LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮಹದೇವಪುರ ವಲಯದಲ್ಲಿನ ಅತಿಕ್ರಮಣಗಳ ಗುರುತಿಸಿ ತೆರವುಗೊಳಿಸಲು ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ

ಬೆಂಗಳೂರು: ಮಹದೇವಪುರ ವಲಯದ ಕೆರೆ, ರಾಜಕಾಲುವೆ, ಚರಂಡಿಗಳ ಒತ್ತುವರಿ ಗುರುತಿಸಿ, ಶೀಘ್ರಗತಿಯಲ್ಲಿ ತೆರವುಗೊಳಿಸಿ ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶುಕ್ರವಾರ ಸೂಚನೆ ನೀಡಿದರು.

‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಡಿ ಮಹದೇವಪುರ ವಲಯದ ವಿವಿಧೆಡೆ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೆರೆ ಒತ್ತುವರಿ ಜಾಗ ಗುರುತಿಸಿ ತೆರವು ಕಾರ್ಯಾಚರಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೆಆರ್ ಪುರದ ವೆಂಗಯ್ಯ ಕೆರೆಯಲ್ಲಿ 8 ಕೋಟಿ ರೂ.ವೆಚ್ಚದಲ್ಲಿ ಹೂಳೆತ್ತುವ ಕಾಮಗಾರಿ ನಡೆದಿದೆ. ಅಲ್ಲದೆ, ಬೇಲಿ ಅಳವಡಿಕೆ, ಒಳದಾರಿಗಳನ್ನು ಸರಿಪಡಿಸುವುದು, ಡೈವರ್ಶನ್ ಲೈನ್‌ಗಳು ಮತ್ತು ಇತರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕೊಳಚೆ ನೀರು ಕೆರೆಗೆ ಹರಿದು ಹೋಗುವುದನ್ನು ತಡೆಯಲು ಪಾಲಿಕೆ ವತಿಯಿಂದ 15 ಎಂಎಲ್ ಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಾಪಿಸಲಾಗುತ್ತಿದೆ. ಜಲಮಂಡಳಿಯಿಂದ ಈಗಾಗಲೇ 10 ಎಂಎಲ್‌ಡಿ ಸಂಸ್ಕರಣಾ ಘಟಕ ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ಆಯುಕ್ತರಿಗೆ ಮಾಹಿತಿ ನೀಡಿದರು.

ಇದೇ ವೇಳೆ ಮಳೆಗಾಲದಲ್ಲಿ ಸಕ್ರಾ ಆಸ್ಪತ್ರೆ ರಸ್ತೆಯಲ್ಲಿ ನೀರು ನಿಲ್ಲುತ್ತಿರುವುದನ್ನು ತಿಳಿಸಿದ ಅವರು, ಪ್ರವಾಹ ತಡೆಗಟ್ಟಲು 750 ಮೀಟರ್ ಉದ್ದದ ರಸ್ತೆಯಲ್ಲಿ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅದರಂತೆ ಈ ರಸ್ತೆಯಲ್ಲಿ ಹಾದು ಹೋಗುವ ರಾಜಕಾಲುವೆಯ ಎರಡೂ ಬದಿಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು, ಉಳಿದ ಜಾಗದಲ್ಲಿ ಡಾಂಬರೀಕರಣ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಮಾಹಿತಿ ಪಡೆದ ಆಯುಕ್ತರು, ಸಕ್ರಾ ಆಸ್ಪತ್ರೆಯಿಂದ ಇಕೋ ಸ್ಪೇಸ್ ವರೆಗಿನ ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಸುಸ್ತಿದಾರರ ಪ್ರಕರಣಗಳಲ್ಲಿ ಆಸ್ತಿ ತೆರಿಗೆ ವಸೂಲಿಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವಲಯ ಆಯುಕ್ತರಿಗೆ ಸೂಚನೆ ನೀಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು