LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಾಘ ಪೂರ್ಣಿಮಾ ಹಿನ್ನೆಲೆ ತ್ರಿವೇಣಿ ಸಂಗಮದಲ್ಲಿ ಭಕ್ತ ಸಾಗರ

ಲಕ್ನೋ: ಮಹಾಕುಂಭ ಮೇಳದಲ್ಲಿ ಮಾಘಿ ಪೂರ್ಣಿಮೆ ನಿಮಿತ್ತ ಇಂದು ಪುಣ್ಯ ಸ್ನಾನ ನಡೆಯುತ್ತಿದ್ದು, ಬೆಳಿಗ್ಗೆ 6 ಗಂಟೆಯವರೆಗೆ ತ್ರಿವೇಣಿ ಸಂಗಮದಲ್ಲಿ 73 ಲಕ್ಷಕ್ಕೂ ಹೆಚ್ಚು ಜನರು ಪುಣ್ಯ ಸ್ನಾನ ಮಾಡಿದ್ದಾರೆ.ಬೆಳಗಿನ ಜಾವದಿಂದಲೇ ಪುಣ್ಯ ಸ್ನಾನ ಆರಂಭವಾಗಿದ್ದು, ತ್ರಿವೇಣಿ ಸಂಗಮದಲ್ಲಿ ಭಕ್ತ ಸಾಗರವೇ ಹರಿದು ಬರುತ್ತಿದೆ. ಈ ನಡುವೆ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಖನೌದಿಂದ ಅವಲೋಕನ ನಡೆಯುತ್ತಿದ್ದಾರೆ.

ಮುಖ್ಯಮಂತ್ರಿ ಆದಿತ್ಯನಾಥ್ ಅವರು ಲಖನೌದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿರುವ ವಾರ್ ರೂಮ್‍ನಲ್ಲಿ ಬೆಳಿಗ್ಗೆ 4 ಗಂಟೆಯಿಂದ ಮಾಘಿ ಪೂರ್ಣಿಮಾ ಸ್ನಾನವನ್ನು ವೀಕ್ಷಣೆ ಮಾಡುತ್ತಿದ್ದಾರೆ.ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್, ಪ್ರಧಾನ ಕಾರ್ಯದರ್ಶಿ (ಗೃಹ) ಸಂಜಯ್ ಪ್ರಸಾದ್ ಮತ್ತು ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿಗಳು ಕೂಡ ವಾರ್ ರೂಮ್‍ನಲ್ಲಿ ಮುಖ್ಯಮಂತ್ರಿಗಳಿಗ ಸಾಥ್ ನೀಡಿದ್ದಾರೆ.

ಭಕ್ತರ ಸಂಚಾರ ಸುಗಮವಾಗಿ ನಡೆಯುತ್ತಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಹಿಂದಿನ ವಸಂತ ಪಂಚಮಿಯ 'ಸ್ನಾನ'ದ ಸಮಯದಲ್ಲಿಯೂ ಸೂಕ್ತ ವ್ಯವಸ್ಥೆಗಳನ್ನು ಮಾಡಿದ್ದೆವು. ಈ ಬಾರಿ ವ್ಯವಸ್ಥೆಗಳನ್ನು ಮತ್ತಷ್ಟು ಹೆಚ್ಚಿಸಲಾಗಿದೆ ಎಂದು ಎಸ್‍ಎಸ್‍ಪಿ ರಾಜೇಶ್ ದ್ವಿವೇದಿ ಹೇಳಿದ್ದಾರೆ.
ಏತನ್ಮಧ್ಯೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಜನತೆಗೆ ಮಾಫಿ ಪೂರ್ಣಿಮೆ ದಿನದ ಶುಭಾಶಯಗಳನ್ನು ಕೋರಿದ್ದಾರೆ.

ಪ್ರಯಾಗರಾಜ್‍ನ ಮಹಾ ಕುಂಭ-2025 ರಲ್ಲಿ ಪವಿತ್ರ ತ್ರಿವೇಣಿಯಲ್ಲಿ ಪವಿತ್ರ ಸ್ನಾನಕ್ಕೆ ಬಂದಿರುವ ಎಲ್ಲಾ ಸಂತರು, ಧಾರ್ಮಿಕ ಮುಖಂಡರು, ಕಲ್ಪವಾಸಿಗಳು ಮತ್ತು ಭಕ್ತರಿಗೆ ಶುಭಾಶಯಗಳು. ಹರಿಯ ಕೃಪೆಯಿಂದ ಎಲ್ಲರ ಜೀವನವು ಸಂತೋಷ, ಸಮೃದ್ಧಿ ಮತ್ತು ಅದೃಷ್ಟದಿಂದ ತುಂಬಿರಲಿ. ಮಾತೆ ಗಂಗಾ, ಯಮುನಾ ಮತ್ತು ಸರಸ್ವತಿ ಎಲ್ಲರ ಆಶಯಗಳನ್ನು ಈಡೇರಿಸಲಿ ಎಂದು ಹೇಳಿದ್ದಾರೆ.

ಕುಂಭ ಮೇಳದ ಒಟ್ಟು 6 ಪುಣ್ಯ ಸ್ನಾನಗಳ ಪೈಕಿ ಮಾಘಿ ಪೂರ್ಣಿಮೆಯಂದು ನಡೆಯುವ ಪುಣ್ಯ ಸ್ನಾನ 5ನೆಯದ್ದಾಗಿದೆ. 6ನೇ ಪುಣ್ಯಸ್ನಾನ ಫೆ.26ರ ಮಹಾಶಿವರಾತ್ರಿಯಂದು ನಡೆಯಲಿದೆ.
ತ್ರಿವೇಣಿ ಸಂಗಮಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಉತ್ತರಪ್ರದೇಶ ಸರ್ಕಾರ ವಿಶೇಷ ಕ್ರಮಗಳನ್ನು ಕೈಗೊಂಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು