LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

 ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸೋಲಿಗೆ ರಾಹುಲ್ ಗಾಂಧಿಯ 'ಮೂರು ಪ್ರಮಾದ' ಕಾರಣ; ಮೈತ್ರಿಪಕ್ಷಗಳ ದೂಷಣೆ

ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ (MVA) ಸೋಲು ವಿರೋಧ ಪಕ್ಷಗಳ INDIA ಮೈತ್ರಿಕೂಟದಲ್ಲಿ ಒಡಕಿಗೆ ಕಾರಣವಾಗುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆದಿದ್ದ ಸಭೆಯಲ್ಲಿ ಇದು ಸ್ಪಷ್ಟವಾಗಿ ಗೋಚರಿಸಿದೆ. ಈ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಪಾಲ್ಗೊಂಡಿರಲಿಲ್ಲ.

ಕೋಲ್ಕತ್ತಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತಮ್ಮ ಪಕ್ಷದ ನಾಯಕರು ನಿರತರಾಗಿದ್ದರು ಎಂದು ಟಿಎಂಸಿ ಹೇಳಿದೆ. ಆದರೆ ಟಿಎಂಸಿಗೆ ಸಂಸತ್ತು ಅಧಿವೇಶನದ ಮೊದಲ ದಿನದ ಅರಿವಿತ್ತು ಮತ್ತು ಆದ್ದರಿಂದಲೇ ಅವರು ಗೈರು ಹಾಜರಾಗಿರುವುದಾಗಿ ತಿಳಿದುಬಂದಿದೆ.

ಪಶ್ಚಿಮ ಬಂಗಾಳದಲ್ಲಿ ಇತ್ತೀಚಿಗೆ ನಡೆದ ಉಪ ಚುನಾವಣೆಯಲ್ಲಿ ಎಲ್ಲಾ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಟಿಎಂಸಿ ಗೆದ್ದಿದೆ. ಬಿಜೆಪಿ ಹೊರತುಪಡಿಸಿ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಹಾಗೂ ಸಿಪಿಎಂ ಪಕ್ಷಗಳನ್ನು ಎದುರಿಸಿದ್ದೇವೆ. ಇಂಡಿಯಾ ಬಣದ ಯಾವುದೇ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ ಎಂದು ಟಿಎಂಸಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಆದರೆ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು INDIA ಬಣದ ನಾಯಕಿಯಾಗಿ ಮಾಡಬೇಕೆಂಬ ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ ಅವರ ಹೇಳಿಕೆ ಗಂಭೀರವಾದ ತಿರುವು ಪಡೆದುಕೊಂಡಿದೆ.

ರಾಹುಲ್ ಗಾಂಧಿಯ ಪ್ರಮುಖ ಮೂರು ತಪ್ಪುಗಳು:

ವೀರ ಸಾವರ್ಕರ್ ವಿರುದ್ಧ ರಾಹುಲ್ ದಾಳಿ: ಇದು ಶಿವಸೇನಾ UBT ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (NCP) ಬಣದ ಮುಖ್ಯಸ್ಥ ಶರದ್ ಪವಾರ್ ಇಬ್ಬರಿಗೂ ಸಮಸ್ಯೆಯಾಗಿತ್ತು. ಇದು ಚುನಾವಣೆಯಲ್ಲಿ ತಮಗೆ ನೋವುಂಟು ಮಾಡಿದೆ ಎಂದು ಅವರು ಈಗ ಭಾವಿಸಿದ್ದಾರೆ. ' ಬಿಜೆಪಿಗೆ ಬಾಟೋಗೆ ತೋ ಕಟೋಗೆ ಘೋಷಣೆ ನೆರವಾಯಿತು. ಆದರೆ ರಾಹುಲ್ ಗಾಂಧಿ ಅದನ್ನು ಗಮನಿಸಲಿಲ್ಲ. ಅದರಿಂದ ಸಮಸ್ಯೆಯಾಗಬಹುದು ಎಂಬ ಎಚ್ಚರಿಕೆಯ ಹೊರತಾಗಿಯೂ ಸಾರ್ವಕರ್ ವಿರುದ್ಧ ದಾಳಿ ಮುಂದುವರೆಸಿದರು.

ಜಾತಿ ಸಮೀಕ್ಷೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ಕೊನೆಗೊಳಿಸುತ್ತೇವೆ ಎಂಬ ಬಿಜೆಪಿ ದಾಳಿಗೆ ಕೌಂಟರ್ ಕೊಡಲು ಕಾಂಗ್ರೆಸ್‌ಗೆ ಸಾಧ್ಯವಾಗಲಿಲ್ಲ ಎಂದು ಮಿತ್ರಪಕ್ಷಗಳಲ್ಲಿ ಹಲವರು ಭಾವಿಸಿದ್ದಾರೆ. ಇದು ಚುನಾವಣೆ ನಡೆಯಲಿರುವ ಇತರ ರಾಜ್ಯಗಳಲ್ಲಿ ಮಿತ್ರಪಕ್ಷಗಳಾದ ಟಿಎಂಸಿ, ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಆಮ್ ಆದ್ಮಿ ಪಾರ್ಟಿ (ಎಎಪಿ) ಮೇಲೂ ಪರಿಣಾಮ ಬೀರಲಿದೆ.

ಪ್ರಧಾನಿ ಮೋದಿ ಕ್ರೋನಿ ಕ್ಯಾಪಿಟಲಿಸಂನಲ್ಲಿ ಭಾಗಿ ಕುರಿತ ದಾಳಿ: ಇದು ಕೆಲಸ ಮಾಡುವುದಿಲ್ಲ, ಇದನ್ನು ಹೆಚ್ಚಿಗೆ ಹೇಳಬೇಡಿ ಎಂದು ಅನೇಕ ಮೈತ್ರಿ ಪಕ್ಷಗಳ ನಾಯಕರು ಕೇಳಿಕೊಂಡರೂ ರಾಹುಲ್ ಕೇಳಿರಲಿಲ್ಲವಂತೆ. ಸಂವಿಧಾನ ಅಪಾಯದಲ್ಲಿದೆ ಎಂಬುದರ ವಿಚಾರದ ಕಡೆಗೆ ಗಮನಹರಿಸಿ ಪ್ರಚಾರ ನಡೆಸುವಂತೆ ಗಾಂಧಿ ಗುಂಪಿನ ಕೆಲವರು ಸಲಹೆ ನೀಡಿದ್ದರಂತೆ ಆದರೆ, ಆ ಎಲ್ಲಾ ಸಲಹೆಗಳನ್ನು ನಿರಾಕರಿಸಿ, ಕ್ರೋನಿ ಕ್ಯಾಪಿಟಲಿಸಂ ಬಗ್ಗೆ ಹೆಚ್ಚೆಚ್ಚು ಮಾತನಾಡುತ್ತಿದ್ದರಂತೆ.

ಅನೇಕರು ಇದನ್ನು ಮೊಂಡುತನ ಎಂದು ಭಾವಿಸಿದ್ದು, ಈ ಎಲ್ಲಾ ಕಾರಣಗಳಿಂದ ಮಹಾರಾಷ್ಟ್ರ ಚುನಾವಣೆಯಲ್ಲಿ ಸೋಲುವುದಕ್ಕೆ ಕಾರಣವಾಯಿತು ಎಂದು INDIA ಮೈತ್ರಿಪಕ್ಷಗಳ ನಾಯಕರು ದೋಷಿಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು