LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮರದ ಕಾರ್ಖಾನೆಯಲ್ಲಿ ಭಾರೀ ಅಗ್ನಿ ದುರಂತ ಅಪಾರ ಮೌಲ್ಯದ ಮರದದಿಮ್ಮಿ ಬೆಂಕಿಗಾಹುತಿ

ಬೆಂಗಳೂರು: ಅತ್ತಿಬೆಲೆ ಸಮೀಪದ ಯಡವನಹಳ್ಳಿ ಬಳಿಯ ಮರದ ಕಾರ್ಖಾನೆಯಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿ ಕೋಟ್ಯಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಶ್ರೀರಾಮ್ ವುಡ್ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು,ಮರ ಮುಟ್ಟುಗಳೇ ಇದ್ದರಿಂದ ಸ್ವಲ್ಪ ಸಮಯದಲ್ಲೇ ಇಡೀ ಕಾರ್ಖಾನೆಯನ್ನು ಬೆಂಕಿ ಆವರಿಸಿ ದಟ್ಟ ಹೊಗೆ ಹೊರಬರಲಾರಂಭಿಸಿದೆ.
ಇದನ್ನು ಕಂಡ ಸ್ಥಳೀಯರು ಮಾಹಿತಿ ನೀಡಿದ ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದವು.
ಎಕರೆಗಟ್ಟಲೆ ಪ್ರದೇಶದಲ್ಲಿ ಕಾರ್ಖಾನೆ ಇದೆ. ಹೆದ್ದಾರಿಗೆ ಹೊಂದಿಕೊAಡಿರುವ ಹಿನ್ನೆಲೆ ಆತಂಕ ಮೂಡಿಸಿದೆ. ಭಾರೀ ಪ್ರಮಾಣದಲ್ಲಿ ಬೆಂಕಿಯ ಕೆನ್ನಾಲಿಗೆ ಆವರಿಸಿತ್ತು. ಮೂರು ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ ನಡೆಸಲಾಯಿತು.
ಆಶೀರ್ವಾದ್ ಕಂಪನಿಯವರು ಹತ್ತು ಕಡೆಗಳಲ್ಲಿ ಬೆಂಕಿ ಆರಿಸಲು ಸಹಕರಿಸಿದರು. ಸಿಬ್ಬಂದಿಯು ಹತ್ತು ಪೈಪ್ ಮೂಲಕ ಪಕ್ಕದ ಕಂಪನಿಯ ಬೆಂಕಿ ಆರಿಸುತ್ತಿದ್ದಾರೆ. ಸದ್ಯ ಒಳಗಡೆ ಯಾರೂ ಇಲ್ಲ ಎನ್ನುವ ಮಾಹಿತಿ ಸಿಕ್ಕಿದೆ. ಅಧಿಕೃತ ಮಾಹಿತಿ ಸಿಕ್ಕ ಬಳಿಕವಷ್ಟೇ ಸ್ಪಷ್ಟವಾಗಲಿದೆ.
ಹರ್ಷದ್ ಪಟೇಲ್ ಎಂವವರಿಗೆ ಸೇರಿದ ಕಾರ್ಖಾನೆ ಇದ್ದಾಗಿದ್ದು, ಸುಮಾರು ಐದು ಕೋಟಿಗೂ ಹೆಚ್ಚು ಬೆಲೆ ಬಾಳುವ ಮರದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಆರಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳಿಂದ ಬೆಂಕಿ ಬೆಂಕಿ ನಂದಿಸುವ ಕಾರ್ಯ ನಡೆಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು