LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Shimoga

ಮಲೆನಾಡಿನಲ್ಲಿ ಮತ್ತೆ ಶುರುವಾದ ಮಂಗನಕಾಯಿಲೆ ಆತಂಕ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಟ್ಟಬಸವಾನಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಜಗ್ಗಿನಗದ್ದೆ ಬಳಿ ಉಣುಗುಗಳಲ್ಲಿ ಕೆಎಫ್‌ಡಿ ವೈರಸ್ ಕಾಣಿಸಿಕೊಂಡಿದೆ. ಸದ್ಯ ಐದು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯನ್ನು ಹಾಟ್‌ಸ್ಪಾಟ್ ಎಂದು ಗುರುತಿಸಲಾಗಿದೆ. ಕಳೆದ ಬಾರಿ ಜನರಿಗೆ ಸಿಂಹಸ್ವಪ್ನದಂತೆ ಕಾಡಿ ಅನೇಕು ಸಾವು ನೋವುಗಳಿಗೆ ಕಾರಣವಾಗಿದ್ದ ಕೆಎಫ್‌ಡಿ (ಕ್ಯಾಸನೂರು ಅರಣ್ಯ ಕಾಯಿಲೆ) ವೈರಸ್ (ಮಂಗನ ಕಾಯಿಲೆ) ಈ ಬಾರಿ ಮಳೆ ಹೊರತಾಗಿಯೂ ತನ್ನ ಇರುವಿಕೆಯನ್ನು ಋಜುವಾತುಪಡಿಸಿದೆ.

ಬೆಟ್ಟಬಸವಾನಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಉಣುಗುಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ವೈರಸ್ ಇರುವುದು ದೃಢಪಟ್ಟಿದೆ. ಈ ಭಾಗದ ಜನರು ಹೆಚ್ಚು ಜಾಗ್ರತೆ ವಹಿಸಬೇಕಿದೆ. ಈಗ ಎಲ್ಲಿ ನೋಡಿದರೂ ಅಡಕೆ ಕೊಯ್ಲು, ತೋಟಕ್ಕೆ ಗೊಬ್ಬರ ಹಾಕುವುದು, ಶುಂಠಿ ಬೆಳೆಯುವವರು ಕಾಡಿನಲ್ಲಿ ತರಗು (ಒಣಗಿದ ಎಲೆ) ಸಂಗ್ರಹಿಸುವುದು ನಡೆಯುತ್ತಿದೆ. ಕಳೆದ ಬಾರಿ ಕೆಎಫ್‌ಡಿ ಪಾಸಿಟಿವ್ ಬಂದಿದ್ದ ಬಹಳಷ್ಟು ಮಂದಿ ತೋಟಗಳಿಗೆ ಕೆಲಸಕ್ಕೆ ಹೋದವರಾಗಿದ್ದು, ಈ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಬೇಕಿದೆ.

ಅಡಕೆ ತೋಟದ ಕೆಲಸಕ್ಕಾಗಿ ಶಿವಮೊಗ್ಗ ಅಷ್ಟೇ ಅಲ್ಲದೇ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಭಾಗದ ಕೂಲಿ ಕಾರ್ಮಿಕರು ಸಹ ಆಗಮಿಸುತ್ತಿದ್ದು ಅವರಿಗೆ ಇಲ್ಲಿನ ಉಣುಗು, ಕೆಎಫ್‌ಡಿ ವೈರಸ್ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಆರೋಗ್ಯ ಇಲಾಖೆ ಈ ಎಲ್ಲ ಕೂಲಿ ಕಾರ್ಮಿಕರಿಗೆ ಡೆಫಾ ಆಯಿಲ್ ಕೊಡುವುದು, ಉಣುಗುಗಳಿಂದ ರಕ್ಷಣೆ ಪಡೆಯುವುದು ಹೇಗೆ ಎಂಬುದನ್ನು ತಿಳಿಸಬೇಕಿದೆ. ಅಡಕೆ ತೋಟದ ಮಾಲೀಕರು, ಮೇಸ್ತ್ರಿಗಳು ಕೂಲಿ ಕಾಮರ್ಮಿಕರಿಗೆ ತಿಳಿವಳಿಕೆ ಹೇಳಬೇಕಿದೆ ಎಂದು ಸ್ಥಳೀಯರಾದ ರಮೇಶ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ.

ಈಗಾಗಲೇ ಅಂತರ ಇಲಾಖೆಗಳ ಜತೆ ಸಮನ್ವಯ ಸಭೆ ನಡೆಸಿ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡಬೇಕಿದ್ದ ಜಿಲ್ಲಾಡಳಿತ ಮೌನವಾಗಿದೆ. ಆರೋಗ್ಯ ಸಚಿವರು ಬಂದು ಹೋದ ನಂತರ ಅಂತರ ಇಲಾಖೆಗಳ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಲಾಗಿತ್ತಾದರೂ ಅದು ಇನ್ನೂ ನಡೆದಿಲ್ಲ.

ಕೆಎಫ್‌ಡಿ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಅಷ್ಟೇ ಅಲ್ಲದೆ ಗ್ರಾಮ ಪಂಚಾಯಿತಿ, ಪಶು ವೈದ್ಯಕೀಯ, ಅರಣ್ಯ ಇಲಾಖೆ ಪಾತ್ರ ತುಂಬಾ ದೊಡ್ಡದಿದೆ. ಪ್ರತಿ ವರ್ಷ ಕೆಎಫ್‌ಡಿ ಅವಧಿ ಆರಂಭವಾಗುವ ಮೊದಲೇ ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಈ ಸಭೆ ನಡೆಸಿ ಅಧಿಕಾರಿಗಳಿಗೆ ಸಲಹೆ, ಮಾರ್ಗದರ್ಶನ ನೀಡಲಾಗುತಿತ್ತು. ಈ ಬಾರಿ ಅದಿನ್ನೂ ನಡೆದಿಲ್ಲ.

ಮಲೆನಾಡು ಭಾಗದಲ್ಲಿ ಯಾರಿಗೆ ಜ್ವರ ಕಾಣಿಸಿಕೊಂಡರೂ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡುವುದು ಒಳಿತು. ಜ್ವರ ಮೂರು ದಿನವಾದರೂ ಕಡಿಮೆಯಾಗದಿದ್ದರೆ ನಿರ್ಲಕ್ಯ ವಹಿಸದೆ ವೈದ್ಯರ ಬಳಿ ತೋರಿಸಬೇಕಿದೆ. ಮೊದಲ ಹಂತದ ಜ್ವರ ನಿರ್ಲಕ್ಷ್ಯ ಮಾಡಿದವರೇ ಹೆಚ್ಚು ಜೀವಹಾನಿ ಮಾಡಿಕೊಂಡಿರುವುದು ಹಿಂದಿನ ಎಲ್ಲ ಸೀಸನ್‌ಗಳಲ್ಲೂ ಖುಜುವಾತಾಗಿದೆ.

ಬೆಟ್ಟಬಸವಾನಿ, ತೀರ್ಥಹಳ್ಳಿ ತಾಲೂಕಿನ ಕನ್ನಂಗಿ, ಗುತ್ತಿಎಡೆಹಳ್ಳಿ, ಮಾಳೂರು, ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿ ಹಾಟ್‌ಸ್ಪಾಟ್ ಆಗಿರುವುದರಿಂದ ಈ ವ್ಯಾಪ್ತಿಯ ಗ್ರಾಮಗಳ ಜನರು ಕಾಡಿನ ಸಂಪರ್ಕವನ್ನು ಕಡಿಮೆಗೊಳಿಸಬೇಕಿದೆ. ಕಾಡಿಗೆ ಹೋಗಿ ಬಂದರೂ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕಿದೆ. ಕಾಡಿನ ಸಂಪರ್ಕ ಹೊಂದಿರುವ ದನಕರುಗಳು ಸಹ ಪಾಸಿಟಿವ್ ಇರುವ ಉಣುಗುಗಳನ್ನು ಹೊತ್ತು ತರುವ ಸಾಧ್ಯತೆ ಇರುತ್ತದೆ. ಇದರ ಬಗ್ಗೆ ಗಮನಹರಿಸಬೇಕಿದೆ. ಈ ಐದು ಪಿಎಚ್‌ಸಿಗಳ ವ್ಯಾಪ್ತಿಯಲ್ಲಿ ಡೆಫಾ ಆಯಿಲ್, ಜಾಗೃತಿ ಕರಪತ್ರಗಳನ್ನು ಆರೋಗ್ಯ ಇಲಾಖೆ, ಗ್ರಾಮ ಪಂಚಾಯಿತಿ ಮನೆ ಮನೆಗೆ ತಲುಪಿಸಿದರೆ ಸಾವು ನೋವುಗಳನ್ನು ತಡೆಗಟ್ಟಬಹುದಾಗಿದೆ ಎಂದು ಪರಿಮಾಣುಕ್ರಿಮಿ ಸಂಶೋಧನಾ ಪ್ರಯೋಗ ಶಾಲೆಯ ಉಪ ಮುಖ್ಯ ವೈದ್ಯಾಧಿಕಾರಿ ಡಾ. ಹರ್ಷವರ್ದನ್ ಸಲಹೆ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು