LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಣಿಪುರದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶ

ಇಂಫಾಲ್: ಮಣಿಪುರದ ಬಿಷ್ಣುಪುರ್ ಮತ್ತು ತೌಬಲ್ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬಿಷ್ಣುಪುರ್ ಜಿಲ್ಲೆಯ ಥೋಂಗ್‌ಖೋಂಗ್ಲೋಕ್ ಗ್ರಾಮದಲ್ಲಿ ಭದ್ರತಾ ಪಡೆಗಳು ಮಂಗಳವಾರ ಒಂದು ಎಸ್‌ಎಲ್‌ಆರ್‌ನೊಂದಿಗೆ ಒಂದು ಮ್ಯಾಗಜೀನ್, ಒಂದು 303 ರೈಫಲ್, ಒಂದು 12 ಬೋರ್ ಸಿಂಗಲ್ ಬ್ಯಾರೆಲ್ ಗನ್, ಎರಡು 9 ಎಂಎಂ ಪಿಸ್ತೂಲ್ ಜೊತೆಗೆ ಮ್ಯಾಗಜೀನ್, ಒಂದು ಆಂಟಿ-ರಿಯೆಟ್ ಗನ್, ಎರಡು INSAS LMG ಮ್ಯಾಗಜೀನ್, ಎರಡು INSAS ರೈಫಲ್‌ಗಳನ್ನು ವಶಪಡಿಸಿಕೊಂಡಿವೆ.

ನಾಲ್ಕು ಕೈ ಗ್ರೆನೇಡ್‌ಗಳು, ಒಂದು ಡಿಟೋನೇಟರ್, ಐದು ಗಲಭೆ ನಿಗ್ರಹ ಶೆಲ್ ಮತ್ತು ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ಜಪ್ತಿ ಮಾಡಿವೆ.

ಭದ್ರತಾ ಪಡೆಗಳು ತೌಬಲ್ ಜಿಲ್ಲೆಯ ಲೀಶಾಂಗ್ಥೆಮ್ ಐಕಾಪ್ ಪ್ಯಾಟ್ ಪ್ರದೇಶದಲ್ಲಿ ಒಂದು ಆಂಟಿ ಮೆಟೀರಿಯಲ್ ರೈಫಲ್(AMR) ಸ್ನೈಪರ್, ಎರಡು ಸಿಂಗಲ್ ಬೋಲ್ಟ್ ಆಕ್ಷನ್ ರೈಫಲ್, ಮೂರು 9mm ಪಿಸ್ತೂಲ್ ದೇಶ ನಿರ್ಮಿತ), ಒಂದು ಕೈ ಗ್ರೆನೇಡ್, ನಾಲ್ಕು MK-13T ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏತನ್ಮಧ್ಯೆ, ಇಂಫಾಲ್ ಪೂರ್ವ ಜಿಲ್ಲೆಯ ಬೆಂಗಾಲಿ ಕ್ರಾಸಿಂಗ್ ಬಳಿಯ ಮಂತ್ರಿಪುಖ್ರಿ ಬಜಾರ್‌ನಲ್ಲಿ ಸುಲಿಗೆಯಲ್ಲಿ ತೊಡಗಿದ್ದ ನಿಷೇಧಿತ ಸಂಘಟನೆ ಕಾಂಗ್ಲೇಪಕ್ ಕಮ್ಯುನಿಸ್ಟ್ ಪಾರ್ಟಿ(ಪೀಪಲ್ಸ್ ವಾರ್ ಗ್ರೂಪ್) ಸದಸ್ಯನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಮತ್ತು ಆತನ ಬಳಿ ಇದ್ದ ಒಂದು 9 ಎಂಎಂ ಪಿಸ್ತೂಲ್, ಮ್ಯಾಗಜೀನ್‌ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು