LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಮಾಜಿ ಕಾಂಗ್ರೆಸ್ ಶಾಸಕ ಆರ್ ನಾರಾಯಣ್ ನಿಧನ

ತುಮಕೂರು: ಜಿಲ್ಲೆಯ ಬೆಳ್ಳಾವಿ ಕ್ಷೇತ್ರದ ಕಾಂಗ್ರೆಸ್‌ನ ಮಾಜಿ ಶಾಸಕ ಆರ್ ನಾರಾಯಣ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 81 ವರ್ಷದ ಆರ್.ನಾರಾಯಣ ಅವರು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ.

ಕಾಂಗ್ರೆಸ್‌ನ ಟಿಕೆಟ್‌ನಲ್ಲಿ ಸ್ಪರ್ಧಿಸಿ ಬೆಳ್ಳಾವಿ ಕ್ಷೇತ್ರವನ್ನು ಒಟ್ಟು ಮೂರು ಬಾರಿ ಪ್ರತಿನಿಧಿಸಿದ್ದರು. ಇತ್ತೀಚೆಗೆ ಸಾವನ್ನಪ್ಪಿದ ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರ ಅಧಿಕಾರವಧಿಯಲ್ಲಿ ನಾರಾಯಣ ಅವರು ಹೌಸಿಂಗ್ ಬೋರ್ಡ್ ಚೇರ್ಮನ್ ಆಗಿದ್ದರು. ನಾರಾಯಣ ಅವರ ಅಂತಿಮ ದರ್ಶನಕ್ಕೆ ಗಾಂಧಿನಗರದ ನಿವಾಸದಲ್ಲಿ ಅವಕಾಶ ಮಾಡಿಕೊಡಲಾಗಿದೆ. ನಾರಾಯಣ್ ಅವಿವಾಹಿತರಾಗಿದ್ದು, ಒಬ್ಬಂಟಿಯಾಗಿ ನಗರದ ಸಿಎಸ್‌ಐ ಲೇಔಟ್‌ನಲ್ಲಿರುವ ಮನೆಯಲ್ಲಿ ವಾಸವಿದ್ದರು.

ಕಾಂಗ್ರೆಸ್ ಮಾಜಿ ಶಾಸಕರಾದ ಆರ್.ನಾರಾಯಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಆರ್.ನಾರಾಯಣ ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ಕೆಂಗಲ್ ಹನುಮಂತಯ್ಯ ಅವರ ಅನುಯಾಯಿಯಾಗಿ ಕಾಂಗ್ರೆಸ್ ಪಕ್ಷದ ಭದ್ರ ಬುನಾದಿಗೆ ಶ್ರಮಿಸಿದವರು. ತಮ್ಮ ಅಚ್ಚುಕಟ್ಟುತನದಿಂದ ಕೂಡಿದ ಕೆಲಸಕ್ಕೆ ಹೆಸರಾಗಿದ್ದವರು. ತುಮಕೂರು ಜಿಲ್ಲೆಯಲ್ಲಿ ಪಕ್ಷದ ಪ್ರಮುಖ ನಾಯಕರಾಗಿದ್ದರು. ಕಾಂಗ್ರೆಸ್ ಪಕ್ಷದ ಏಳಿಗೆಗೆ ಇವರ ಕೊಡುಗೆ ಅಪಾರ. ಸರಳ, ಸಜ್ಜನಿಕೆಯ ವ್ಯಕ್ತಿತ್ವ ದೂರವಾಗಿರುವುದು ನೋವಿನ ಸಂಗತಿ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು