LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮತ್ತೊಂದು ಡಿಸಿಎಂ ಹುದ್ದೆ! ಸಿಎಂ ಸಿದ್ದರಾಮಯ್ಯರಿಂದ ಹೊಸ ಬಾಂಬ್

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ ಎನ್ನಲಾಗಿದೆ.ಕಳೆದ ಸೋಮವಾರ ರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಐಸಿಸಿ ಪದಾಧಿಕಾರಿಯಾಗಿರುವ ರಾಜ್ಯಕ್ಕೆ ಭೇಟಿ ನೀಡಿದ್ದ ರಣದೀಪ್‍ಸಿಂಗ್ ಸುರ್ಜೆವಾಲ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತ್ಯೇಕವಾಗಿ ಸಮಾಲೋಚನೆ ಸಭೆ ನಡೆಸಿದ್ದಾರೆ.

ಈ ಸಭೆಯಲ್ಲಿ ಸಿದ್ದರಾಮಯ್ಯನವರು, ನಾನು ಕ್ಯಾಬಿನೆಟ್‍ಗೆ ಮುಖ್ಯಸ್ಥ. ಡಿಸಿಎಂ ಹುದ್ದೆ ಹೆಚ್ಚುವರಿಯಾಗಿ ಸೃಷ್ಠಿಸುವುದು, ಸಂಪುಟ ಪುನಾರಚನೆ ಮಾಡುವುದು ನನ್ನ ಪರಮಾಧಿಕಾರ. ಹೀಗಾಗಿ, ನಾನು ಹೆಚ್ಚುವರಿಯಾಗಿ ಡಿಸಿಎಂ ಹುದ್ದೆ ಸೃಷ್ಠಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ಸಿದ್ಧರಾಮಯ್ಯರ ಮಾತಿಗೆ ಸುರ್ಜೇವಾಲಾ, ಡಿಕೆ ಶಿವಕುಮಾರ್ ಆಶ್ಚರ್ಯಚಕಿತರಾಗಿದ್ದಾರೆ.
ಈ ಹಂತದಲ್ಲಿ ಸದ್ಯಕ್ಕೆ ಏನು ಮಾಡುವುದು ಬೇಡ. ಬಜೆಟ್ ಅಧಿವೇಶನ ಮುಕ್ತಾಯವಾಗಲಿ. ಬಳಿಕ ನೋಡೋಣ, ಮಾತನ್ನಾಡೋಣ ಎಂದು ಸುರ್ಜೇವಾಲಾ ಸಮಾಧಾನಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎರಡೂವರೆ ಘಂಟೆಗಳ ಕಾಲ ಕ್ಲೋಸ್ ಡೋರ್ ಮೀಟಿಂಗ್‍ನಲ್ಲಿ ಮನಸ್ಸು ಬಿಚ್ಚಿ ಮಾತನ್ನಾಡಿ, ಪರಮಾಧಿಕಾರದ ಪ್ರಸ್ತಾಪ ಮಾಡಿ ಹೈಕಮಾಂಡ್ ನಾಯಕರಿಗೆ ಸಿಎಂ ಸಿದ್ಧರಾಮಯ್ಯ ಶಾಕ್ ಕೊಟ್ಟಿದ್ದಾರೆ.ಕಳೆದೆರಡು ದಿನಗಳ ಹಿಂದೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ನಂತರ ಸಭೆಯ ಬಳಿಕ ಮೂವರ ಮಧ್ಯೆ ಎರಡುವರೆ ಘಂಟೆಗಳಕಾಲ ರಹಸ್ಯ ಮಾತುಕತೆ ನಡೆದಿದೆ ಎಂದು ತಿಳಿದುಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು