LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಮಹಾರಾಷ್ಟ್ರದಲ್ಲಿ ಮತ್ತೆ ಸದ್ದು ಮಾಡಿದ ಬೆಳಗಾವಿ ಗಡಿ ವಿವಾದ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ವಿಧಾನಸಭೆ ಚಳಿಗಾಲದ ಅಧಿವೇಶನ ಆರಂಭವಾಗಿರುವ ಹೊತ್ತಿನಲ್ಲೇ, ಮಹಾರಾಷ್ಟ್ರ-ಕರ್ನಾಟಕ ಗಡಿ ಸಮಸ್ಯೆ ಮತ್ತೆ ಭುಗಿಲೇಳುವ ಸಾಧ್ಯತೆ ಗೋಚರಿಸಿದೆ. ಬೆಳಗಾವಿ ವಿಚಾರವಾಗಿ ಶಿವಸೇನಾ (ಠಾಕ್ರೆ ಬಣ) ನಾಯಕ, ಸಂಸದ ಸಂಜಯ್ ರಾವುತ್ ಮಾತನಾಡಿದ್ದು, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರದಲ್ಲಿ ಏಕನಾಥ ಶಿಂಧೆ ಸಚಿವರಾಗಿದ್ದಾಗ ಮತ್ತು ಚಂದ್ರಕಾಂತ ಪಾಟೀಲ ಅವರು ಸಚಿವರಾಗಿದ್ದಾಗ ಗಡಿ ಭಾಗದ ವಿಶೇಷ ಉಸ್ತುವಾರಿಯನ್ನು ಹೊಂದಿದ್ದರು. ಆದರೆ ಏಕನಾಥ ಶಿಂಧೆ ಬೆಳಗಾವಿಗೆ ಹೋಗಲೇ ಇಲ್ಲ. ಆದರೆ, ನಾನು ಅಲ್ಲಿಗೆ ಹೋಗಿದ್ದೆ. ಅಲ್ಲಿ ನನ್ನನ್ನು ಬಂಧಿಸಲಾಯಿತು. ನಮ್ಮ ಸರ್ಕಾರದ ಅವಧಿಯಲ್ಲಿ ಆಗಾಗ ಅಲ್ಲಿಗೆ ಹೋಗುತ್ತಿದ್ದೆ. ನಂತರ ನನ್ನನ್ನು ಬಂಧಿಸಿ ನನ್ನ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಯಿತು. ಆದರೆ ನಾನು ಹೆದರಲಿಲ್ಲ ಎಂದು ರಾವುತ್ ಹೇಳಿದ್ದಾರೆ.

ಅಲ್ಲಿಗೆ  ಹೋದರೆ ಪೊಲೀಸರು ಬಂಧಿಸುತ್ತಾರೆ. ಅಷ್ಟೇ ಅಲ್ಲದೆ, ಪೊಲೀಸರ ಲಾಠಿ ಏಟು ತಿನ್ನಬೇಕಾಗುತ್ತದೆ. ಹಾಗಾಗಿ ಅವರು ಅಲ್ಲಿಗೆ ಹೋಗಲಿಲ್ಲ. ಬಂಧನ ಭೀತಿಯಿಂದ ಅಲ್ಲಿಗೆ ಹೋಗಿಲ್ಲ ಎಂದು ಶಿಂಧೆ ವಿರುದ್ಧ ಸಂಜಯ್ ರಾವುತ್ ವಾಗ್ದಾಳಿ ನಡೆಸಿದ್ದಾರೆ.

ಶಿಂಧೆ ಹೇಳಿಕೆಯು ಈಗಾಗಲೇ ಬೆಳಗಾವಿಯಲ್ಲಿ ಉದ್ಧಟತನ ತೋರುತ್ತಿರುವ ಎಂಇಎಸ್ ಪುಂಡರ ಮೇಲೆ ಪ್ರಬಾವ ಬೀರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಮಹಾಮೇಳಾವಕ್ಕೆ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಬೆಳಗಾವಿಯ ಸಂಭಾಜಿ ಮಹಾರಾಜ್ ಚೌಕ್‌ನಲ್ಲಿ ಸಭೆ ಸೇರಿ ಪ್ರತಿಭಟನೆ ನಡೆಸುವುದಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ ಎಚ್ಚರಿಕೆ ನೀಡಿದ್ದರಿಂದ ಕರ್ನಾಟಕ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಸಂಭಾಜಿ ಮಹಾರಾಜ ಚೌಕದಲ್ಲಿ ಕರ್ನಾಟಕ ಪೊಲೀಸರ ದೊಡ್ಡ ತುಕಡಿಯನ್ನು ನಿಯೋಜಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ 100 ಕ್ಕೂ ಹೆಚ್ಚು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಮತ್ತೊಂದೆಡೆ, ಸಂಭಾಜಿ ವೃತ್ತಕ್ಕೆ ಬಂದ ಮಹಾರಾಷ್ಟ್ರ ಏಕೀಕರಣ ಸಮಿತಿಯ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು