LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮರ ಕತ್ತರಿಸುವ ಯಂತ್ರದಿಂದ ವ್ಯಕ್ತಿಯ ಬರ್ಬರ ಹತ್ಯೆ

ಮಂಡ್ಯ: ತೋಟದ ಮನೆಗೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ಮರ ಕತ್ತರಿಸುವ ಯಂತ್ರದಲ್ಲಿ ಮನೆಯ ಮಾಲೀಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ‌ ಗ್ರಾಮದಲ್ಲಿ ನಡೆದಿದೆ. 60 ವರ್ಷದ ರಮೇಶ್ ಕೊಲೆಯಾದ ದುರ್ದೈವಿ. ಮರ ಕತ್ತರಿಸುವ ಯಂತ್ರದಿಂದಲೇ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಇನ್ನೂ ಪಾಪಿಯ ಕೈಯಲ್ಲಿ ಸಿಲುಕಿ ಮೃತ ರಮೇಶ್ ಪತ್ನಿ ಯಶೋಧಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಸಂಜೆ ಏಳು ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿ, ರಮೇಶ್ ಮನೆಗೆ ಬಂದು ಮರ ಕತ್ತರಿಸುವ ಯಂತ್ರ ಬುಕ್ ಮಾಡಿದ್ದಾರೆ ಎಂದು ಬಾಗಿಲು ತಟ್ಟಿದ್ದಾನೆ. ಈ ವೇಳೆ ಯಶೋಧಮ್ಮ ನಾವು ಯಾವುದನ್ನು ಬುಕ್ ಮಾಡಿಲ್ಲ ಎಂದು ಹೇಳುತ್ತಿದ್ದಂತೆ ಯಶೋಧಮ್ಮ ‌ಮೇಲೆ ಅಟ್ಯಾಕ್ ಮಾಡಿದ್ದಾನೆ. ಮರ ಕತ್ತರಿಸುವ ಯಂತ್ರವನ್ನು ಆನ್ ಮಾಡಿ ಯಶೋಧಮ್ಮ ಮುಖದ ಭಾಗಕ್ಕೆ ಹಿಡಿದಿದ್ದಾನೆ. ಈ ಹಿನ್ನೆಲೆಯಲ್ಲಿ ಯಶೋಧಮ್ಮ ಪ್ರಜ್ಞೆ ತಪ್ಪಿದ್ದಾಳೆ. ನಂತರ ಮನೆಯೊಳಗೆ ನುಗ್ಗಿದ ಆರೋಪಿ ಮನೆಯೊಳಗೆ ಇದ್ದ ರಮೇಶ್ ಮೇಲೆ ಅಟ್ಟಹಾಸ ಮೆರೆದಿದ್ದಾನೆ.

ಮಲಗಿದ್ದ ರಮೇಶ್ ಅವರ ಕುತ್ತಿಗೆಗೆ ಮರ ಕತ್ತರಿಸುವ ಯಂತ್ರವನ್ನು ಹಿಡಿದಿದ್ದಾನೆ. ನಂತರ ರಮೇಶ್ ಕೈ ಭಾಗಕ್ಕೆ ಎಲ್ಲಾ ಹಿಡಿದು ಬರ್ಬರವಾಗಿ ಹತ್ಯೆ ಮಾಡುತ್ತಾನೆ. ಈ‌ ವೇಳೆ ಪ್ರಜ್ಞೆ ತಪ್ಪಿದ್ದ ಯಶೋಧಮ್ಮ ಎಚ್ಚರಗೊಂಡು ಮನೆಯ ಬಾಗಿಲನ್ನು ಹೊರಗಡೆಯಿಂದ ಲಾಕ್ ಮಾಡಿ, ನಂತರ ಸ್ಥಳೀಯರನ್ನು ಕರೆದಿದ್ದಾರೆ. ಈ ವೇಳೆ ಮರ ಕತ್ತರಿಸುವ ಯಂತ್ರದ ಮೂಲಕ ಬಾಗಿಲನ್ನು ಕೊಯ್ಯಲು ಸಹ ಆತ ಯತ್ನಿಸಿದ್ದಾನೆ. ಆದ್ರೆ, ಅದು ಸಾಧ್ಯವಾಗಿಲ್ಲ.

ಇನ್ನು ಅಕ್ಕಪಕ್ಕದ ಜನರು ಸೇರಿಕೊಂಡು ತಕ್ಷಣ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮನೆಯ ಒಳಗೆ ಬಂಧಿಯಾಗಿದ್ದ ಆರೋಪಿಯನ್ನ ಆಚೆ ಕರೆದುಕೊಂಡು ಬರುತ್ತಿದ್ದಂತೆಯೇ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಇದರಿಂದ ಅಸ್ವಸ್ಥಗೊಂಡಿರುವ ಆರೋಪಿಯನ್ನ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಕೊಲೆ ಆರೋಪಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಯಶೋಧಮ್ಮರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಇದೇ ವೇಳೆ ಮತ್ತೊಬ್ಬ ಶಂಕಿತ ಆರೋಪಿಯನ್ನ ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕೊಲೆ ಪ್ರಕರಣ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಒಟ್ಟಾರೆ ಒಂಟಿ ಮನೆಯಲ್ಲಿ ನಡೆದ ಭೀಕರ ಹತ್ಯೆಗೆ ಇಡೀ  ಜನ ಬೆಚ್ಚಿ ಬಿದ್ದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು