LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮನೆಯಲ್ಲಿ ಗಾಂಜಾ ಬೆಳೆದ ದಂಪತಿ ; ರೀಲ್ಸ್ ಮಾಡಿ ಪೊಲೀಸರ ಬಲೆಗೆ ಬಿದ್ದ ಜೋಡಿ!

ಬೆಂಗಳೂರು: ಹೂವಿನ ಕುಂಡಗಳಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ದಂಪತಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಎಂಎಸ್‌ಆರ್ ನಗರ ೩ನೇ ಮೇನ್‌ನಲ್ಲಿ ವಾಸವಾಗಿರುವ ಸಿಕ್ಕಿಂನ ಕೆ ಸಾಗರ್ ಗುರುಂಗ್ (೩೭) ಮತ್ತು ಅವರ ಪತ್ನಿ ರ‍್ಮಿಳಾ ಕುಮಾರಿ (೩೮) ಬಂಧಿತರಿ. ಈ ಜೋಡಿ ಫಾಸ್ಟ್ ಫುಡ್ ಜಾಯಿಂಟ್ ನಡೆಸುತ್ತಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿರುವ ರ‍್ಮಿಳಾ ಕುಮಾರಿ ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ವಿಡಿಯೋ ಮತ್ತು ಫೋಟೋ ಪೋಸ್ಟ್ ಮಾಡುತ್ತಿದ್ದರು. ಇತ್ತೀಚೆಗೆ ಎಂಎಸ್‌ಆರ್ ನಗರದ ತಮ್ಮ ಮನೆಯಲ್ಲಿ ಹೂವಿನ ಕುಂಡಗಳಲ್ಲಿ ಬೆಳೆಯುತ್ತಿರುವ ವಿವಿಧ ಸಸ್ಯಗಳ ವಿಡಿಯೋ ಮತ್ತು ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ಬಾಲ್ಕನಿಯಲ್ಲಿ ಅಲಂಕಾರಿಕ ಗಿಡಗಳಿರುವ ಹೂವಿನ ಕುಂಡಗಳನ್ನು ಇಡಲಾಗಿತ್ತು.

೧೭ ಕುಂಡಗಳ ಪೈಕಿ ಎರಡು ಕುಂಡಗಳಲ್ಲಿ ಗಾಂಜಾ ಬೆಳೆದಿದ್ದರು. ತಮ್ಮ ಪೋಸ್ಟ್‌ ಮೂಲಕ ರ‍್ಮಿಳಾ ಗಾಂಜಾ ಬೆಳೆಯುತ್ತಿರುವುದನ್ನು ಬಹಿರಂಗಪಡಿಸಿದ್ದಾರೆ. ಅವರ ಸಾಮಾಜಿಕ ಮಾಧ್ಯಮ ಖಾತೆ ಅನುಯಾಯಿಗಳು ಈ ವಿಷಯವನ್ನು ಪೊಲೀಸರ ಮುಂದೆ ತಂದಿದ್ದಾರೆ. ವಿಚಾರಣೆಯ ವೇಳೆ, ದಂಪತಿ ಗಾಂಜಾವನ್ನು ಮಾರಾಟ ಮಾಡಲು ಮತ್ತು ವೇಗವಾಗಿ ಹಣ ಗಳಿಸಲು ಬೆಳೆದಿರುವುದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ದಂಪತಿ ಮೊದಲ ಮಹಡಿಯಲ್ಲಿ ವಾಸವಾಗಿದ್ದು, ಫಾಸ್ಟ್ ಫುಡ್ ಜಾಯಿಂಟ್ ನೆಲ ಮಹಡಿಯಲ್ಲಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಅವರನ್ನು ಬಂಧಿಸಲಾಗಿದ್ದು, ಪೊಲೀಸರು ಸುಮಾರು ೫೪ ಗ್ರಾಂ ತೂಕದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು