LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಮಾಜಿ ಎಂಎಲ್​ಸಿ ಪಟೇಲ್ ಶಿವರಾಂ ನಿಧನ

ಹಾಸನ: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಆಪ್ತರಾಗಿದ್ದ, ಹಾಸನ ಜಿಲ್ಲೆಯ ಪ್ರಭಾವಿ ಜೆಡಿಎಸ್ ಮುಖಂಡರಾಗಿದ್ದ, ಮಾಜಿ ಎಂಎಲ್​ಸಿ ಪಟೇಲ್ ಶಿವರಾಂ (75) ಗುರುವಾರ ಬೆಳಗ್ಗೆ ನಿಧನರಾರದರು. ಹಾಸನ ನಗರದ ಹೌಸಿಂಗ್ ಬೋರ್ಡ್‌‌ ನಿವಾಸದಲ್ಲಿ ಪಟೇಲ್ ಅವರು ನಿಧನ ಹೊಂದಿದರು. ಅವರು ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಪಟೇಲ್ ಶಿವರಾಂ 2010-2016ರವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು. ಅಪೆಕ್ಸ್ ಬ್ಯಾಂಕ್ ನಿರ್ದೇಶಕ, ಹೆಚ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ನಿರ್ದೇಶಕ, ಹಾಸನ ಹಾಲು ಒಕ್ಕೂಟದ ನಿರ್ದೇಶಕರಾಗಿ ಪಟೇಲ್ ಶಿವರಾಂ ಕಾರ್ಯನಿರ್ವಹಿಸಿದ್ದರು.

ಸುಮಾರು 4 ದಶಕಗಳ ಕಾಲ ಜೆಡಿಎಸ್​​ನಲ್ಲಿ ಸಕ್ರಿಯ ರಾಜಕಾರಣದಲ್ಲಿದ್ದ ಪಟೇಲ್ ಶಿವರಾಂ ನಿಧನಕ್ಕೆ ಜೆಡಿಎಸ್ ನಾಯಕರು ಸಂತಾಪ ಸೂಚಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST