LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನ: ಸದಸ್ಯರಾಗಿ ಸಿಎಂ, ಡಿಸಿಎಂಗಳ ಪ್ರಮಾಣ ವಚನ

ಮುಂಬೈ: ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ನಂತರ ಮಹಾರಾಷ್ಟ್ರ ವಿಧಾನಸಭೆಯ ಮೂರು ದಿನಗಳ ವಿಶೇಷ ಅಧಿವೇಶನ ಕರೆಯಲಾಗಿದ್ದು ಅದರ ಮೊದಲ ದಿನವಾದ ಇಂದು ಶನಿವಾರ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಸಹ ಮಹಾರಾಷ್ಟ್ರ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಬೆಳಗ್ಗೆ 11 ಗಂಟೆಗೆ ಸದನದ ಕಲಾಪ ಆರಂಭವಾದ ಕೂಡಲೇ ಹಂಗಾಮಿ ಸ್ಪೀಕರ್ ಕಾಳಿದಾಸ್ ಕೊಲಂಬ್ಕರ್ ಅವರು ಮೂವರು ನಾಯಕರಿಗೆ ಶಾಸಕರಾಗಿ ಪ್ರಮಾಣ ವಚನ ಬೋಧಿಸಿದರು. ಹೊಸದಾಗಿ ಆಯ್ಕೆಯಾದ 287 ಶಾಸಕರಿಗೆ ಹಂಗಾಮಿ ಸ್ಪೀಕರ್ ಪ್ರಮಾಣ ವಚನ ಬೋಧಿಸಿದ್ದಾರೆ. ಈ ಮಧ್ಯೆ, ಶಿವಸೇನೆ (UBT) ನಾಯಕ ಆದಿತ್ಯ ಠಾಕ್ರೆ ಅವರು ಇವಿಎಂಗಳ ದುರ್ಬಳಕೆ ಮಾಡಲಾಗಿ ಎಂದು ಪ್ರತಿಭಟಿಸಿ ವಿಧಾನಸಭೆ ಅಧಿವೇಶನದ ಮೊದಲ ದಿನ ಪ್ರತಿಪಕ್ಷಗಳು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸುವುದಿಲ್ಲ ಎಂದು ಘೋಷಿಸಿ ಕಲಾಪ ಬಹಿಷ್ಕರಿಸಿದರು.

ಇಂದು ನಮ್ಮ (ಶಿವಸೇನೆ ಯುಬಿಟಿ) ಶಾಸಕರು ಪ್ರಮಾಣ ವಚನ ಸ್ವೀಕರಿಸುವುದಿಲ್ಲ ಈ ಬಾರಿಯ ಚುನಾವಣೆ ಗೆಲುವನ್ನು ಜನರು ಸಂತೋಷದಿಂದ ಜಯ ಎಂದು ಆಚರಿಸಲಿಲ್ಲ, ನಮಗೆ ವಿದ್ಯುನ್ಮಾನ ಮತಯಂತ್ರ ಬಗ್ಗೆ ಅನುಮಾನವಿದೆ ಎಂದು ಠಾಕ್ರೆ ಹೇಳಿದರು.

ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರು ಅಸೆಂಬ್ಲಿ ಚುನಾವಣಾ ಫಲಿತಾಂಶಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ, ಇವಿಎಂನ್ನು ಆಡಳಿತ ಪಕ್ಷ ದುರ್ಬಳಕೆ ಮಾಡಿಕೊಂಡಿದೆ ಎಂದು ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಪ್ರತಿಪಕ್ಷಗಳು ಇಂದು ಬಹಿಷ್ಕರಿಸಿದವು.

ನವೆಂಬರ್ 20 ರಂದು ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳನ್ನು ನವೆಂಬರ್ 23 ರಂದು ಘೋಷಿಸಲಾಯಿತು, ಇದರಲ್ಲಿ ಭಾರತೀಯ ಜನತಾ ಪಕ್ಷ (BJP), ಶಿವಸೇನೆ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ನೇತೃತ್ವದ (NCP) ಮಹಾಯುತಿ ಮೈತ್ರಿಕೂಟವು 288 ವಿಧಾನಸಭಾ ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗೆಲ್ಲುವ ಮೂಲಕ ಅದ್ಭುತ ಜಯ ಕಂಡಿದೆ.

ಮೊನ್ನೆ ಡಿಸೆಂಬರ್ 5 ರಂದು ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿ, ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು