LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಮದ್ಯ, ಮಾದಕ ವಸ್ತುಗಳ ಸೇವನೆ ತ್ಯಜಿಸಲು ದೃಢಸಂಕಲ್ಪ ಮಾಡಿ: ಡಾ. ಎಸ್. ಚಿದಂಬರ ಸಲಹೆ

ಚಾಮರಾಜನಗರ: ಜೀವ, ಜೀವನ ಎರಡೂ ಅಮೂಲ್ಯವಾಗಿದ್ದು, ಆರೋಗ್ಯಕ್ಕೆ ಮಾರಕವಾಗಿರುವ ಮದ್ಯ ಮತ್ತು ಮಾದಕ ಪದಾರ್ಥಗಳನ್ನು ತ್ಯಜಿಸಲು ಪ್ರತಿಯೊಬ್ಬರು ದೃಢಸಂಕಲ್ಪ ಮಾಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ ಅವರು ಸಲಹೆ ಮಾಡಿದರು.ಚಾಮರಾಜನಗರ ವಿಶ್ವವಿದ್ಯಾನಿಲಯದ ಸುವರ್ಣ ಗಂಗೋತ್ರಿಯಲ್ಲಿಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಚಾಮರಾಜನಗರ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಸೇವನೆ ದುಷ್ಪರಿಣಾಮಗಳ ಕುರಿತು ಆಯೋಜಿಸಲಾಗಿದ್ದ ವಿಚಾರ ಸಂಕಿರಣ ಹಾಗೂ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕುತೂಹಲದ ಮೋಜಿನ ಜೀವನ, ಜಿಗುಪ್ಸೆ, ಕೆಲಸದ ಒತ್ತಡದಿಂದ ಮುಕ್ತರಾಗಲು ಆರಂಭಿಸುವ ಮದ್ಯ, ಮಾದಕ ಪದಾರ್ಥಗಳ ಸೇವನೆ, ಇತ್ತೀಚೆಗೆ ಮಾರುಕಟ್ಟೆಗೆ ಬಂದಿರುವ ಕೈಗೆ ಅಂಟಿಸಿಕೊಳ್ಳುವ ನಿಕೋಟಿನ್ ಪ್ಯಾಚ್‍ಗಳು ಆರೋಗ್ಯಕ್ಕೆಹಾನಿಕರ. ಮಾದಕ ಉತ್ಪನ್ನಗಳಲ್ಲಿರುವ ರಾಸಾಯನಿಕಗಳು ಬಾಯಿ, ಯಕೃತ್, ಮೆದುಳು, ಶ್ವಾಸಕೋಶ ಕ್ಯಾನ್ಸರ್‍ನಂತಹ ಮಾರಕ ರೋಗಗಳಿಗೂ ಕಾರಣವಾಗಿವೆ. ಇವೆಲ್ಲವೂ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮಗಳನ್ನು ಉಂಟುಮಾಡಲಿವೆ. ಮದ್ಯ, ಮಾದಕ ಪದಾರ್ಥಗಳ ಸೇವನೆಯ ಅಭ್ಯಾಸವಿರುವವರು ಅವುಗಳಿಂದ ದೂರವಿರಲು ದೃಢ ಮನಸ್ಸು ಮಾಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಚಾಮರಾಜನಗರ ವಿಶ್ವವಿದ್ಯಾ ಲಯದ ಕುಲಪತಿಗಳಾದ ಪ್ರೊ. ಎಂ.ಆರ್. ಗಂಗಾಧರ್ ಅವರು ಮಾತನಾಡಿ ಮನುಕುಲಕ್ಕೆ ಮಾರಕವಾಗಿರುವ ಮದ್ಯ,ಮಾದಕ ವಸ್ತುಗಳ ದುಷ್ಪರಿಣಾಮಗಳು ವಿಶ್ವದೆಲ್ಲೆಡೆ ಸರ್ವೇಸಾಮಾನ್ಯವಾಗಿದೆ. ಇವುಗಳ ಸೇವನೆಯಿಂದ ಕುಟುಂಬ ಅರ್ಥಿಕ ಸಂಕಷ್ಟಕ್ಕೀಡಾಗಲಿದೆ. ಹೆಣ್ಣುಮಕ್ಕಳು ಚಿಕ್ಕ ವಯಸ್ಸಿನಲ್ಲಿಯೇ ವಿಧವೆಯರಾಗುತ್ತಿದ್ದಾರೆ. ಇದು ತಪ್ಪಬೇಕು. ಈ ನಿಟ್ಟಿನಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಹೊರಬರಲು ಪ್ರತಿಯೊಬ್ಬರು ಗಟ್ಟಿಮನಸ್ಸು ಮಾಡಬೇಕು. ವಿದ್ಯಾರ್ಥಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋರೋಗ ತಜ್ಞರಾದ ಡಾ. ಮೇರಿ ಅಂಜಲ ಹಾಗೂ ಮಹದೇಶ್ ಅವರು ಕಾರ್ಯಕ್ರಮದಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಸೇವನೆ ದುಷ್ಪರಿಣಾಮಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಸಚಿವರಾದ ಆರ್. ಲೋಕನಾಥ್, ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ. ಜಿ.ವಿ. ವೆಂಕಟರಮಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಎ. ರಮೇಶ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು