇರಿ ಗುರುತಿಸುವಂತೆ ಮಾಜಿ ಶಾಸಕ ಅನ್ನದಾನಿ ಅವರಿಗೆ ಸೂಚಿಸಿದರು.

ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಜಕ್ರಿಯಾ ಖಾನ್, ಯುವ ಜನತಾದಳ ಮುಖಂಡ ಸುಹಾಸ್, ಮುಂತಾದವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು