LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಮನು ಭಾಕರ್, ಡಿ ಗುಕೇಶ್ ಸೇರಿ ನಾಲ್ವರಿಗೆ ಪ್ರತಿಷ್ಠಿತ ಧ್ಯಾನ್‍ಚಂದ್ ಖೇಲ್ ರತ್ನ ಪ್ರಶಸ್ತಿ

ಒಲಿಂಪಿಕ್ಸ್‍ನಲ್ಲಿ ಎರಡೆರಡು ಕಂಚಿನ ಪದಕಕ್ಕೆ ಕೊರಳೊಡ್ಡಿದ್ದ ಶೂಟರ್ ಮನು ಭಾಕರ್, ಚೆಸ್ ವಿಶ್ವ ಚಾಂಪಿಯನ್ ದೊಮ್ಮರಾಜು ಗುಕೇಶ್ ಸೇರಿ ನಾಲ್ವರನ್ನು ಧ್ಯಾನ್‍ಚಂದ್ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕ್ರೀಡಾ ಸಚಿವಾಲಯ ತಿಳಿಸಿದೆ.ಪುರುಷರ ಹಾಕಿ ತಂಡದ ಕ್ಯಾಪ್ಟನ್ ಹರ್ಮನ್‍ಪ್ರೀತ್ ಸಿಂಗ್ ಹಾಗೂ ಪ್ಯಾರಾ ಒಲಿಂಪಿಕ್ ಚಿನ್ನದ ಪದಕ ವಿಜೇತ ಪ್ರವೀಣ್ ಕುಮಾರ್ ಕೂಡ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಖೇಲ್ ರತ್ನ ಭಾರತದಲ್ಲಿ ಕ್ರೀಡಾಪಟುಗಳಿಗೆ ನೀಡಲಾಗುವ ಅತ್ಯುನ್ನತ ಪ್ರಶಸ್ತಿಯಾಗಿದೆ. ಇದೇ ವೇಳೆ ಕ್ರೀಡಾ ಇಲಾಖೆ ಅರ್ಜುನ ಪ್ರಶಸ್ತಿಗೆ 32 ಕ್ರೀಡಾಪಟುಗಳನ್ನು ಆಯ್ಕೆ ಮಾಡಿದೆ. ಇದರಲ್ಲಿ 17 ವಿಶೇಷ ಚೇತನ ಕ್ರೀಡಾಪಟುಗಳೂ ಸೇರಿದ್ದಾರೆ.ವಿವಾದಕ್ಕೆ ಗುರಿಯಾಗಿತ್ತು ಪ್ರಶಸ್ತಿ: ಇತ್ತೀಚೆಗೆ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾದ ಕ್ರೀಡಾಪಟುಗಳ ಪಟ್ಟಿಯಲ್ಲಿ ಮನು ಭಾಕರ್ ಹೆಸರಿಲ್ಲ ಎಂಬ ವಿಚಾರ ಭಾರೀ ಕೋಲಾಹಲಕ್ಕೆ ಕಾರಣವಾಗಿತ್ತು.

ಮನು ಅವರ ತಂದೆ ರಾಮ್ ಕಿಶನ್ ಮತ್ತು ಕೋಚ್ ಜಸ್ಪಾಲ್ ರಾಣಾ ಅವರು ಈ ಬಗ್ಗೆ ಆಕ್ರೋಶವನ್ನೂ ವ್ಯಕ್ತಪಡಿಸಿದ್ದರು. ಆದರೆ, ಅರ್ಜಿ ಸಲ್ಲಿಕೆ ವೇಳೆ ತಮ್ಮ ಕಡೆಯಿಂದ ಲೋಪ ಆಗಿರಬಹುದು ಎಂದು ಸ್ವತಃ ಮನು ಭಾಕರ್ ಅವರೇ ಒಪ್ಪಿಕೊಂಡಿದ್ದರು. 22 ವರ್ಷದ ಮನು ಭಾಕರ್ ಒಲಿಂಪಿಕ್ಸ್‍ನ ಒಂದೇ ಆವೃತ್ತಿಯಲ್ಲಿ ಎರಡು ಪದಕಗಳನ್ನು ಗೆದ್ದ ಸ್ವತಂತ್ರ ಭಾರತದ ಮೊದಲ ಕ್ರೀಡಾಪಟುವಾಗಿದ್ದಾರೆ. ಆಗಸ್ಟ್‍ನಲ್ಲಿ ನಡೆದ 10 ಮೀಟರ್ ಏರ್ ಪಿಸ್ತೂಲ್ ವೈಯಕ್ತಿಕ ಮತ್ತು 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಗಳಲ್ಲಿ ಅವರು ಕಂಚು ಗೆದ್ದಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು