LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮದ್ಯ ಸೇವಿಸಿ ವಾಹನ ಚಾಲನೆ 1187 ಪ್ರಕರಣ ದಾಖಲು

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ನಗರದ ಸಂಚಾರ ಪೊಲೀಸರು ಕಳೆದ ಒಂದು ವಾರದಲ್ಲಿ 1187 ಪ್ರಕರಣಗಳನ್ನು ದಾಖಲಿಸಿದ್ದಾರೆ.ನಗರ ಸಂಚಾರ ಪೊಲೀಸರು 50 ಸಂಚಾರ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಡಿ.23 ರಿಂದ ಡಿ. 29 ರವರೆಗೆ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ವಾಹನ ಚಾಲಕರು, ಸವಾರರುಗಳ ವಿರುದ್ಧ ಹಾಗೂ ಅತಿವೇಗ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿತ್ತು.

ಮದ್ಯಪಾನ ಮಾಡಿ ವಾಹನ ಚಾಲನೆ ವಿಶೇಷ ಕಾರ್ಯಾಚರಣೆಯಲ್ಲಿ ವಿವಿಧ ಮಾದರಿಯ 95179 ವಾಹನಗಳ ತಪಾಸಣೆ ನಡೆಸಿ...1187 ಪ್ರಕರಣಗಳನ್ನು ದಾಖಲಿಸಿದ್ದರೆ, ಅತಿವೇಗದಿಂದ ವಾಹನ ಚಲಾಯಿಸುವವರ ಕಾರ್ಯಚರಣೆಯಲ್ಲಿ 165 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.ದಾಖಲಿಸಿದ ಪ್ರಕರಣಗಳಿಂದ 1,65 ಲಕ್ಷ ರೂಪಾಯಿ ದಂಡವನ್ನು ಸಂಗ್ರಹಿಸಲಾಗಿದೆ. ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುವ ಮತ್ತು ಅತಿವೇಗ ವಾಹನ ಚಲಾಯಿಸುವವರಹಾವಳಿಯನ್ನು ತಡೆಗಟ್ಟಲು ಮತ್ತು ರಸ್ತೆ ಸುರಕ್ಷತೆಗಾಗಿ ವಿಶೇಷ ಕಾರ್ಯಾಚರಣೆ ಮುಂದುವರೆಸಲಾಗುವುದು ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು