LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮನೆಯಂಗಳದಲ್ಲಿ ಜಾನಪದ ದಸರಾ ವೈವಿಧ್ಯಮಯ ಕಾರ್ಯಕ್ರಮ

ನಾಡಹಬ್ಬ ದಸರಾ ಮತ್ತು ವಿಜಯದಶಮಿ ಹಬ್ಬದ ಅಂಗವಾಗಿ ಕನ್ನಡ ಜಾನಪದ ಪರಿಷತ್ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಘಟಕದ ವತಿಯಿಂದ ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಜಾನಪದ ಬಾಲಾಜಿ ರವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಬಸವೇಶ್ವರನಗರದ ಚೈತ್ರ ಸಂದೇಶ್ ರವರ ಮನೆಯಲ್ಲಿ ಚೈತ್ರ ಸಂದೇಶ್ ಸ್ಟಡಿ ಸೆಂಟರ್ ನ ವಿದ್ಯಾರ್ಥಿಗಳೊಂದಿಗೆ ಮನೆಯಂಗಳದಲ್ಲಿ ಜಾನಪದ ದಸರಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮನೆಯಂಗಳದಲ್ಲಿ ಜಾನಪದ ದಸರಾ ಕಾರ್ಯಕ್ರಮವನ್ನು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷರಾದ ಜಾನಪದ ಬಾಲಾಜಿರವರು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿದರು.ಚೈತ್ರ ಸಂದೇಶ್ ಸ್ಟಡಿ ಸೆಂಟರ್ ನ ವಿದ್ಯಾರ್ಥಿಗಳು ನವರಾತ್ರಿಯ ವಿಶೇಷವಾಗಿ ಪ್ರತಿದಿನವೂ ವಿಶೇಷವಾದ ಬಣ್ಣದ ಉಡುಪು ಧರಿಸಿ ಚಾಮುಂಡೇಶ್ವರಿ ದೇವಿಗೆ ವಿಶೇಷವಾದ ಅಲಂಕಾರ ಮಾಡಿ ಪೂಜೆ ಸಲ್ಲಿಸಿದ್ದರು, ನವರಾತ್ರಿಯ ಅಂತಿಮ ದಿನ ಚಾಮುಂಡೇಶ್ವರಿ ದೇವಿಗೆ ವಿಶಿಷ್ಟ ರೀತಿಯಲ್ಲಿ ಅಲಂಕಾರ ವಿದ್ಯಾರ್ಥಿಗಳು ದೇಸಿ ಉಡುಪುಗಳನ್ನು ತೊಟ್ಟು ಪೂಜೆ ಸಲ್ಲಿಸಿದರು.

ದಸರಾ ಮತ್ತು ವಿಜಯದಶಮಿ ಹಬ್ಬದ ಅಂಗವಾಗಿ ಕನ್ನಡ ಜಾನಪದ ಪರಿಷತ್ ಗೋವಿಂದರಾಜನಗರ ಘಟಕದ ವತಿಯಿಂದ ನಶಿಸಿ ಹೋಗುತ್ತಿರುವ ಜಾನಪದ ಕಲೆಗಳನ್ನು ಪ್ರೊತ್ಸಾಹಿಸುವ ದೃಷ್ಟಿಯಿಂದ ಚೈತ್ರ ಸಂದೇಶ್ ಸ್ಟಡಿ ಸೆಂಟರ್ ನ ವಿದ್ಯಾರ್ಥಿಗಳೊಂದಿಗೆನವರಾತ್ರಿಯ ಕೊನೆಯ ದಿನ ದಸರಾ ಹಬ್ಬದ ಪ್ರಯುಕ್ತ ಮನೆಯಂಗಳದಲ್ಲಿ ಜಾನಪದ ದಸರಾ ವೈವಿಧ್ಯಮಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಜಾನಪದ ಗೀತೆಗಳ ಗಾಯನ ನಡೆಸಿಕೊಟ್ಟರು.

ಅಳಿವಿನಂಚಿನಲ್ಲಿರುವ ಜಾನಪದ ಕಲಾಪ್ರಕಾರಗಳಿಗೆ ಚೈತ್ರ ಸಂದೇಶ್ ಸ್ಟಡಿ ಸೆಂಟರ್ ನ ಮಕ್ಕಳು ಮನೆಯಂಗಳದಲ್ಲಿ ಜಾನಪದ ದಸರಾ ಕಾರ್ಯಕ್ರಮದಲ್ಲಿ ಸಾಕ್ಷಿಯಾದರು.ಕಾರ್ಯಕ್ರಮದಲ್ಲಿ ಕನ್ನಡ ಜಾನಪದ ಪರಿಷತ್ತಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಘಟಕದ ಅಧ್ಯಕ್ಷ ರ. ನರಸಿಂಹಮೂರ್ತಿ, ಕರ್ನಾಟಕ ರಾಜ್ಯ ಯುವ ಸಂಘಟನೆಗಳ ಒಕ್ಕೂಟದ ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ ರವಿಕಾಂತ್, ಕಜಾಪ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ನೆಲಸೊಗಡು, ಕಜಾಪ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಖಜಾಂಚಿ ಸವಿತಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಚೈತ್ರ ಸಂದೇಶ್ ಸ್ಟಡಿ ಸೆಂಟರ್ ನ ಅಧ್ಯಕ್ಷೆ ಚೈತ್ರ, ಕಾರ್ಯದರ್ಶಿ ಸಂದೇಶ್, ಖಜಾಂಚಿ ಶಕುಂತಲಾ, ಚೈತ್ರ ಸಂದೇಶ್ ಸ್ಟಡಿ ಸೆಂಟರ್ ನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು