LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಮಹಿಳಾ ಪೋಲಿಸ್ ಠಾಣೆ ಸ್ಥಳಾಂತರಿಸದಿರಲು ಕಾರ್ಯನಿರತ ಪತ್ರಕರ್ತರ ಸಂಘ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾಪೋಲಿಸ್ ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಲು ಪ್ರಯತ್ನ ನಡೆಯುತ್ತಿದ್ದು ಠಾಣೆಯನ್ನು ಸ್ಥಳಾಂತರ ಮಾಡದಿರಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಸದಸ್ಯರು ದೊಡ್ಡಬಳ್ಳಾಪುರ ಉಪವಿಭಾಗದ ಡಿ.ವೈ ಎಸ್ ಪಿ ರವಿ ರವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್ ತಾಲ್ಲೂಕಿನಲ್ಲಿ ದಿನೇ ದಿನೇ ಕೌಟುಂಬಿಕ ಕಲಹಗಳು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಗಳು ಹೆಚ್ಚಾಗುತ್ತಿವೆ ಮಹಿಳಾ ಪೋಲಿಸ್ ಠಾಣೆ ದೊಡ್ಡಬಳ್ಳಾಪುರದಲ್ಲಿ ಇರುವುದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಹಾಗು ಮಹಿಳೆಯರಿಗೆ ಶ್ರೀರಕ್ಷೆಯಾಗಿದೆ ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರ ಮಾಡಿದರೆ ಸಾರ್ವಜನಿಕರಿಗೆ ಬೆಂಗಳೂರು ನಗರಕ್ಕೆ ತೆರಳಿ ದೂರು ದಾಖಲಿಸಲು ಅನಾನುಕೂಲ ವಾಗುವುದು.ಆದ್ದರಿಂದ ಮಹಿಳಾಪೋಲಿಸ್ ಠಾಣೆಯು ದೊಡ್ಡಬಳ್ಳಾಪುರದಲ್ಲೇ ಕಾರ್ಯ ನಿರ್ವಹಿಸುವುದು ಸೂಕ್ತ ಎಂದು ಗ್ರಹಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ಠಾಣೆಯನ್ನು ಸ್ಥಳಾಂತರ ಮಾಡದಂತೆ ಮನವಿ ಮಾಡಿದರು.

ನಂತರ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಅಧ್ಯಕ್ಷರ ಚಂದ್ರಶೇಖರ್.ಡಿ ಉಪ್ಪಾರ್ ದೊಡ್ಡಬಳ್ಳಾಪುರದಲ್ಲಿ ಆಗಬೇಕಿದ್ದ ಆರ್.ಟಿ.ಓ ಕಛೇರಿ, ಜಿಲ್ಲಾಪ್ರದಾನ ಅಂಚೆ ಕಛೇರಿ, ಕೆ.ಎಸ್.ಆರ್.ಟಿ.ಸಿ. ಬಸ್ಡಿಪೋ ಇನ್ನಿತರ ಕಛೇರಿಗಳು ಪಕ್ಕದ ತಾಲ್ಲೂಕುಗಳ ಪಾಲಾಗಿದೆ, ಸಾರ್ವಜನಿಕ ಹಿತಾಸಕ್ತಿ ಯಿಂದ ಸಾರ್ವಜನಿಕರ ಅನುಕೂಲ ಕ್ಕಾಗಿ ಮಹಿಳಾ ಪೋಲಿಸ್ ಠಾಣೆ ಸ್ಥಳಾಂತರ ಗೊಳಿಸುವ ನಡೆ ಸರಿಯಲ್ಲ ಎಂದರು. ಮಹಿಳಾ ಠಾಣೆಗೆ ಸ್ವಂತ ಕಟ್ಟಡಕ್ಕೆ ಅಗತ್ಯ ವಿರುವ ಸರ್ಕಾರಿ ಜಮೀನುಗಳು ನಗರದ ಹಲವಾರುಕಡೆ ಲಭ್ಯ
ವಿದ್ದು ಇಲಾಖೆಯ ಮುಖ್ಯಸ್ಥರು ಸೂಕ್ತ ಸ್ಥಳವನ್ನು ಗುರುತಿಸಿ ಸ್ವಂತ ಕಟ್ಟಡವನ್ನು ನಿರ್ಮಿಸಿ ಮಹಿಳಾ ಠಾಣೆಯನ್ನು ಶಾಶ್ವತವಾಗಿ ದೊಡ್ಡಬಳ್ಳಾಪುರ ದಲ್ಲೇ ಉಳಿಸುವಂತೆ ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಡಿ.ವೈ.ಎಸ್. ಪಿ.ರವಿ ರವರು ಮಹಿಳಾ ಪೋಲೀಸ್ ಠಾಣೆ ಸ್ಥಳಾಂತರ ವಿಚಾರವು ಮೌಖಿಕವಾಗಿ ತಿಳಿಸಿದ್ದು.ಮನವಿಯನ್ನು ಮೇಲಧಿಕಾರಿಗಳಿಗೆ ರವಾನೆ ಮಾಡಿ ಠಾಣೆ ಉಳಿಸಲು ಸಹಕರಿ ಸುವ ಭರವಸೆ ನೀಡಿದರು. ಈ ವೇಳೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಕೊತ್ತೂರಪ್ಪ, ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ (ನೆಲ್ಲುಗುದಿಗೆ) ಪ್ರದೀಪ್, ಮಂಜನಾಥ್, ಮನುಕುಮಾರ್, ಗಂಗ ರಾಜು, ರಮೇಶ್ ಬಾಬು, ಶಿವರಾಜ ನೇಸರ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು