LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಹಾ', ಜಾರ್ಖಂಡ್‍ನಲ್ಲಿ ಮತದಾನ 15 ವಿಧಾನಸಭಾ, ಒಂದು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ

ದೆಹಲಿ: ಮಹಾರಾಷ್ಟ್ರದ ಎಲ್ಲ 288 ವಿಧಾನಸಭಾ ಕ್ಷೇತ್ರ ಮತ್ತು ಜಾರ್ಖಂಡ್ ವಿಧಾನಸಭೆಯ ಎರಡನೇ ಹಂತದ 38 ಕ್ಷೇತ್ರಗಳಲ್ಲೂ ಇಂದು ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಾಗೂ ನಾಂದೇಡ್ ಲೋಕಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಎಲ್ಲ ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ಆರಂಭಗೊಂಡಿದ್ದು, ಮತದಾರರು ಮತಗಟ್ಟೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಗಲಿದೆ.

ಮಹಾರಾಷ್ಟ್ರದ ಒಟ್ಟು 288 ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ4,136 ಹುರಿಯಾಳುಗಳು ಕಣದಲ್ಲಿದ್ದಾರೆ. ರಾಜ್ಯದ 9.70 ಕೋಟಿ ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಈ ಪೈಕಿ 5 ಕೋಟಿ ಪುರುಷ ಮತದಾರರು, 4.69 ಕೋಟಿ ಮಹಿಳಾ ಮತದಾರರು ಹಾಗೂ ಇತರೆ 6101 ಮತದಾರರಿದ್ದಾರೆ.

ಬಿಜೆಪಿ 148, ಕಾಂಗ್ರೆಸ್ 103, ಶಿವಸೇನೆ (ಉದ್ಧವ್ ಬಣ) 89, ಶಿವಸೇನೆ (ಶಿಂಧೆ ಬಣ) 80, ಎನ್‍ಸಿಪಿ (ಎಸ್‍ಪಿ ಬಣ) 87, ಎನ್‍ಸಿಪಿ (ಎಪಿ ಬಣ) 53 ಕ್ಷೇತ್ರಗಳಲ್ಲಿ ಸ್ಪರ್ಧಿಸಿವೆ.ಜಾರ್ಖಂಡ್ ವಿಧಾನಸಭೆಯ 38 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ರಾಜ್ಯದ 1.23 ಕೋಟಿ ಮತದಾರರು 55 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 528 ಹರಿಯಾಳುಗಳ ರಾಜಕೀಯ ಭವಿಷ್ಯ ನಿರ್ಧರಿಸಲಿದ್ದಾರೆ.

ಮಹಾರಾಷ್ಟ್ರದಲ್ಲಿ ಆಡಳಿತಾರೂಢ `ಮಹಾಯುತಿ' ಹಾಗೂ ವಿಪಕ್ಷ `ಮಹಾ ವಿಕಾಸ ಆಘಾಡಿ' ಮೈತ್ರಿಕೂಟಗಳ ನೇರ ಹಣಾಹಣಿಗೆ ಸಾಕ್ಷಿಯಾಗಿರುವ ವಿಧಾನಸಭಾ ಚುನಾವಣೆ ಅಂತಿಮ ಘಟ್ಟಕ್ಕೆ ತಲುಪಿದೆ. ನವೆಂಬರ್ 23ರಂದು ಮಹಾರಾಷ್ಟ್ರ, ಜಾರ್ಖಂಡ್ ಮತ್ತು 46 ವಿಧಾನಸಭಾ ಕ್ಷೇತ್ರಗಳ ಮತ್ತು ಎರಡು ಲೋಕಸಭಾ ಸ್ಥಾನಗಳ ಉಪಚುನಾವಣೆಯ ಮತ ಎಣಿಕೆ ನಡೆಯಲಿದೆ.

``ಎಲ್ಲರೂ ಬಂದು ಮತದಾನ ಮಾಡಿ, ಪ್ರಜಾಪ್ರಭುತ್ವವನ್ನು ಆಚರಿಸಿ'' ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಕರೆ ನೀಡಿದ್ದಾರೆ.
ಮಹಾರಾಷ್ಟ್ರದ ನಾಗಪುರದಲ್ಲಿ ಮತದಾನ ಮಾಡಿದ ಆರ್‍ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್, ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ``ಎಲ್ಲರೂ ಬಂದು ವೋಟ್ ಮಾಡುವಂತೆ ಮನವಿ ಮಾಡಿದರು. ಮತದಾನ ಎಲ್ಲರ ಹಕ್ಕು ಆಗಿದ್ದು, ಪ್ರತಿಯೊಬ್ಬರೂ ಮತ ಚಲಾಯಿಸಬೇಕು, ನಾನು ಮತದಾನ ಮಾಡುವುದಕ್ಕಾಗಿಯೇ ಉತ್ತರಾಂಚಲದಿಂದ ನಿನ್ನೆ ರಾತ್ರಿ ಬಂದಿರುವೆ'' ಎಂದರು.

ಮಹಾರಾಷ್ಟ್ರದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಭರಪೂರ ಉಚಿತ ಹಾಗೂ ಗ್ಯಾರಂಟಿ ಯೋಜನೆ ಘೋಷಣೆ ಮಾಡಿವೆ. ಮಹಿಳೆಯರಿಗೆ ಮಾಸಿಕ ಆರ್ಥಿಕ ನೆರವು, ನಿರುದ್ಯೋಗಿ ಯುವಕರಿಗೆ ಭತ್ಯೆ, ರೈತರ ಸಾಲ ಮನ್ನಾ, ಜಾತಿಗಣತಿ ವಿಷಯ ಸೇರಿದಂತೆ 25ಕ್ಕೂ ಹೆಚ್ಚು ಭರವಸೆಗಳ ಮಹಾಪೂರ ಹರಿಸಿವೆ. ಮತದಾರರ ಪ್ರಭುಗಳು ಯಾರ ಗ್ಯಾರಂಟಿಗೆ ಮತ ನೀಡುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು